ಹುಬ್ಬಳ್ಳಿ: ಕಾಂಗ್ರೆಸ್ಸಿಗೆ ಶಾಕ್‌, ಮಾಜಿ ಮೇಯರ್‌ ಪ್ರಕಾಶ ಕ್ಯಾರಕಟ್ಟಿ ಬಿಜೆಪಿಗೆ ಸೇರ್ಪಡೆ

posted in: ರಾಜ್ಯ | 0

ಹುಬ್ಬಳ್ಳಿ : ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ಕೈ ತಪ್ಪಿದಕ್ಕೆ ಬಂಡಾಯವೆದ್ದು ಕಾಂಗ್ರೆಸ್ ಸೇರಿ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್‌ ಕ್ಷೇತ್ರದಲ್ಲಿ ಸ್ಪರ್ಧಿಸಿರುವ ಜಗದೀಶ ಶೆಟ್ಟರ ಅವರಿಗೆ ಬಿಜೆಪಿ ಮೊದಲ ಶಾಕ್‌ ನೀಡಿದೆ. ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಮಾಜಿ ಮೇಯರ್‌ ಪ್ರಕಾಶ ಕ್ಯಾರಕಟ್ಟಿ ಅವರು ಈಗ ಬಿಜೆಪಿ ಸೇರ್ಪಡೆಯಾಗಿದ್ದಾರೆ.
ಹುಬ್ಬಳ್ಳಿಯ ಶ್ರೀನಿವಾಸ ಗಾರ್ಡನ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾಜಿ ಮೇಯರ್‌ ಪ್ರಕಾಶ್‌ ಕ್ಯಾರಕಟ್ಟಿ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ, ಕೇಂದ್ರ ಸಚಿವ ಪ್ರಹ್ಲಾದ ಜೋಶಿ ನೇತೃತ್ವದಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದಾರೆ.
ಹುಬ್ಬಳ್ಳಿ-ಧಾರವಾಡ ಪಾಲಿಕೆ ಸದಸ್ಯರನ್ನು ಹಾಗೂ ಪಕ್ಷದ ಪದಾಧಿಕಾರಿಗಳನ್ನು ಶೆಟ್ಟರ​ ಹಿಂದೆ ಹೋಗದಂತೆ ಹಿಡಿದಿಟ್ಟುಕೊಳ್ಳುವಲ್ಲಿ ಬಿಜೆಪಿ ಯಶಸ್ವಿಯಾಗಿದೆ. ಇದರ ಬೆನ್ನಿಗೇ ಸ್ಥಳೀಯ ಕಾಂಗ್ರೆಸ್​​ ಮುಖಂಡರಿಗೆ ಗಾಳ ಹಾಕುತ್ತಿದ್ದು, ಮೊದಲ ಹಂತವಾಗಿ ಮಾಜಿ ಮೇಯರ್‌ ಪ್ರಕಾಶ್‌ ಕ್ಯಾರಕಟ್ಟಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

ಇಂದಿನ ಪ್ರಮುಖ ಸುದ್ದಿ :-   ಮಕ್ಕಳ ಹಿತದೃಷ್ಟಿಯಿಂದ ಈ ವರ್ಷವೇ ಪಠ್ಯಪುಸ್ತಕ ಪರಿಷ್ಕರಣೆ : ಶಿಕ್ಷಣ ಸಚಿವ ಮಧು ಬಂಗಾರಪ್ಪ

0 / 5. ಒಟ್ಟು ವೋಟುಗಳು 0

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement