ಕರ್ನಾಟಕ ವಿಧಾನಸಭೆ ಚುನಾವಣೆ 2023 : ನಗದು ಸೇರಿ ₹300 ಕೋಟಿ ಮೌಲ್ಯದ ವಸ್ತುಗಳ ವಶ

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಮತದಾರರಿಗೆ ಆಮಿಷವೊಡ್ಡಲು ಸಂಗ್ರಹಿಸಿದ್ದ ಸುಮಾರು ₹300 ಕೋಟಿ ಮೌಲ್ಯದ ವಸ್ತುಗಳು ಮತ್ತು ನಗದನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಭಾರತೀಯ ಚುನಾವಣಾ ಆಯೋಗ (ಇಸಿಐ) ತಿಳಿಸಿದೆ.
ರಾಜ್ಯ ವಿಧಾನಸಭಾ ಚುನಾವಣೆಗೆ ಕೇವಲ 10 ದಿನಗಳು ಮಾತ್ರ ಬಾಕಿ ಉಳಿದಿದ್ದು, ರಾಜಕೀಯ ಪಕ್ಷಗಳು ಹಣ ಮತ್ತು ವಸ್ತುಗಳನ್ನು ನೀಡುವ ಮೂಲಕ ಮತದಾರರನ್ನು ಸೆಳೆಯಲು ಯತ್ನಿಸುತ್ತಿವೆ. ಚುನಾವಣಾ ಆಯೋಗ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದು, ದಾಖಲೆಗಳಿಲ್ಲದ ನಗದು ಮತ್ತು ವಸ್ತುಗಳನ್ನು ವಶಪಡಿಸಿಕೊಳ್ಳುತ್ತಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಚುನಾವಣಾ ಆಯೋಗ ₹82 ಕೋಟಿಗೂ ಹೆಚ್ಚು ಮೌಲ್ಯದ ನಗದು ಮತ್ತು ಸಾಮಗ್ರಿಗಳನ್ನು ವಶಪಡಿಸಿಕೊಂಡಿದೆ.

ಚುನಾವಣಾ ಅಕ್ರಮಗಳನ್ನು ತಡೆಯುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿಧ ತನಿಖಾ ಸಂಸ್ಥೆಗಳು ಚುನಾವಣಾ ನೀತಿ ಸಂಹಿತೆ ಘೋಷಣೆಯಾದ ಬಳಿಕ ಈವರೆಗೆ ವಶಪಡಿಸಿಕೊಂಡು ನಗದು, ಮದ್ಯ ಸೇರಿದಂತೆ ಇತರೆ ವಸ್ತುಗಳ ಮೌಲ್ಯವು 300 ಕೋಟಿ ರೂ. ದಾಟಿದೆ. ಶನಿವಾರ ಒಂದೇ ದಿನ 6.2 ಕೋಟಿ ರೂ. ನಗದು ಜಪ್ತಿ ಮಾಡಲಾಗಿದ್ದು, ಮುಧೋಳ ವಿಧಾನಸಭಾ ಕ್ಷೇತ್ರದಲ್ಲಿ 5 ಕೋಟಿ ರೂ.ನಗದು ಹಾಗೂ ಬಾಗಲಕೋಟೆ ಕ್ಷೇತ್ರದಲ್ಲಿ 30 ಲಕ್ಷ ರೂ. ನಗದು ವಶಪಡಿಸಿಕೊಳ್ಳಲಾಗಿದೆ.
ಚುನಾವಣಾ ನೀತಿ ಸಂಹಿತೆ ಜಾರಿಯಾದ ಬಳಿಕ ಈವರೆಗೆ ಒಟ್ಟು 109.14 ಕೋಟಿ ರೂ. ನಗದು, 22.14 ಕೋಟಿ ರೂ. ಮೌಲ್ಯದ ಉಚಿತ ಕೊಡುಗೆಗಳನ್ನು ವಶಕ್ಕೆ ಪಡೆಯಲಾಗಿದೆ. 72.70 ಕೋಟಿ ರೂ. ಮೌಳ್ಯದ 19.14 ಲಕ್ಷ ಲೀಟರ್ ಮದ್ಯ, 18.29 ಕೋಟಿ ರೂ.ಮೌಲ್ಯದ 1,438 ಕೆಜಿ ಮಾದಕ ವಸ್ತುಗಳು, 76.05 ಕೋಟಿ ರೂ. ಮೌಲ್ಯದ 149.42 ಕೆಜಿ ಚಿನ್ನ ವಶಕ್ಕೆ ಪಡೆಯಲಾಗಿದೆ. ಈ ಮೂಲಕ ಒಟ್ಟು 302.78 ಕೋಟಿ ರೂ. ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.

ಪ್ರಮುಖ ಸುದ್ದಿ :-   ಸಚಿವ ದಿನೇಶ ಗುಂಡೂರಾವ್ ಮನೆಯಲ್ಲಿ ಅರ್ಧ ಪಾಕಿಸ್ತಾನ' ಹೇಳಿಕೆ : ಬಿಜೆಪಿ ಶಾಸಕ ಯತ್ನಾಳ ವಿರುದ್ಧದ ತನಿಖೆಗೆ ಹೈಕೋರ್ಟ್ ತಡೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement