ಕೊಲೆ ಪ್ರಕರಣದಲ್ಲಿ ಬಿಎಸ್​​ಪಿ ಸಂಸದನಿಗೆ 4 ವರ್ಷ ಜೈಲು ಶಿಕ್ಷೆ; ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಳ್ಳುವ ಭೀತಿ

ನವದೆಹಲಿ: ಉತ್ತರ ಪ್ರದೇಶದ ಜನಪ್ರತಿನಿಧಿಗಳ ನ್ಯಾಯಾಲಯವು ಅಪಹರಣ ಮತ್ತು ಕೊಲೆ ಪ್ರಕರಣದಲ್ಲಿ ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿ ಅವರನ್ನು ಅಪರಾಧಿ ಎಂದು ಘೋಷಿಸಿ 10 ವರ್ಷಗಳ ಜೈಲು ಶಿಕ್ಷೆ ವಿಧಿಸಿದ ಕೆಲವೇ ಗಂಟೆಗಳ ನಂತರ, ಅವರ ಸಹೋದರ, ಬಹುಜನ ಸಮಾಜ ಪಕ್ಷದ ಸಂಸದ ಅಫ್ಜಲ್ ಅನ್ಸಾರಿ ಕೂಡ ದೋಷಿ ಎಂದು ಸಾಬೀತಾಗಿದೆ. ಸಂಸದ ಅಫ್ಜಲ್ ಅನ್ಸಾರಿಗೂ ಅದೇ 2007 ಗ್ಯಾಂಗ್‌ಸ್ಟರ್‌ ಆಕ್ಟ್ ಪ್ರಕರಣದಲ್ಲಿ ಅಪರಾಧಿ ಎಂದು ತೀರ್ಪು ನೀಡಲಾಯಿತು ಮತ್ತು ನಾಲ್ಕು ವರ್ಷಗಳ ಜೈಲು ಶಿಕ್ಷೆ ವಿಧಿಸಲಾಯಿತು.
ನ್ಯಾಯಾಲಯ ಮುಕ್ತಾರ್ ಅನ್ಸಾರಿಗೆ ₹ 5 ಲಕ್ಷ ಮತ್ತು ಅಫ್ಜಲ್ ಅನ್ಸಾರಿಗೆ ₹ 1 ಲಕ್ಷ ದಂಡ ವಿಧಿಸಿದೆ. ಬಿಜೆಪಿ ಶಾಸಕ ಕೃಷ್ಣಾನಂದ ರೈ ಅವರ ಹತ್ಯೆಗೆ ಸಂಬಂಧಿಸಿದ ಅಪಹರಣ ಮತ್ತು ಕೊಲೆ ಪ್ರಕರಣದಲ್ಲಿ ಸಹೋದರರಿಬ್ಬರು ಪ್ರಮುಖ ಆರೋಪಿಗಳಾಗಿದ್ದಾರೆ.
ಈ ಶಿಕ್ಷೆಯೊಂದಿಗೆ, ಅಫ್ಜಲ್ ಅನ್ಸಾರಿ ಅವರು ತಮ್ಮ ಲೋಕಸಭಾ ಸದಸ್ಯತ್ವವನ್ನು ಕಳೆದುಕೊಳ್ಳಲಿದ್ದಾರೆ, ಸಂಸತ್ತಿನ ನಿಯಮಗಳ ಪ್ರಕಾರ ಎರಡು ವರ್ಷ ಅಥವಾ ಅದಕ್ಕಿಂತ ಹೆಚ್ಚಿನ ಜೈಲು ಶಿಕ್ಷೆಗೆ ಒಳಗಾದ ಯಾವುದೇ ಸದಸ್ಯರು ಸ್ವಯಂಚಾಲಿತವಾಗಿ ಅನರ್ಹರಾಗುತ್ತಾರೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು 2019 ರ ಮಾನನಷ್ಟ ಪ್ರಕರಣದಲ್ಲಿ ತಪ್ಪಿತಸ್ಥರೆಂದು ಸಾಬೀತಾದ ನಂತರ ಮತ್ತು ಎರಡು ವರ್ಷಗಳ ಜೈಲು ಶಿಕ್ಷೆಗೆ ಗುರಿಯಾದ ನಂತರ ಅದೇ ನಿಯಮದ ಪ್ರಕಾರ ಇತ್ತೀಚೆಗೆ ತಮ್ಮ ಲೋಕಸಭಾ ಸದಸ್ಯತ್ವವನ್ನು ಕಳೆದುಕೊಂಡರು.
2005 ರಲ್ಲಿ ಘಾಜಿಪುರದಲ್ಲಿ ಮುಖ್ತಾರ್ ಅನ್ಸಾರಿ ಮತ್ತು ಅವರ ಸಹೋದರ ಅಫ್ಜಲ್ ಅನ್ಸಾರಿಯಿಂದ ಹತ್ಯೆಗೀಡಾದ ದಿವಂಗತ ಬಿಜೆಪಿ ಶಾಸಕ ಕೃಷ್ಣಾನಂದ ರೈ ಅವರ ಪತ್ನಿ, ಉತ್ತರ ಪ್ರದೇಶದಲ್ಲಿ ಮಾಫಿಯಾದ ಆಡಳಿತ ಕೊನೆಗೊಂಡಿದೆ ಮತ್ತು ನ್ಯಾಯಾಂಗದ ಮೇಲೆ ನನಗೆ ನಂಬಿಕೆ ಇದೆ ಎಂದು ಹೇಳಿದರು.”ನನಗೆ ನ್ಯಾಯಾಂಗದಲ್ಲಿ ನಂಬಿಕೆ ಇದೆ. ಗೂಂಡಾಗಳು, ಮಾಫಿಯಾಗಳ ಆಳ್ವಿಕೆ (ರಾಜ್ಯದಲ್ಲಿ) ಕೊನೆಗೊಂಡಿದೆ” ಎಂದು ಅಲ್ಕಾ ರೈ ಹೇಳಿದ್ದಾರೆ.
ಅಫ್ಜಲ್ ಅನ್ಸಾರಿಗೆ ಶಿಕ್ಷೆಯ ಪ್ರಮಾಣ ಪ್ರಕಟಿಸುವ ಮುನ್ನ ಘಾಜಿಪುರ ನ್ಯಾಯಾಲಯ ಗ್ಯಾಂಗ್​​ಸ್ಟರ್, ಮಾಫಿಯಾ ಮುಖ್ತಾರ್ ಅನ್ಸಾರಿಗೆ 10 ವರ್ಷಗಳ ಜೈಲು ಶಿಕ್ಷೆ ಮತ್ತು ₹ 5 ಲಕ್ಷ ದಂಡ ವಿಧಿಸಿದೆ.

ಪ್ರಮುಖ ಸುದ್ದಿ :-   ದೆಹಲಿ ಹೈಕೋರ್ಟ್ ಮರುಮೌಲ್ಯಮಾಪನದ ಅರ್ಜಿ ತಿರಸ್ಕರಿಸಿದ ನಂತರ ಕಾಂಗ್ರೆಸ್ಸಿಗೆ 1700 ಕೋಟಿ ತೆರಿಗೆ ನೋಟಿಸ್ ನೀಡಿದ ಐಟಿ : ಮೂಲಗಳು

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement