ಛತ್ತೀಸ್‌ಗಢದ ದಾಂತೇವಾಡದಲ್ಲಿ ಮಾವೋವಾದಿಗಳಿಂದ ವಾಹನ ಸ್ಫೋಟ : 10 ಪೊಲೀಸರು, ಚಾಲಕ ಸಾವು

ರಾಯ್ಪುರ: ಛತ್ತೀಸ್‌ಗಢದ ಬಸ್ತಾರ್ ಜಿಲ್ಲೆಯಲ್ಲಿ ಸುಧಾರಿತ ಸ್ಫೋಟಕ ಸಾಧನದಿಂದ (ಐಇಡಿ) ವಾಹನವನ್ನು ಸ್ಫೋಟಿಸಿದ ಪರಿಣಾಮ ಹತ್ತು ಪೊಲೀಸರು ಮತ್ತು ಚಾಲಕ ಬುಧವಾರ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಗುಪ್ತಚರ ಮಾಹಿತಿಯ ನಂತರ ಪ್ರಾರಂಭವಾದ ಮಾವೋವಾದಿ ವಿರೋಧಿ ಕಾರ್ಯಾಚರಣೆ ನಂತರ ಪೊಲೀಸರು ಹಿಂತಿರುಗುತ್ತಿದ್ದಾಗ ಈ ದುರ್ಘಟನೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ದಾಂತೇವಾಡದ ಅರ್ನಾಪುರ ಪ್ರದೇಶದಲ್ಲಿ ನಕ್ಸಲೀಯರು ಇದ್ದಾರೆ ಎಂಬ ಮಾಹಿತಿ ಪಡೆದ ನಂತರ ಜಿಲ್ಲಾ ಮೀಸಲು ಪಡೆ (ಡಿಆರ್‌ಜಿ)ಗೆ ಸೇರಿದ ಭದ್ರತಾ ಸಿಬ್ಬಂದಿ ಅಲ್ಲಿಗೆ ತೆರಳಿದ್ದರು.
ಅವರು ಆ ಪ್ರದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಯಲ್ಲಿದ್ದರು. ಆ ಪ್ರದೇಶದಿಂದ ಹಿಂತಿರುಗುತ್ತಿದ್ದಾಗ, ಡಿಆರ್‌ಜಿ (DRG) ಪಡೆಗಳ ವಾಹನವು ಮಾವೋವಾದಿಗಳ ಸುಧಾರಿತ ಸ್ಫೋಟಕ ಸಾಧನ (IED) ದಾಳಿಗೆ ಗುರಿಯಾಯಿತು.
ವಾಹನ ಹಿಂತಿರುಗುತ್ತಿದ್ದ ರಸ್ತೆಯಲ್ಲಿ ಸುಧಾರಿತ ಸ್ಫೋಟಕಗಳನ್ನು ಇರಿಸಲಾಗಿತ್ತು. ಈ ಐಇಡಿ ಸ್ಫೋಟದಲ್ಲಿ ಡಿಆರ್‌ಜಿ ಪಡೆಯ ಹತ್ತು ಸಿಬ್ಬಂದಿ ಹಾಗೂ ವಾಹನದ ಚಾಲಕ ಮೃತಪಟ್ಟಿದ್ದಾರೆ.
ನಕ್ಸಲರೆಂದು ಕರೆಯಲ್ಪಡುವ ಮಾವೋವಾದಿಗಳು ಆರು ದಶಕಗಳಿಂದ ಸರ್ಕಾರದ ವಿರುದ್ಧ ಸಶಸ್ತ್ರ ಬಂಡಾಯವನ್ನು ನಡೆಸಿದ್ದಾರೆ. ದೇಶದ ಆರ್ಥಿಕ ಉತ್ಕರ್ಷದಿಂದ ಹೊರಗುಳಿದಿರುವ ಬಡವರ ಪರವಾಗಿ ಅವರು ಹೋರಾಡುತ್ತಿದ್ದಾರೆ ಎಂದು ಅವರು ಹೇಳಿಕೊಳ್ಳುತ್ತಾರೆ.
1967 ರಿಂದ ದೇಶದ ಆಂತರಿಕ ಭದ್ರತೆಗೆ ದೊಡ್ಡ ಬೆದರಿಕೆ ಎಂದು ಪರಿಗಣಿಸಲ್ಪಟ್ಟ ನಕ್ಸಲರು ಮಧ್ಯ ಮತ್ತು ಪೂರ್ವ ಭಾರತದ ಭೂಪ್ರದೇಶದಲ್ಲಿ ಹರಡಿಕೊಂಡಿದ್ದಾರೆ ಮತ್ತು ಇದು “ಕೆಂಪು ಕಾರಿಡಾರ್” ಎಂದು ಕರೆಯಲ್ಪಡುತ್ತದೆ.

ಪ್ರಮುಖ ಸುದ್ದಿ :-   ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ನನ್ನ ಬಳಿ ಹಣವಿಲ್ಲ : ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement