ರಾಜ್ಯದ 20ಕ್ಕೂ ಅಧಿಕ ಜಿಲ್ಲೆಗಳಲ್ಲಿ 4-5 ದಿನ ಮಳೆ ಮುನ್ಸೂಚನೆ

ಬೆಂಗಳೂರು: ಕರ್ನಾಟಕದ ಹೆಚ್ಚಿನ ಜಿಲ್ಲೆಗಳಲ್ಲಿ ಏಪ್ರಿಲ್ 29ರ ವರೆಗೆ ಮಳೆ(Rain)ಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದ ಉತ್ತರ ಒಳನಾಡಿನ ಬೆಳಗಾವಿ, ಬಾಗಲಕೋಟೆ, ರಾಯಚೂರು, ಕೊಪ್ಪಳ, ಕಲಬುರಗಿ, ಯಾದಗಿರಿ, ಬೀದರ ಹಾಗೂ ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ತುಮಕೂರು, ರಾಮನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಸಾಮಾನ್ಯಕ್ಕಿಂತ ಹೆಚ್ಚು ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಭಾಗಶಃ ಮೋಡಕವಿದ ವಾತಾವರಣ ಇರಲಿದೆ. ಹಗುರ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಏಪ್ರಿಲ್‌ 26ರಿಂದ 29ರ ವರೆಗೆ ಹಗುರ ಮಳೆಯಾಗಲಿದೆ ಹಾಗೂ ಒಣ ಹವೆ ಮುಂದುವರಿಯಲಿದೆ ಎಂದು ಹೇಳಿದೆ.
ಕೆಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ನೀಡಲಾಗಿದೆ. ಅಲ್ಲದೆ ಕೆಲ ಜಿಲ್ಲೆಗಳಲ್ಲಿ ಬಿಸಿಲಿಗೆ ಸಹ ಮುನ್ನೆಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಯಚೂರಿನಲ್ಲಿ 40.0 ಡಿಗ್ರಿ ಸೆಲ್ಸಿಯಸ್​ ಅತಿ ಗರಿಷ್ಠ ಉಷ್ಣಾಂಶ ದಾಖಲಾಗಿದೆ.

ಪ್ರಮುಖ ಸುದ್ದಿ :-   ಬೇಡ್ತಿ, ಅಘನಾಶಿನಿ ನದಿ ತಿರುವು ಯೋಜನೆ ಕೈಬಿಡಿ ; ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್‌ ಜನಾಕ್ರೋಶ ಸಭೆ ; 11 ನಿರ್ಣಯ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement