ಸೋನಿಯಾ ಗಾಂಧಿ ವಿಷಕನ್ಯೆಯೇ ? : ಖರ್ಗೆ ಹೇಳಿಕೆ ಬಗ್ಗೆ ಯತ್ನಾಳ​ ವಿವಾದಾತ್ಮಕ ಹೇಳಿಕೆ

ಬೆಂಗಳೂರು: ಪ್ರಧಾನಿ ಮೋದಿ ವಿಷ ಸರ್ಪ ಇದ್ದಂಗೆ, ನೆಕ್ಕಿ ನೋಡಿದ್ದರೆ ಸತ್ತು ಹೋಗುತ್ತಾರೆ ಎಂಬ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ರಾಜ್ಯ ರಾಜಕಾರಣದಲ್ಲಿ ಭಾರಿ ಚರ್ಚೆಗೆ ಗ್ರಾಸವಾದ ಬೆನ್ನಲ್ಲೇ ಬಿಜೆಪಿ ನಾಯಕ ಬಸನಗೌಡ ಪಾಟೀಲ ಯತ್ನಾಳ ಈಗ ಸೋನಿಯಾ ಗಾಂಧಿ ಕುರಿತು ನೀಡಿದ ಹೇಳಿಕೆ ಚರ್ಚೆಗೆ ಗ್ರಾಸವಾಗಿದೆ.
ಕಾಂಗ್ರೆಸ್‌ನವರು ದೇಶದ ಪ್ರಧಾನಿ ಅವರನ್ನು ವಿಷಸರ್ಪಕ್ಕೆ ಹೋಲಿಸುತ್ತಾರೆ. ಹಾಗಾದರೆ ಸೋನಿಯಾ ಗಾಂಧಿ ವಿಷಕನ್ಯೆನಾ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ್​ ಪ್ರಶ್ನಿಸಿದ್ದಾರೆ. ಕಾಂಗ್ರೆಸ್​ ನಾಯಕರು ಈ ಹೇಳಿಕೆಗೆ ವ್ಯಾಪಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೊಪ್ಪಳದ ಕಾರ್ಯಕ್ರಮ ಒಂದರಲ್ಲಿ ಮಾಡಿದ ಶಾಸಕ ಯತ್ನಾಳ್​, ರಾಷ್ಟ್ರೀಯ ಪಕ್ಷದ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ದೇಶದ ಪ್ರಧಾನಿ ಮೋದಿ ಅವರಿಗೆ ಹೇಗೆ ಗೌರವ ನೀಡಬೇಕು ಗೊತ್ತಿಲ್ಲ. ಇಡೀ ಜಗತ್ತು ಪ್ರಧಾನಿ ಮೋದಿ ಅವರನ್ನು ಮೆಚ್ಚಿಕೊಂಡಿದೆ.ಆದರೆ ಕಾಂಗ್ರೆಸ್‌ ಅಧ್ಯಕ್ಷರು ದೇಶದ ಪ್ರಧಾನಿಗೆ ಅವರು ವಿಷ ಸರ್ಪ ಇದ್ದಂತೆ ಎಂದು ಹೇಳಿ ಅವಮಾನ ಮಾಡುತ್ತಾರೆ. ಮೋದಿ ವಿಷಸರ್ಪವಾದರೆ, ಸೋನಿಯಾ ಗಾಂಧಿ ವಿಷಕನ್ಯೆನಾ ಎಂದು ಪ್ರಶ್ನಿಸಿದ್ದಾರೆ. ಕಾಂಗ್ರೆಸ್‌ನವರು ಮೋದಿ ಟೀಕಿಸಿಯೇ ಲೋಕಸಭೆಯಲ್ಲಿ ವಿರೋಧ ಪಕ್ಷವಾಗುವ ಅರ್ಹತೆಯನ್ನೂ ಕಳೆದುಕೊಂಡಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಶಾಸಕ ಯತ್ನಾಳ್​ ಹೇಳಿಕೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್​ ಕಿಡಿಕಾರಿದ್ದಾರೆ, ಯತ್ನಾಳ್ ಹೇಳಿಯನ್ನು ಕಾಂಗ್ರೆಸ್ ಪಕ್ಷ ಸಹಿಸುವುದಿಲ್ಲ. ಹೇಳಿಕೆ ಸಂಬಂಧ ಬಿಜೆಪಿ ನಾಯಕರು ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿದ್ದಾರೆ. ಪ್ರಧಾನಿ ಮೋದಿ, ಮುಖ್ಯಮಂತ್ರಿ ಬೊಮ್ಮಾಯಿ ಕ್ಷಮೆಯಾಚಿಸಬೇಕು. ಯತ್ನಾಳ ಅವ​ರನ್ನು ಬಿಜೆಪಿಯಿಂದ ಉಚ್ಚಾಟನೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

ಪ್ರಮುಖ ಸುದ್ದಿ :-   ಯಕ್ಷಗಾನದ ಖ್ಯಾತ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement