ಕರ್ನಾಟಕ ಸೇರಿ ಅನೇಕ ರಾಜ್ಯಗಳಲ್ಲಿ 5 ದಿನ ಭಾರೀ ಮಳೆ ಮುನ್ಸೂಚನೆ

ನವದೆಹಲಿ: ತಮಿಳುನಾಡಿನ ಕರಾವಳಿಯಲ್ಲಿ ಹವಾಮಾನ ಬದಲಾವಣೆಯಿಂದಾಗಿ ಮುಂದಿನ ಐದು ದಿನ ಕರ್ನಾಟಕ ಸೇರಿ ಹಲವಾರು ರಾಜ್ಯಗಳಲ್ಲಿ ಮಳೆಯಾಗಲಿದೆ ಎಂದು ದೇಶದ ಕೇಂದ್ರ ಹವಾಮಾನ ಮುನ್ಸೂಚನೆ ಸಂಸ್ಥೆ ಭಾರತ ಹವಾಮಾನ ಇಲಾಖೆ (IMD) ಬುಧವಾರ ಮುನ್ಸೂಚನೆ ನೀಡಿದೆ.
ದೇಶದ ಮಧ್ಯ, ಪೂರ್ವ ಮತ್ತು ಪಶ್ಚಿಮ ಭಾಗಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ನಿರೀಕ್ಷೆಯಿದ್ದರೆ, ದಕ್ಷಿಣ ಮತ್ತು ಈಶಾನ್ಯ ಭಾಗಗಳಲ್ಲಿ ಕೆಲವು ರಾಜ್ಯಗಳಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದೆ ಎಂದು ಹೇಳಿದೆ.
ದಕ್ಷಿಣ ಭಾರತದ ಕರ್ನಾಟಕದ ಒಳನಾಡು, ಆಂಧ್ರಪ್ರದೇಶ, ತೆಲಂಗಾಣ, ತಮಿಳುನಾಡು, ಪುದುಚೇರಿ ಮತ್ತು ಕೇರಳದಲ್ಲಿ ಗುಡುಗು ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಏಪ್ರಿಲ್ 26 ರಿಂದ 30 ರವರೆಗೆ ಕೇರಳದ ಪ್ರತ್ಯೇಕ ಸ್ಥಳಗಳಲ್ಲಿ ಮತ್ತು 26 ಮತ್ತು 27 ರಂದು ಉತ್ತರ ಕರ್ನಾಟಕ, ತೆಲಂಗಾಣದಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಏಪ್ರಿಲ್ 27 ರಂದು ಆಂಧ್ರಪ್ರದೇಶದ ಕರಾವಳಿ ಮತ್ತು ಏಪ್ರಿಲ್ 29 ಮತ್ತು 30 ರಂದು ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಿದೆ.
ಅರುಣಾಚಲ ಪ್ರದೇಶ, ಅಸ್ಸಾಂ ಮತ್ತು ಮೇಘಾಲಯದ ಪ್ರತ್ಯೇಕ ಸ್ಥಳಗಳಲ್ಲಿ ಏಪ್ರಿಲ್ 28 ರಿಂದ 30 ರವರೆಗೆ ಮತ್ತು ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರಾದಲ್ಲಿ ಏಪ್ರಿಲ್ 29 ಮತ್ತು 30 ರಂದು ಭಾರಿ ಮಳೆಯಾಗಲಿದೆ ಎಂದು ಹವಾಮಾನ ಮುನ್ಸೂಚನೆ ನೀಡಿದೆ.ಮಧ್ಯ ಮಹಾರಾಷ್ಟ್ರ ಮತ್ತು ಮರಾಠಾವಾಡಾ ಹಾಗೂ ಗುಜರಾತಿನಲ್ಲಿ ಹಗುರವಾದ ಮಳೆಯಾಗುವ ನಿರೀಕ್ಷೆಯಿದೆ ಎಂದು ಹೇಳಿದೆ.

ಪ್ರಮುಖ ಸುದ್ದಿ :-   ಬೆಂಗಳೂರು ಸೇರಿ ರಾಜ್ಯದ ಈ ಜಿಲ್ಲೆಗಳಲ್ಲಿ ಮೇ 10ರ ವರೆಗೆ ಮಳೆ ಮುನ್ಸೂಚನೆ

 

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement