ಕರ್ನಾಟಕ ವಿಧಾನಸಭೆ ಚುನಾವಣೆ 2023 : ಮೊದಲು ಮತದಾನ ಮಾಡಿದ ನಟಿ ಲೀಲಾವತಿ…!

posted in: ರಾಜ್ಯ | 0

ಬೆಂಗಳೂರು: ಹಿರಿಯ ನಟಿ ಲೀಲಾವತಿ ಏಪ್ರಿಲ್ 29ರಂದು ಶನಿವಾರ ಮನೆಯಿಂದಲೇ ಮತದಾನ ಮಾಡಿದ್ದಾರೆ. ನೆಲಮಂಗಲ ತಾಲೂಕಿನ ಮೈಲನಹಳ್ಳಿಯ ತಮ್ಮ ಮನೆಯಲ್ಲಿ ಮತದಾನ ಮಾಡಿದ್ದಾರೆ. ಈ ಮೂಲಕ ಮೊದಲ ಮತದಾನ ಮಾಡಿದ ಮೊದಲ ಮತದಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಬ್ಯಾಲೆಟ್ ಪೇಪರ್ ಮೂಲಕ ಅವರು ಮತದಾನ ಮಾಡಿದರು.
ನೆಲಮಂಗಲ ವಿಧಾನಸಭಾ ಕ್ಷೇತ್ರದಲ್ಲಿ ಮತದಾನ ಹಕ್ಕನ್ನು ಹೊಂದಿರುವ ಅವರು, ತಮ್ಮ ಮನೆಯಲ್ಲಿ ಮತ ಚಲಾಯಿಸಿದರು. ವಯೋಸಹಜ ಕಾಯಿಲೆಯಿಂದ ಬಳಲುತ್ತಿರುವ ಅವರಿಗೆ ಮನೆಯಿಂದಲೇ ಮತದಾನ ಮಾಡಲು ಅವಕಾಶ ನೀಡಲಾಗಿದೆ.
ಈ ಬಾರಿ ಚುನಾವಣೆಯಲ್ಲಿ ಹಿರಿಯ ನಾಗರೀಕರು, ಅಂಗವಿಕಲರಿಗೆ ಮನೆಯಿಂದಲೇ ಮತದಾನ ಮಾಡಲು ಚುನಾವಣಾ ಆಯೋಗ ಅವಕಾಶ ನೀಡಿದೆ. ಎಂಬತ್ತು ವರ್ಷಕ್ಕೂ ಹೆಚ್ಚಿನ ವಯಸ್ಸಾದವರಿಗೆ, ಅಂಗವಿಕಲರು, ಚುನಾವಣಾ ಸಿಬ್ಬಂದಿ, ಪತ್ರಕರ್ತರು ಬ್ಯಾಲೆಟ್ ಮೂಲಕ ಮತದಾನ ಮಾಡಲು ಅವಕಾಶ ಮಾಡಿಕೊಟ್ಟಿದ್ದು, ಏಪ್ರಿಲ್ 29ರಿಂದಲೇ ಚುನಾವಣಾ ಆಯೋಗ ಇದಕ್ಕೆ ಚಾಲನೆ ನೀಡಿದೆ.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಮತದಾನ ಮಾಡಿದ ಬಳಿಕ ಮಾತನಾಡಿರುವ ಲೀಲಾವತಿಯವರು, ” ಚುನಾವಣಾ ಆಯೋಗ ಈ ಅವಕಾಶ ಕಲ್ಪಿಸಿರುವುದು ನನ್ನಂತಹ ಹಿರಿಯರಿಗೆ ಅನುಕೂಲವಾಗಿದೆ. ಎಲ್ಲರೂ ತಪ್ಪದೇ ಮತದಾನ ಮಾಡಬೇಕು.ಮನೆಯಲ್ಲಿ ಮತದಾನ ಮಾಡಿದ್ದು ಖುಷಿ ನೀಡಿದೆ” ಎಂದು ಹೇಳಿದರು.
ಚುನಾವಣಾ ಆಯೋಗವು ಕರ್ನಾಟಕದಲ್ಲಿ ವಯಸ್ಸಾದ ಮತ್ತು ವಿಶೇಷಚೇತನ ಮತದಾರರಿಗೆ ಮನೆಯಿಂದಲೇ ಮತದಾನ ಮಾಡಲು ಹೊಸ ಕ್ರಮವನ್ನು ಕೈಗೊಂಡಿದೆ. ಹೊಸ ಮತದಾನದ ವ್ಯವಸ್ಥೆಯು ರಾಜ್ಯದಲ್ಲಿ ಸುಮಾರು 5.71 ಲಕ್ಷ ವಿಕಲಚೇತನರು ಮತ್ತು 80 ವರ್ಷಕ್ಕಿಂತ ಮೇಲ್ಪಟ್ಟ 12,15,763 ವೃದ್ಧರು ಪ್ರಯೋಜನ ಪಡೆಯಬಹುದಾಗಿದೆ. 80 ವರ್ಷಕ್ಕಿಂತ ಮೇಲ್ಪಟ್ಟ 80,250 ಹಿರಿಯ ನಾಗರಿಕರು ಮತ್ತು 19,729 ವಿಶೇಷಚೇತನ ಮತದಾರರು ಸೇರಿದಂತೆ ಒಟ್ಟು 99,529 ಜನರು ಮನೆಯಿಂದ ಮತ ಮಾಡುವುದನ್ನು ಆಯ್ಕೆ ಮಾಡಿಕೊಂಡಿದ್ದಾರೆ.

ಇಂದಿನ ಪ್ರಮುಖ ಸುದ್ದಿ :-   ಕ್ರೆಡಾಯ್ ರಾಜ್ಯಾಧ್ಯಕ್ಷರಾಗಿ ಹುಬ್ಬಳ್ಳಿ ಉದ್ಯಮಿ ಪ್ರದೀಪ ರಾಯ್ಕರ ಆಯ್ಕೆ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

0 / 5. ಒಟ್ಟು ವೋಟುಗಳು 0

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement