ಅಂಗಿತಾ ದತ್ತಾ ಪ್ರಕರಣ : ಭಾರತೀಯ ಯೂತ್ ಕಾಂಗ್ರೆಸ್ ಅಧ್ಯಕ್ಷ ಶ್ರೀನಿವಾಸಗೆ ಸಿಗದ ಮಧ್ಯಂತರ ಪರಿಹಾರ

ಗುವಾಹತಿ: ಅಸ್ಸಾಂ ಯೂತ್ ಕಾಂಗ್ರೆಸ್‌ನ ಮಾಜಿ ಮುಖ್ಯಸ್ಥೆ ಅಂಗಿತಾ ದತ್ತಾ ಅವರು ತಮ್ಮ ವಿರುದ್ಧ ಸಲ್ಲಿಸಿರುವ ಕಿರುಕುಳದ ದೂರುಗಳನ್ನು ರದ್ದುಗೊಳಿಸುವಂತೆ ಕೋರಿ ಭಾರತೀಯ ಯೂತ್ ಕಾಂಗ್ರೆಸ್ ಅಧ್ಯಕ್ಷ ಬಿ.ವಿ.ಶ್ರೀನಿವಾಸ ಅವರ ಸಲ್ಲಿಸಿದ್ದ ಮನವಿ ಅರ್ಜಿಯನ್ನು ಬುಧವಾರ ವಿಚಾರಣೆ ನಡೆಸಿದ ಗುವಾಹತಿ ಹೈಕೋರ್ಟ್ ಮಧ್ಯಂತರ ಪರಿಹಾರ ನೀಡಲಿಲ್ಲ. ನ್ಯಾಯಾಲಯವು ಮೇ 2 ರಂದು ವಿಚಾರಣೆಗೆ ಪಟ್ಟಿ ಮಾಡಿದೆ.
ಈ ಪ್ರಕರಣದಲ್ಲಿ ರಾಜ್ಯ ಸರ್ಕಾರವನ್ನು ಪ್ರತಿನಿಧಿಸುತ್ತಿರುವ ಅಡ್ವೊಕೇಟ್ ಜನರಲ್ ದೇವಜಿತ್ ಲೋನ್ ಸೈಕಿಯಾ ಅವರು , ಶ್ರೀನಿವಾಸ ಬಿ.ವಿ. ಅವರು ತಮ್ಮ ವಿರುದ್ಧ ದಾಖಲಿಸಲಾದ ಎಫ್‌ಐಆರ್ ಅನ್ನು ರದ್ದುಗೊಳಿಸುವಂತೆ ಮನವಿ ಸಲ್ಲಿಸಿದ್ದಾರೆ. ಆದರೆ, ನ್ಯಾಯಾಲಯವು ಹೆಚ್ಚಿನ ಪರಿಗಣನೆಗೆ ಮೇ 2 ರಂದು ವಿಷಯವನ್ನು ನಿಗದಿಪಡಿಸಿದೆ ಎಂದು ಹೇಳಿದ್ದಾರೆ. ಮೇ 2 ರಂದು ಕೇಸ್ ಡೈರಿಯನ್ನು ಸಹ ನ್ಯಾಯಾಲಯ ಕೇಳಿದೆ ಎಂದು ಅವರು ಹೇಳಿದರು. ಮೇ 2 ರಂದು ಗುವಾಹತಿಯ ದಿಸ್ಪುರ್ ಪೊಲೀಸ್ ಠಾಣೆಯಲ್ಲಿ ಶ್ರೀನಿವಾಸ ಅವರು ಅಸ್ಸಾಂ ಪೊಲೀಸರ ಮುಂದೆ ಹಾಜರಾಗಬೇಕು ಎಂದು ಅದು ಸೂಚಿಸುತ್ತದೆ.

ಅಸ್ಸಾಂ ಪೊಲೀಸರ ಅಪರಾಧ ತನಿಖಾ ಇಲಾಖೆ (ಸಿಐಡಿ) ಬೆಂಗಳೂರಿನಲ್ಲಿರುವ ಶ್ರೀನಿವಾಸ ಅವರ ನಿವಾಸಕ್ಕೆ ತೆರಳಿ ಗುವಾಹತಿಯಲ್ಲಿರುವ ಪೊಲೀಸರ ಮುಂದೆ ಖುದ್ದು ಹಾಜರಾಗುವಂತೆ ನೋಟಿಸ್ ನೀಡಿದೆ. ಪ್ರಕರಣದ ಸಾಕ್ಷ್ಯಗಳನ್ನು ಹಾಳು ಮಾಡದಂತೆ ಹಾಗೂ ಪ್ರಕರಣದ ಸತ್ಯಾಸತ್ಯತೆಗಳ ಪರಿಚಯವಿರುವ ಯಾವುದೇ ವ್ಯಕ್ತಿಗೆ ಯಾವುದೇ ಬೆದರಿಕೆ, ಪ್ರಚೋದನೆ ಅಥವಾ ಭರವಸೆ ನೀಡದಂತೆ ನೋಟಿಸ್‌ನಲ್ಲಿ ಶ್ರೀನಿವಾಸಗೆ ತಿಳಿಸಲಾಗಿದೆ.
ಗಮನಾರ್ಹವೆಂದರೆ, ಅಸ್ಸಾಂ ಘಟಕದ ಮಾಜಿ ಯೂತ್ ಕಾಂಗ್ರೆಸ್ ಅಧ್ಯಕ್ಷೆ ಅಂಗಿತಾ ದತ್ತಾ ಅವರು ಶ್ರೀನಿವಾಸ ಬಿ.ವಿ. ವಿರುದ್ಧ ದಿಸ್ಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಶ್ರೀನಿವಾಸ ಅವರು ತಮ್ಮ ವಿರುದ್ಧ “ಕಿರುಕುಳ ಮತ್ತು ಅವಹೇಳನಕಾರಿ ಕಾಮೆಂಟ್‌ಗಳನ್ನು ಬಳಸಿದ್ದಾರೆ ಎಂದು ಆರೋಪಿಸಿದ್ದಾರೆ.

ಪ್ರಮುಖ ಸುದ್ದಿ :-   ಮಣಿಪುರ : ಮತಗಟ್ಟೆ ಮೇಲೆ ಗುಂಡಿನ ದಾಳಿ; ದಿಕ್ಕಾ ಪಾಲಾಗಿ ಓಡಿದ ಮತದಾರರು

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement