ಬಾಗಲಕೋಟೆ: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 5 ಕೋಟಿ ರೂ. ಹಣವನ್ನು ಚುನಾವಣಾಧಿಕಾರಿಗಳು, ಫ್ಲೈಯಿಂಗ್ ಸ್ಕ್ವಾಡ್ (Flying Squad) ಹಾಗೂ ಲೋಕಾಪುರ ಪೊಲೀಸರು ಜಪ್ತಿ ಮಾಡಿದ್ದಾರೆ ಎಂದು ವರದಿಯಾಗಿದೆ.
ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಲಕ್ಷಾನಟ್ಟಿ ಚೆಕ್ಪೋಸ್ಟ್ನಲ್ಲಿ ಚುನಾವಣಾಧಿಕಾರಿಗಳು ಹಾಗೂ ಲೋಕಾಪುರ ಪೊಲೀಸರು ತಪಾಸಣೆ ನಡೆಸುತ್ತಿದ್ದಾಗ ಕಾರಿನಲ್ಲಿ ಐದು ಕೋಟಿ ಪತ್ತೆಯಾಗಿದೆ. ಹುಬ್ಬಳ್ಳಿಯಿಂದ ಮುಧೋಳಕ್ಕೆ ಈ ಹಣವನ್ನ ಸಾಗಿಸುತ್ತಿದ್ದರು ಎನ್ನಲಾಗಿದೆ.
ಈ 5 ಕೋಟಿ ಹಣ ಯೂನಿಯನ್ ಬ್ಯಾಂಕ್ಗೆ ಸೇರಿದ್ದು ಎಂದು ಹೇಳಲಾಗಿದ್ದು, ಆದರೆ ಹಣಕ್ಕೆ ದಾಖಲೆ ನೀಡದ ಹಿನ್ನೆಲೆ ಚುನಾವಣಾಧಿಕಾರಿಗಳು ಹಣವನ್ನ ವಶಕ್ಕೆ ಪಡೆದಿದ್ದಾರೆ. ಕಾರಿನಲ್ಲಿದ್ದವರನ್ನು ವಿಚಾರಣೆ ನಡೆಸಲಾಗುತ್ತಿದೆ.
advertisement
ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ
ನಿಮ್ಮ ಕಾಮೆಂಟ್ ಬರೆಯಿರಿ