ರಾಜ್ಯದ ಈ ಜಿಲ್ಲೆಗಳಲ್ಲಿ 3 ದಿನ ಗುಡುಗು ಸಹಿತ ಮಳೆ ಸಾಧ್ಯತೆ : ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಹಾಗೂ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಇಂದಿನಿಂದ ಮೂರು ದಿನ (ಏಪ್ರಿಲ್‌ 30) ಗುಡುಗು ಸಹಿತ ಮಳೆ (Rain)ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿಯ ಎಲ್ಲ ಜಿಲ್ಲೆಗಳಲ್ಲಿ ಮತ್ತು ಉತ್ತರ ಒಳನಾಡಿನ ಬೀದರ, ಬಾಗಲಕೋಟೆ, ಬೆಳಗಾವಿ, ಗದಗ, ಹಾವೇರಿ, ರಾಯಚೂರು, ಕಲಬುರಗಿ, ಯಾದಗಿರಿ, ಕೊಪ್ಪಳ, ವಿಜಯಪುರ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿದೆ. ಅಲ್ಲದೆ, ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ತುಮಕೂರು, ವಿಜಯನಗರ, ಶಿವಮೊಗ್ಗ, ರಾಮನಗರ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ.ಶಿವಮೊಗ್ಗ. ಬಳ್ಳಾರಿ, ಚಿತ್ರದುರ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ ಹಾಗೂ ಮೈಸೂರು ಜಿಲ್ಲೆಗೆ ಭಾನುವಾರ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು, ರಾತ್ರಿ ವೇಳೆಗೆ ಹಗುರ ಮಳೆಯಾಗುವ ಸಾಧ್ಯತೆ ಇದೆ.
ಭಾಗಮಂಡಲ, ಶೃಂಗೇರಿ, ಬಾಳೆಹೊನ್ನೂರು, ಸುಬ್ರಹ್ಮಣ್ಯ, ಉಪ್ಪಿನಂಗಡಿ, ಸುಳ್ಯ, ಹಾರಂಗಿ, ನಿಡಿಗೆ, ಮಾಣಿ, ತ್ಯಾಗರ್ತಿ, ಕಳಸ, ಅಜ್ಜಂಪುರ, ಹಾಸನದಲ್ಲಿ ಮಳೆಯಾಗಿದೆ.

ಪ್ರಮುಖ ಸುದ್ದಿ :-   ಪ್ರಜ್ವಲ್‌ ರೇವಣ್ಣ ಪ್ರಕರಣ : ದೇವೇಗೌಡ, ಎಚ್‌ಡಿಕೆಯನ್ನು ತಪ್ಪಾಗಿ ಬಿಂಬಿಸಿ ಸುದ್ದಿ ಪ್ರಸಾರ ಮಾಡದಂತೆ 89 ಮಾಧ್ಯಮಗಳ ವಿರುದ್ಧ ಪ್ರತಿಬಂಧಕಾದೇಶ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement