ಚುನಾವಣಾ ಪ್ರಚಾರದ ವೇಳೆ ಮಾಜಿ ಡಿಸಿಎಂ ಡಾ.ಪರಮೇಶ್ವರ ತಲೆಗೆ ಕಲ್ಲೇಟು: ತೀವ್ರ ಗಾಯ

ತುಮಕೂರು : ಚುನಾವಣಾ ಪ್ರಚಾರದ ವೇಳೆ ಕಲ್ಲು ತಗುಲಿ ಡಾ..ಪರಮೇಶ್ವರ ತಲೆಗೆ ಗಂಭೀರ ಗಾಯವಾಗಿದೆ. ಅವರಿಗೆ ಸಮೀಪದ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ತುಮಕೂರಿ ಸಿದ್ದಾರ್ಥ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಕೊರಟಗೆರೆ ಕ್ಷೇತ್ರದ ಭೈರನಹಳ್ಳಿ ಗ್ರಾಮದಲ್ಲಿ ಚುನಾವಣಾ ಪ್ರಚಾರದ ವೇಳೆ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ. ಶುಕ್ರವಾರ ಸಂಜೆ 5ರ ವೇಳೆಗೆ ಭೈರನಹಳ್ಳಿಯಲ್ಲಿ ಚುನಾವಣಾ ಪ್ರಚಾರ ನಡೆಸುತ್ತಿದ್ದಾಗ ಜೆಸಿಬಿಯಿಂದ ಅವರ ಮೇಲೆ ಹೂ ಮಳೆ ಸುರಿಸುತ್ತಿದ್ದಾಗ ಡಾ.ಪರಮೇಶ್ವರ ಅವರ ತಲೆಗೆ ಕಲ್ಲೇಟು ಬಿದ್ದಿದೆ.  ಪ್ರಚಾರದ ವೇಳೆ ಕಾರ್ಯಕರ್ತರು ಪರಮೇಶ್ವರ ಅವರನ್ನ ಎತ್ತಿ ಕುಣಿಸುತ್ತಿದ್ದರು, ಈ ವೇಳೆ ಗುಂಪಲ್ಲಿದ್ದ ಕಿಡಿಗೇಡಿ ಕಲ್ಲು ತೂರಿದ್ದಾರೆ ಎಂದು ಹೇಳಲಾಗಿದೆ.
ಕೂಡಲೇ ಅವರನ್ನು ಅಕಿರಾಂಪುರ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಯಿತು. ರಕ್ತಸ್ರಾವವಾಗಿದ್ದ ಅವರ ತಲೆಗೆ ಬ್ಯಾಂಡೇಜ್‌ ಹಾಕಲಾಯಿತು. ಹೆಚ್ಚಿನ ಚಿಕಿತ್ಸೆಗೆ ತುಮಕೂರು ನಗರದ ಸಿದ್ದಾರ್ಥ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement