ರಾಜ್ಯ ವಿಧಾನಸಭೆ ಚುನಾವಣೆ: ಇಂದಿನಿಂದ ಬ್ಯಾಲೆಟ್ ಪೇಪರ್ ವೋಟಿಂಗ್ ಆರಂಭ

ಬೆಂಗಳೂರು: ಮೇ 10 ರಂದು ರಾಜ್ಯ ವಿಧಾನಸಭಾ ಚುನಾವಣೆ ನಡೆಯುತ್ತಿದ್ದು, ಇಂದಿನಿಂದ ಬ್ಯಾಲೆಟ್ ಪೇಪರ್ ವೋಟಿಂಗ್ ಆರಂಭವಾಗಲಿದೆ.
ಬ್ಯಾಲೆಟ್ ಪೇಪರ್ ವೋಟಿಂಗ್ ನಲ್ಲಿ 80 ವರ್ಷ ಮೇಲ್ಪಟ್ಟ ವೃದ್ಧರು, ವಿಕಲ ಚೇತನರಿಗೆ ಹಾಗೂ ಚುನಾವಣಾ ಕೆಲಸಕ್ಕೆ ನಿಯೋಜನೆಗೊಂಡಿರುವ ಪೊಲೀಸ್, ಚುನಾವಣೆ ಸಿಬ್ಬಂದಿಗೆ ಇಂದಿನಿಂದ ಮತದಾನ ಮಾಡಲು ಅವಕಾಶ ನೀಡಲಾಗಿದ್ದು, ಇಂದಿನಿಂದ ಆರಂಭವಾಗಲಿಎ. ಹಾಗೂ ಮೇ 6ರ ವರೆಗೆ ಮತದಾನ ಮಾಡಲು ಅವಕಾಶ ಕಲ್ಪಿಸಲಾಗಿದೆ.
80 ವರ್ಷ ಮೇಲ್ಪಟ್ಟ ವೃದ್ಧರಿಗೆ ಹಾಗೂ ವಿಕಲಚೇತನರಿಗೆ ಮನೆ ಬಳಿಯೇ ಮತ ಚಲಾಯಿಸುವ ವ್ಯವಸ್ಥೆ ಕಲ್ಪಿಸಲಾಗಿದೆ. ಚುನಾವಣಾ ಆಯೋಗದ ಸಿಬ್ಬಂದಿ ಅವರ ಮನೆ ಬಾಗಿಲಿನಲ್ಲಿಯೇ ಬ್ಯಾಲೆಟ್ ಪೇಪರ್ ನೀಡುತ್ತಾರೆ. ಈ ಮೂಲಕ ಹಿರಿಯ ನಾಗರಿಕರು ಮತ್ತು ವಿಕಲಚೇತನರಿಗೆ ಗೌಪ್ಯವಾಗಿ ಮತ ಚಲಾವಣೆಗೆ ಅವಕಾಶ ಕಲ್ಪಿಸಲಾಗಿದೆ. ಗೌಪ್ಯ ಮತ ಚಲಾಯಿಸುವಾಗ ಚುನಾವಣೆ ಸಿಬ್ಬಂದಿ ಸೇರಿದಂತೆ ಸ್ಥಳೀಯ ಪೊಲೀಸರು ಹಾಜರಿರುತ್ತಾರೆ. ಮನೆಯಲ್ಲೇ ಮತದಾನ ಮಾಡುವಾಗ ವೀಡಿಯೊ ರೆಕಾರ್ಡಿಂಗ್ ಮಾಡಲಿದ್ದು, ಮತದಾನದ ನಂತರ ಸ್ಟ್ರಾಂಗ್ ರೂಮ್ ಗೆ ಮತ ಪೆಟ್ಟಿಗೆ ಶಿಫ್ಟ್ ಆಗಲಿದೆ. ಈ ಮತಗಳನ್ನೂ ಮೇ 13 ರಂದು ಮತ ಎಣಿಕೆ ದಿನ ಓಪನ್ ಮಾಡಲಾಗುತ್ತದೆ.

ಪ್ರಮುಖ ಸುದ್ದಿ :-   ಸಿಎಂ ಸಿದ್ದರಾಮಯ್ಯ ಹೇಳಿಕೆಯಿಂದ ನಮ್ಮ ಮನೆತನದ ಗೌರವ ಹಾಳಾಗುತ್ತಿದೆ : ನೇಹಾ ತಂದೆ ನಿರಂಜನ ಹಿರೇಮಠ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement