ದೇಶದಲ್ಲಿ ಹೊಸದಾಗಿ 9,629 ಸೋಂಕು ಪತ್ತೆ, 29 ಮಂದಿ ಸಾವು

ನವದೆಹಲಿ: ಭಾರತದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ಕಳೆದ 24 ಗಂಟೆಗಳ ಅವಧಿಯಲ್ಲಿ 9,629 ಹೊಸ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.
ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ಅಂಕಿ ಅಂಶಗಳ ಪ್ರಕಾರ, ಸಕ್ರಿಯ ಪ್ರಕರಣಗಳ ಸಂಖ್ಯೆ 62,293ಕ್ಕೆ ತಲುಪಿದೆ. ಕೇರಳದಲ್ಲಿ 9, ದೆಹಲಿಯಲ್ಲಿ 6, ಮಹಾರಾಷ್ಟ್ರ ಮತ್ತು ರಾಜಸ್ಥಾನದಲ್ಲಿ ತಲಾ 3, ಹರಿಯಾಣ ಮತ್ತು ತಲಾ 2 ಮಂದಿ ಸೇರಿದಂತೆ ಕೋವಿಡ್ ನಿಂದ ಒಂದೇ ದಿನ 29 ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,49,16,736ಕ್ಕೆ ಏರಿಕೆಯಾಗಿದೆ. ಅಲ್ಲದೇ, ಕೋವಿಡ್ ನಿಂದ ಮೃತಪಟ್ಟವರ ಒಟ್ಟು ಸಂಖ್ಯೆ 5,31,398ಕ್ಕೆ ಏರಿಕೆಯಾಗಿದೆ. ಈ ನಡುವೆ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 4,43,23,045ಕ್ಕೆ ತಲುಪಿದೆ. ಭಾರತದಲ್ಲಿ ಒಂದೇ 1,89,087 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈವರೆಗೂ 92,56,86,127 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

 

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement