ನಾಳೆ ಗೀತಾ ಶಿವರಾಜಕುಮಾರ ಕಾಂಗ್ರೆಸ್ ಸೇರ್ಪಡೆ

ಬೆಂಗಳೂರು: ನಟ ಶಿವರಾಜ​ಕುಮಾರ​ ಪತ್ನಿ ಗೀತಾ ಶಿವರಾಜಕುಮಾರ ಅವರು ನಾಳೆ (ಶುಕ್ರವಾರ) ಕಾಂಗ್ರೆಸ್ ಪಕ್ಷಕ್ಕೆ ಸೇರಲಿದ್ದಾರೆ ಎಂದು ವರದಿಯಾಗಿದೆ.
ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಸಮ್ಮುಖದಲ್ಲಿ ನಾಳೆ ಗೀತಾ ಅವರು ಕಾಂಗ್ರೆಸ್‌ಗೆ ಸೇರ್ಪಡೆಯಾಗಲಿದ್ದಾರೆ. ಮಾಜಿ ಮುಖ್ಯಮಂತ್ರಿ ದಿವಂಗತ ಎಸ್. ಬಂಗಾರಪ್ಪನವರ ಪುತ್ರಿಯಾಗಿರುವ ಗೀತಾ ಅವರು, ಈ ಹಿಂದೆ ಜೆಡಿಎಸ್‌ನಿಂದ ಲೋಕಸಭಾ ಚುನಾವಣೆಗೆ ಬಿ.ಎಸ್. ಯಡಿಯೂರಪ್ಪ ಎದುರಾಳಿಯಾಗಿ ಸ್ಪರ್ಧಿಸಿದ್ದರು. ಆದರೆ, ಯಡಿಯೂರಪ್ಪ ಅವರ ಎದುರು ಭಾರಿ ಮತಗಳ ಅಂತರದಿಂದ ಸೋತಿದ್ದರು.
ಬಂಗಾರಪ್ಪ ಅವರ ಮಕ್ಕಳಲ್ಲಿ ಮಧು ಬಂಗಾರಪ್ಪ, ಕುಮಾರ ಬಂಗಾರಪ್ಪ ಮತ್ತು ಗೀತಾ ಶಿವರಾಜಕುಮಾರ ಅವರು ರಾಜಕೀಯದಲ್ಲಿದ್ದಾರೆ. ಕುಮಾರ ಬಂಗಾರಪ್ಪ ಅವರು ಬಿಜೆಪಿ ಶಾಸಕರಾಗಿದ್ದಾರೆ. ಮಧು ಬಂಗಾರಪ್ಪ ಅವರು ಕಾಂಗ್ರೆಸ್ಸಿನಲ್ಲಿದ್ದಾರೆ. ಇವರಿಬ್ಬರು ಈ ಬಾರಿ ಚುನಾವಣೆಯಲ್ಲಿ ಸೊರಬ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಮಧುಬಂಗಾರಪ್ಪ ಅವರ ಪರ ಪ್ರಚಾರ ನಡೆಸಲಿದ್ದಾರೆ ಎ‍ನ್ನಲಾಗಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement