ಜನರತ್ತ ಕೈ ಬಿಸಿ ಕಾರು ಹತ್ತುವ ವೇಳೆ ಕುಸಿದ ಸಿದ್ದರಾಮಯ್ಯ: ತಕ್ಷಣ ವೈದ್ಯರಿಂದ ಉಪಚಾರ

posted in: ರಾಜ್ಯ | 0

ವಿಜಯನಗರ: ವಿಜಯನಗರ ಜಿಲ್ಲೆಯ ಕೂಡ್ಲಿಗಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಡಾ. ಶ್ರೀನಿವಾಸ ಅವರ ಪರವಾಗಿ ಶನಿವಾರ ಪ್ರಚಾರಕ್ಕೆ ಆಗಮಿಸಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರು ಏರುವಾಗ ಕುಸಿದ ಘಟನೆ ನಡೆದಿದೆ.
ಉತ್ತರ ಕರ್ನಾಟಕ ಭಾಗದಲ್ಲಿ ಹೆಚ್ಚಿನ ಕ್ಷೇತ್ರಗಳಲ್ಲಿ ಪ್ರಚಾರದ ಹೊಣೆ ಹೊತ್ತಿದ್ದಾರೆ. ಈ ಹಿನ್ನೆಲೆಯಲ್ಲಿ, ಅವರು ಇಂದು,ಶನಿವಾರ ಕೂಡ್ಲಿಗಿ ವಿಧಾನಸಭಾ ಕ್ಷೇತ್ರದಲ್ಲಿ ಪ್ರಚಾರಕ್ಕೆ ತೆರಳಿದ ವೇಲೆ ತಲೆ ತಿರುಗಿ ಬಿದ್ದಿರುವ ಘಟನೆ ನಡೆದಿದೆ. ಕೂಡಲೇ ವೈದ್ಯರು ಪ್ರಾಥಮಿಕ ಉಪಚಾರ ಮಾಡಿದ ನಂತರ ಚೇತರಿಸಿಕೊಂಡು ಪ್ರಚಾರಕ್ಕೆ ತರಳಿದ್ದಾರೆ.
ಹೆಲಿಕಾಪ್ಟರ್ ಮೂಲಕ ಕೂಡ್ಲಿಗಿ ವಿಧಾನಸಭಾ ಕ್ಷೇತ್ರಕ್ಕೆ ಆಗಮಿಸಿದ ಸಿದ್ದರಾಮಯ್ಯ, ಹೆಲಿಕ್ಯಾಪ್ಟರನಿಂದ ಇಳಿದ ಕೂಡಲೇ ಮೊಬೈಲ್ ನಲ್ಲಿ ಬ್ಯೂಸಿ ಆಗಿದ್ದಾರೆ. ಅಲ್ಲಿಂದ ಕಾರ್ಯಕರ್ತರೊಂದಿಗೆ ಕಾರಿನತ್ತ ಹೆಜ್ಜೆ ಹಾಕಿದ್ದಾರೆ. ಇನ್ನು ಕಾರು ಬಾಗಿಲು ತೆಗೆದು ಕಾರನ್ನು ಹತ್ತುವ ಬೇಕು ಎನ್ನುವಾಗ ಕುಸಿದು ಬಿದ್ದಿದ್ದಾರೆ.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಸಿದ್ದರಾಮಯ್ಯ ಕುಸಿದು ಬಿಳುತ್ತಿದ್ದಂತೆ ಅಕ್ಕ ಪಕ್ಕದಲ್ಲಿಯೇ ಇದ್ದ ಬೆಂಗಾವಲು ಹಾಗೂ ಕಾರ್ಯಕರ್ತರು ಸಿದ್ದರಾಮಯ್ಯು ಅವರ ಕೈಯನ್ನು ಹಿಡಿದುಕೊಂಡು ಕಾರಿನಲ್ಲಿ ಕೂರಿಸಿದ್ದಾರೆ. ನಂತರ, ಕಾರಿನ ಸೀಟಿನ ಒಳಗೆ ಕೂಡಿಸಿ ಅವರಿಗೆ ಆರೈಕೆ ಮಾಡಿದ ಸ್ವತಃ ವೈದ್ಯರಾಗಿರುವ ಕೂಡ್ಲಿಗಿ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಡಾ. ಶ್ರೀನಿವಾಸ ಅವರು ಗ್ಲುಕೋಸ್‌ ಕುಡಿಸಿದ್ದಾರೆ. ಸ್ವಲ್ಪಸಮಯದ ಬಳಿಕ ಮತ್ತೆ ಚೇತರಿಸಿಕೊಂಡು ಜನರತ್ತ ಕೈ ಬಿಸಿದ ಸಿದ್ದರಾಮಯ್ಯ ಕಾರಿನಲ್ಲಿ ಹೆಲಿಪ್ಯಾಡ್‌ನಿಂದ ಪ್ರಚಾರದ ಸ್ಥಳಕ್ಕೆ ತೆರಳಿದರು.

ಯಾರೂ ಗಾಬರಿ ಪಡುವಂತಹದ್ದೇನಿಲ್ಲ, ಗಟ್ಟಿಮುಟ್ಟಾಗಿದ್ದೇನೆ. ನಿತ್ಯ ಅಡ್ಡಾಡುವ ಕಾರು ಬದಲಾಗಿರುವ ಕಾರಣ ಸೈಡ್ ಸ್ಟೆಪ್ ಇಲ್ಲದ ಕಾರಿನಲ್ಲಿ ಕಾಲು ಜಾರಿ ಹಿಂದಕ್ಕೆ ಮುಗ್ಗರಿಸಿದ್ದೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಇಂದಿನ ಪ್ರಮುಖ ಸುದ್ದಿ :-   ಸಿದ್ದರಾಮಯ್ಯ ಸಂಪುಟದ ಸಚಿವರಿಗೆ ಅಧಿಕೃತವಾಗಿ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ..?

 

 

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

0 / 5. ಒಟ್ಟು ವೋಟುಗಳು 0

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement