ಮೋದಿ ಉಪನಾಮ ಮಾನಹಾನಿ ಪ್ರಕರಣ: ಗುಜರಾತ್‌ ಹೈಕೋರ್ಟ್‌ ಮೆಟ್ಟಿಲೇರಿದ ರಾಹುಲ್‌ ಗಾಂಧಿ

ನವದೆಹಲಿ: ಕ್ರಿಮಿನಲ್‌ ಮಾನಹಾನಿ ಪ್ರಕರಣದಲ್ಲಿ ತಮ್ಮನ್ನು ದೋಷಿ ಎಂದು ಸೂರತ್‌ನ ಮಾಜಿಸ್ಟ್ರೇಟ್‌ ನ್ಯಾಯಾಲಯವು ನೀಡಿರುವ ತೀರ್ಪಿಗೆ ತಡೆ ಕೋರಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಈಗ ಗುಜರಾತ್‌ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ
ಸೂರತ್‌ನ ಸತ್ರ ನ್ಯಾಯಾಲಯದ ತೀರ್ಪು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲಾಗಿದ್ದು, ಹೈಕೋರ್ಟ್‌ನ ಏಕಸದಸ್ಯ ಪೀಠವು ಅರ್ಜಿ ವಿಚಾರಣೆ ನಡೆಸಲಿದೆ ಎಂದು ರಾಹುಲ್‌ ಗಾಂಧಿ ಪರ ವಕೀಲರಾದ ತರನುಮ್‌ ಚೀಮಾ ಅವರು ತಿಳಿಸಿದ್ದಾರೆ. ಮ್ಯಾಜಿಸ್ಟ್ರೇಟ್‌ ನ್ಯಾಯಾಲಯದ ಆದೇಶಕ್ಕೆ ತಡೆ ನೀಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸತ್ರ ನ್ಯಾಯಾಲಯವು ಏಪ್ರಿಲ್‌ 20ರಂದು ಅರ್ಜಿಯನ್ನು ವಜಾ ಮಾಡಿತ್ತು. ಈ ಹಿನ್ನೆಲೆಯಲ್ಲಿ ರಾಹುಲ್‌ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ.
ಎಲ್ಲಾ ಕಳ್ಳರ ಹೆಸರಿನಲ್ಲಿ ಮೋದಿ ಉಪನಾಮ ಯಾಕೆ ಇದೆ” ಎಂಬ ಹೇಳಿಕೆ ನೀಡಿದ್ದ ವಯನಾಡ ಸಂಸದ ರಾಹುಲ್‌ ಗಾಂಧಿ ಅವರ ವಿರುದ್ಧ ಹೂಡಲಾಗಿದ್ದ ಕ್ರಿಮಿನಲ್‌ ಮಾನಹಾನಿ ಪ್ರಕರಣದಲ್ಲಿ ಸೂರತ್‌ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯ ರಾಹುಲ್‌ ಅವರನ್ನು ದೋಷಿ ಎಂದು ತೀರ್ಪು ನೀಡಿತ್ತು ಹಾಗೂ ಎರಡು ವರ್ಷ ಶಿಕ್ಷೆ ವಿಧಿಸಿತ್ತು. ಪರಿಣಾಮವಾಗಿ ರಾಹುಲ್‌ ಗಾಂಧಿ ಅವರು ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಂಡಿದ್ದರು. 2019ರ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಕರ್ನಾಟಕದ ಕೋಲಾರದಲ್ಲಿ ಸಾರ್ವಜನಿಕ ಸಮಾವೇಶದಲ್ಲಿ ರಾಹುಲ್‌ ಗಾಂಧಿ ಅವರು ಪ್ರಧಾನಿ ಮೋದಿ ಅವರನ್ನು ಮೋದಿ, ಲಲಿತ್‌ ಮೋದಿ ಅವರಿಗೆ ಹೋಲಿಕೆ ಮಾಡಿ “ಎಲ್ಲಾ ಕಳ್ಳರ ಹೆಸರಿನಲ್ಲಿ ಮೋದಿ ಉಪನಾಮ ಯಾಕೆ ಇದೆ”ಎಂದು ಕೇಳಿದ್ದರು. ಇದನ್ನು ಪ್ರಶ್ನಿಸಿ ಬಿಜೆಪಿಯ ಪೂರ್ಣೇಶ ಮೋದಿ ಅವರು ಸೂರತ್‌ ನ್ಯಾಯಾಲಯದಲ್ಲಿ ಮಾನಹಾನಿ ಪ್ರಕರಣ ಹೂಡಿದ್ದರು.

ಪ್ರಮುಖ ಸುದ್ದಿ :-   ಚಲಿಸುವ ರೈಲಿನಲ್ಲೇ ಪತ್ನಿಗೆ ತ್ರಿವಳಿ ತಲಾಖ್ ನೀಡಿದ ವ್ಯಕ್ತಿ ; ಪತ್ನಿಗೆ ಥಳಿಸಿ ಪರಾರಿ...!

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement