ಜೆಇಇ ಮೇನ್ಸ್‌ ಪರೀಕ್ಷೆ: ಜೆ.ಎಸ್.ಎಸ್. ಆರ್.ಎಸ್.ಹುಕ್ಕೇರಿಕರ ಪಿಯು ಕಾಲೇಜ್‌ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ

ಧಾರವಾಡ: ಧಾರವಾಡ ನಗರದ ವಿದ್ಯಾಗಿರಿಯ ಜೆ.ಎಸ್.ಎಸ್ ಸಂಸ್ಥೆಯ ಆರ್.ಎಸ್. ಹುಕ್ಕೇರಿಕರ ಪದವಿಪೂರ್ವ ಮಹಾವಿದ್ಯಾಲಯದ 2022-2023ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಜೆ.ಇ.ಇ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿದ್ದಾರೆ.
ಜೆ.ಇ.ಇ ಪರೀಕ್ಷೆಯಲ್ಲಿ ಹಾಜರಾದ 08 (ಎಂಟು) ವಿದ್ಯಾರ್ಥಿಗಳು ಜೆ.ಇ.ಇ. ಬಿ.ಇ/ಬಿ.ಟೆಕ್ ವಿಭಾಗದ ಮೇನ್ಸ್ ಪರೀಕ್ಷೆಯಲ್ಲಿ ಉತ್ತಮ ಸಾಧನೆಗೈದು, ಅಡ್ವಾನ್ಸಡ್‌ ಪರೀಕ್ಷೆ ಬರೆಯುವ ಅರ್ಹತೆ ಪಡೆದಿದ್ದಾರೆ.
ಗೋಕುಲ್ ಶಶಿಧರನ್ 97.96%, ಪಾಟೀಲ್ ಆದರ್ಶ್ ರೆಡ್ಡಿ 97.82%, ಯಶವಂತ ಐ ಕುರಿಯವರ್ 97.50%, ಚಿನ್ಮಯ್ ಜಿ ಹೆಗಡೆ 95.22%, ಆಕಾಶ್ ಬಾಬು ಕುಂಬಾರ್ 94.36%, ದರ್ಶನ್ ಕುಡ್ಲನ್ನವರ್ 91.91%, ಶೌರ್ಯ ಚೌಗಲೆ 88.99% ವರ್ಧಮಾನ್ ಕಲ್ಲೋಳಿ 88% ಪಡೆದು ಕಾಲೇಜಿಗೆ ಕೀರ್ತಿ ತಂದಿದ್ದಾರೆ.
ಈ ವಿದ್ಯಾರ್ಥಿಗಳ ಉತ್ತಮ ಸಾಧನೆಗಾಗಿ ವಿದ್ಯಾರ್ಥಿಗಳಿಗೆ ಜನತಾ ಶಿಕ್ಷಣ ಸಮಿತಿಯ ಅಧ್ಯಕ್ಷರಾದ ಉಡುಪಿಯ ಪೇಜಾವರ ಮಠದ ಪೂಜ್ಯ ಶ್ರೀ ವಿಶ್ವಪ್ರಸನ್ನ ಸ್ವಾಮೀಜಿ, ಕಾರ್ಯಾಧ್ಯಕ್ಷರಾದ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಶುಭ ಹಾರೈಸಿದ್ದಾರೆ. ಸಮಿತಿಯ ಕಾರ್ಯದರ್ಶಿಗಳಾದ ಡಾ. ಅಜಿತ ಪ್ರಸಾದ, ಮಹಾವಿದ್ಯಾಲಯದ ಪ್ರಾಚಾರ್ಯರಾದ ಭಾರತಿ ಶಾನಭಾಗ ಹಾಗೂ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಅಭಿನಂದಿಸಿದ್ದಾರೆ.

 

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement