ಪ್ರಧಾನಿ ಮೋದಿ ವಿಷದ ಹಾವಿದ್ದಂತೆ ಹೇಳಿಕೆ: ಖರ್ಗೆ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಿದ ಬಿಜೆಪಿ

ಬೆಂಗಳೂರು: ನರೇಂದ್ರ ಮೋದಿ ಅವರನ್ನು ವಿಷದ ಹಾವಿಗೆ ಹೋಲಿಸಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.
ರಾಜ್ಯ ವಿಧಾನಸಭಾ ಚುನಾವಣಾ ಪ್ರಚಾರದಲ್ಲಿರುವ ಮಲ್ಲಿಕಾರ್ಜುನ ಖರ್ಗೆ ಅವರು “ಮೋದಿ ವಿಷದ ಹಾವಿದ್ದಂತೆ. ನೆಕ್ಕಿದರೆ ಸತ್ತೇ ಹೋಗುತ್ತಾರೆ” ಎಂದು ಹೇಳಿಕೆ ನೀಡಿದ್ದರು.
ಖರ್ಗೆ ಅವರ ಈ ಹೇಳಿಕೆ ರಾಜ್ಯಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿತ್ತು. ಸ್ವತಃ ಮಲ್ಲಿಕಾರ್ಜುನ ಖರ್ಗೆ ಅವರೇ ತಮ್ಮ ಹೇಳಿಕೆಗೆ ವಿಷಾದ ವ್ಯಕ್ತಪಡಿಸಿ, ಬಿಜೆಪಿ ಹಬ್ಬಿಸುತ್ತಿರುವ ಅರ್ಥದಲ್ಲಿ ನಾನು ಹೇಳಿಲ್ಲ, ನಾನು ಬಿಜೆಪಿ ವಿದ ಹಾವಿದ್ದಂತೆ ಎಂದು ಹೇಳಿದ್ದೆ ಎಂದು ನಂತರ ಸಮಾಜಾಯಿಷಿ ನೀಡಿದ್ದರು.
ಬಿಜೆಪಿ, ರಾಜ್ಯ ಚುನಾವಣಾ ಆಯೋಗದ ಆಯುಕ್ತರಿಗೆ ದೂರು ನೀಡಿದೆ. ಮಲ್ಲಿಕಾರ್ಜುನ ಖರ್ಗೆ ಜವಾಬ್ದಾರಿಯುತ ಸ್ಥಾನದಲ್ಲಿ ಇರುವವರು. ರಾಜ್ಯದಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದೆ ಎನ್ನುವುದು ಅವರಿಗೆ ಗೊತ್ತಿದೆ. ಈ ನಡುವೆ ಅವರು ಪ್ರಧಾನಿ ಅವರನ್ನು ವಿಷದ ಹಾವಿಗೆ ಹೋಲಿಸಿದ್ದಾರೆ” ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಮೋದಿ ಅವರ ವಿರುದ್ಧ ವೈಯಕ್ತಿಕ ದಾಳಿ ಮತ್ತು ಚಾರಿತ್ರ್ಯವಧೆ ಮಾಡುವ ಉದ್ದೇಶದಿಂದ ಹೇಳಿಕೆ ನೀಡಲಾಗಿದೆ. ಈ ಅಂಶವು ಕಾಂಗ್ರೆಸ್ ನಾಯಕರಿಗೆ ಈ ನೆಲದ ಕಾನೂನಿನ ಬಗ್ಗೆ ಗೌರವವಿಲ್ಲ ಎಂಬುದನ್ನು ತೋರಿಸುತ್ತದೆ” ಎಂದು ಹೇಳಿದೆ.
ನರೇಂದ್ರ ಮೋದಿ ಅವರ ಮೇಲೆ ಖರ್ಗೆ ಅವರು ವೈಯಕ್ತಿಕ ದಾಳಿ ನಡೆಸುತ್ತಿರುವುದು ಇದೇ ಮೊದಲೇನಲ್ಲ. ಕಳೆದ ವರ್ಷ ಗುಜರಾತ್ ಚುನಾವಣೆಯ ಪ್ರಚಾರದಲ್ಲಿ ಖರ್ಗೆಯವರು ಮೋದಿಯನ್ನು 100 ತಲೆ ರಾವಣ ಎಂದು ಕರೆದಿದ್ದರು” ಎಂದು ಬಿಜೆಪಿ ಹೇಳಿದೆ. ಖರ್ಗೆ ವಿರುದ್ಧ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಬೇಕು” ಎಂದು ಆಯೋಗದ ಆಯುಕ್ತರಿಗೆ ಬಿಜೆಪಿ ಮನವಿ ಮಾಡಿದೆ.

ಪ್ರಮುಖ ಸುದ್ದಿ :-   ನಟಿ ಸಿದ್ಧಾರ್ಥ- ನಟಿ ಅದಿತಿ ರಾವ್ ಮದುವೆ ಆಗಿಲ್ಲ : ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ ; ಸ್ಪಷ್ಟನೆ ನೀಡಿದ ಅದಿತಿ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement