ಕುಮಟಾ: ಚಂದಾವರ ಚೆಕ್‌ ಪೋಸ್ಟ್‌ ಬಳಿ 93.50 ಲಕ್ಷ ರೂ. ದಾಖಲೆ ಇಲ್ಲದ ಹಣ ಜಪ್ತಿ

posted in: ರಾಜ್ಯ | 0

ಕಾರವಾರ: ಕುಮಟಾದತ್ತ ಆಟೋದಲ್ಲಿ ದಾಖಲೆ ಇಲ್ಲದೆ ಅಕ್ರಮವಾಗಿ ಸಾಗಾಟವಾಗುತ್ತಿದ್ದ 93.50 ಲಕ್ಷ ರೂ. ಹಣವನ್ನು ಫ್ಲೈಯಿಂಗ್ ಸ್ಕ್ವಾಡ್ ಪತ್ತೆ ಹಚ್ಚಿ ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ವರದಿಯಾಗಿದೆ.
ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಅಕ್ರಮಗಳನ್ನು ತಡೆಯಲು ಕಾರ್ಯಾಚರಣೆ ನಡೆಸುತ್ತಿರುವ ಚುನಾವಣಾಧಿಕಾರಿಗಳು ಕಟ್ಟುನಿಟ್ಟಿನ ತಪಾಸಣೆಯಲ್ಲಿ ತೊಡಗಿದ್ದಾರೆ
ಉತ್ತರ ಕನ್ನಡ ಜಿಲ್ಲೆಯ ಕುಮಟಾ ಸಮೀಪದ ಹೊನ್ನಾವರ ತಾಲೂಕಿನ ಚಂದಾವರ ಚೆಕ್ ಪೋಸ್ಟ್ ಬಳಿ ಶುಕ್ರವಾರ ನಸುಕಿನ 2:30 ರ ವೇಳೆಗೆ ದಾಖಲೆ ಇಲ್ಲದೆ ಆಟೋದಲ್ಲಿ ಸಾಗಿಸುತ್ತಿದ್ದ ದಾಖಲೆ ಇಲ್ಲದ ಹಣವನ್ನು ಫ್ಲೈಯಿಂಗ್ ಸ್ಕ್ವಾಡ್ ಪತ್ತೆ ಹಚ್ಚಿದೆ. ಶಿವಮೊಗ್ಗದಿಂದ ಕುಮಟಾ ಕಡೆಗೆ ಹಣ ಸಾಗಾಟವಾಗುತ್ತಿತ್ತು. ಆಟೋ ಚಾಲಕ ಹಾಗೂ ಆಟೋದಲ್ಲಿದ್ದ ಮತ್ತೊಬ್ಬ ವ್ಯಕ್ತಿಯನ್ನು ಹಣ ಸಮೇತ ವಶಕ್ಕೆ ಪಡೆಯಲಾಗಿದೆ.
ಕುಮಟಾ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹೊನ್ನಾವರ ತಾಲೂಕಿನ ಚಂದಾವರ ಚೆಕ್ ಪೋಸ್ಟ್ ನಲ್ಲಿ ದಾಖಲೆಯಿಲ್ಲದೆ ಆಟೋ-ರಿಕ್ಷಾದಲ್ಲಿ 93.50 ಲಕ್ಷ ರೂ. ಗಳನ್ನು ಎಸ್.ಎಸ್.ಟಿ. ತಂಡ ಮತ್ತು ಫ್ಲೈಯಿಂಗ್ ಸ್ಕ್ವಾಡ್ ತಂಡದವರು ವಶಪಡಿಸಿಕೊಂಡಿದ್ದು, ಹಣವನ್ನು ಉಪಖಜಾನೆ ಕುಮಟಾದಲ್ಲಿ ನಿಯಮಾನುಸಾರ ಇರಿಸಲಾಗಿದೆ. ಈ ಹಣ ಯಾರಿಗೆ ಸೇರಿದ್ದು, ಯಾವ ಪಕ್ಷಕ್ಕೆ ಸೇರಿದ್ದು ಎನ್ನುವುದು ತಿಳಿಸಿದು ಬಂದಿಲ್ಲ. ತನಿಖೆ ಮುಂದುವರಿದಿದೆ.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಇಂದಿನ ಪ್ರಮುಖ ಸುದ್ದಿ :-   ಶೀಘ್ರವೇ 15000 ಪೊಲೀಸ್ ಪೇದೆಗಳ ಹುದ್ದೆ ಭರ್ತಿ: ಗೃಹ ಸಚಿವ ಡಾ. ಜಿ.ಪರಮೇಶ್ವರ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

0 / 5. ಒಟ್ಟು ವೋಟುಗಳು 0

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement