15000 ಪದವೀಧರ ಶಾಲಾ ಶಿಕ್ಷಕರ ನೇಮಕಾತಿ : ಆಯ್ಕೆಯಾದ ಅಭ್ಯರ್ಥಿಗಳಿಗೆ ಶಿಕ್ಷಣ ಇಲಾಖೆಯಿಂದ ಮಹತ್ವದ ಮಾಹಿತಿ

ಬೆಂಗಳೂರು: 15,000 ಪದವೀಧರ ಶಾಲಾ ಶಿಕ್ಷಕರ ನೇಮಕಾತಿ ಪರೀಕ್ಷೆಯ ನಂತರ 1:1 ಪ್ರಕಾರ ಈಗಾಗಲೇ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಈಗ ಅಭ್ಯರ್ಥಿಗಳಿಗೆ ಶಿಕ್ಷಣ ಇಲಾಖೆಯಿಂದ ಮಹತ್ವದ ಮಾಹಿತಿ ಬಿಡುಗಡೆ ಮಾಡಲಾಗಿದೆ.
ಪದವೀಧರ ಪ್ರಾಥಮಿಕ ಶಿಕ್ಷಕ-2022ರ ನೇಮಕಾತಿಗೆ ಸಂಬಂಧಿಸಿದಂತೆ ಅಭ್ಯರ್ಥಿಗಳ ಮೂಲ ದಾಖಲೆಗಳ ನೈಜತ್ವ ಪರಿಶೀಲನೆ ಕಾರ್ಯಕ್ಕೆ ಕ್ರಮ ಕೈಗೊಳ್ಳುವ ಕುರಿತು ಪೂರ್ವ ಸಿದ್ಧತೆ ಮಾಡಿಕೊಳ್ಳಲು ಸೂಚಿಸಲಾಗಿದೆ.
ಈ ಸಂಬಂಧ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರು ಪದವೀಧರ ಪ್ರಾಥಮಿಕ ಶಿಕ್ಷಕ-2022ರ ನೇಮಕಾತಿಗೆ ಸಂಬಂಧಿಸಿದಂತೆ ಮಾಹಿತಿ ಬಿಡುಗಡೆ ಮಾಡಿದ್ದು, ದಿನಾಂಕ 08-03-2023ರಂದು 1:1 ಅಂತಿಮ ಆಯ್ಕೆ ಪಟ್ಟಿಯನ್ನು ಇಲಾಖಾ ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗಿದೆ ಎಂದು ತಿಳಿಸಿದ್ದಾರೆ.
ಹೈಕೋರ್ಟ್ ಮಧ್ಯಂತರ ಆದೇಶದಂತೆ ಸರ್ಕಾರವು ದಿನಾಂಕ 01-02-2023ರ ಸುತ್ತೋಲೆಯ ಅನ್ವಯಿಸುವ ಕಲ್ಯಾಣ ಕರ್ನಾಟಕ ಜಿಲ್ಲೆಗಳಾದ ಕಲಬುರ್ಗಿ , ಬೀದರ, ಬಳ್ಳಾರಿ, ವಿಜಯನಗರ, ರಾಯಚೂರು, ಯಾದಗಿರಿ, ಕೊಪ್ಪಳ ಜಿಲ್ಲೆಗಳು ಮತ್ತು ಬಿಬಿಎಂಪಿ ವ್ಯಾಪ್ತಿಯ ಬೆಂಗಳೂರು ದಕ್ಷಿಣ ಮತ್ತು ಬೆಂಗಳೂರು ಉತ್ತರ ಜಿಲ್ಲೆಗಳನ್ನು ಹೊರತುಪಡಿಸಿ, ಈ ಸುತ್ತೋಲೆಯು ಅನ್ವಯಿಸದ 26 ಜಿಲ್ಲೆಗಳಲ್ಲಿ 1:1 ಅಂತಿಮ ಆಯ್ಕೆ ಪಟ್ಟಿಯಲ್ಲಿರುವ ಆಯ್ಕೆಯಾಗಿರುವ ಎಲ್ಲಾ ಅಭ್ಯರ್ಥಿಗಳ ಮೂಲ ದಾಖಲೆಗಳ ನೈಜತ್ವ ಪರಿಶೀಲನೆ ಕಾರ್ಯಕ್ಕೆ ಕ್ರಮ ಕೈಗೊಳ್ಳಲು ಪೂರ್ವ ಸಿದ್ಧತೆ ಮಾಡಿಕೊಳ್ಳಲು ಸೂಚಿಸಲಾಗಿದೆ.
ವೈದ್ಯಕೀಯ ಪ್ರಮಾಣ ಪತ್ರ
ಪೊಲೀಸ್ ಪರಿಶೀಲನಾ ಪ್ರಮಾಣ ಪತ್ರ
ಸಿಂಧುತ್ವ ಪ್ರಮಾಣಪತ್ರ
ಗ್ರಾಮೀಣ ಪ್ರಮಾಣ ಪತ್ರ
ಕನ್ನಡ ಮಾಧ್ಯಮ ಪ್ರಮಾಣ ಪತ್ರ
ಮಾಜಿ ಸೈನಿಕರ ಪ್ರಮಾಣ ಪತ್ರ
ಅಂಗವಿಕಲ ಪ್ರಮಾಣ ಪತ್ರ
ಯೋಜನಾ ನಿರಾಶ್ರಿತರ ಪ್ರಮಾಣ ಪತ್ರ
ಸಂಬಂಧಿಸಿದ ಎಲ್ಲಾ ಮೂಲ ಅಂಕಪಟ್ಟಿಗಳು ಮತ್ತು ಪ್ರಮಾಣ ಪತ್ರಗಳು
ಸೇವಾನಿರತ ಶಿಕ್ಷಕರು ಸಲ್ಲಿಸಿರುವ ನಿರಾಪೇಕ್ಷಣ ಪ್ರಮಾಣ ಪತ್ರ.
ಹೀಗೆ ಈ ಮೇಲ್ಕಂಡ ಪ್ರಮಾಣ ಪತ್ರಗಳ ನೈಜತ್ವವನ್ನು ಪರಿಶೀಲನೆಗೆ ಒಳಪಡಿಸಲು, ಸಂಬಂಧ ಪಟ್ಟ ಸಕ್ಷಮ ಪ್ರಾಧಿಕಾರಿಗಳಿಗೆ ಸಂಬಂಧಿಸಿದ ಪ್ರಮಾಣಪತ್ರಗಳನ್ನು ಕಾಲಬದ್ಧ ಮಿತಿಯಲ್ಲಿ ಕಳುಹಿಸಿ ಕ್ರಮಕೈಗೊಳ್ಳುವಂತೆ ತಿಳಿಸಿದ್ದಾರೆ.

ಪ್ರಮುಖ ಸುದ್ದಿ :-   ಪ್ರಧಾನಿಯವರು ಪತ್ರಿಕಾಗೋಷ್ಠಿಗಳನ್ನು ಏಕೆ ನಡೆಸುವುದಿಲ್ಲ? : ಹೆಚ್ಚು ಸಲ ಕೇಳಿದ ಪ್ರಶ್ನೆಗೆ ಕೊನೆಗೂ ಉತ್ತರಿಸಿದ ನರೇಂದ್ರ ಮೋದಿ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement