ಜಮ್ಮು-ಕಾಶ್ಮೀರ ಮಾಜಿ ಗವರ್ನರ್ ಸತ್ಯಪಾಲ ಮಲಿಕ್ ವಿಚಾರಣೆ ನಡೆಸಿದ ಸಿಬಿಐ

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ಅವರನ್ನು ಕೇಂದ್ರ ತನಿಖಾ ದಳ (ಸಿಬಿಐ) ಅಧಿಕಾರಿಗಳು ಇಂದು, ಶುಕ್ರವಾರ ಐದು ಗಂಟೆಗಳ ಕಾಲ ವಿಚಾರಣೆ ನಡೆಸಿದರು, ಅವರು ಜೆ & ಕೆ ಗವರ್ನರ್ ಆಗಿದ್ದಾಗ ಎರಡು ಫೈಲ್‌ಗಳನ್ನು ಕ್ಲಿಯರ್‌ ಮಾಡಲು 300 ಕೋಟಿ ರೂಪಾಯಿಗಳ ಲಂಚದ ಆಫರ್‌ ನೀಡಲಾಗಿತ್ತು ಎಂದು ಆಗಸ್ಟ್ 23, … Continued

ಆಪರೇಷನ್ ಕಾವೇರಿ : ಸುಡಾನ್​ನಿಂದ ಸುರಕ್ಷಿತವಾಗಿ ಬೆಂಗಳೂರಿಗೆ ಬಂದಿಳಿದ 362 ಕನ್ನಡಿಗರು

ನವದೆಹಲಿ: ಕಲಹ ಪೀಡಿತ ಸುಡಾನ್‌ನಲ್ಲಿ ಸಿಲುಕಿರುವ ಭಾರತೀಯರನ್ನು ಸ್ಥಳಾಂತರಿಸುವ ಕಾರ್ಯಾಚರಣೆಯಡಿ ಶುಕ್ರವಾರ 754 ಜನರನ್ನು ಭಾರತಕ್ಕೆ ಕರೆತರಲಾಗಿದೆ. ಭಾರತೀಯ ವಾಯುಪಡೆಯ C-17 ಹೆವಿ-ಲಿಫ್ಟ್ ವಿಮಾನದಲ್ಲಿ 392 ಜನರು ನವದೆಹಲಿಗೆ ಆಗಮಿಸಿದರೆ, 362 ಭಾರತೀಯರ ಮತ್ತೊಂದು ಬ್ಯಾಚ್ ಅನ್ನು ಬೆಂಗಳೂರಿಗೆ ಕರೆತರಲಾಯಿತು. ಅಧಿಕೃತ ಮಾಹಿತಿಯ ಪ್ರಕಾರ, ದೇಶಕ್ಕೆ ಕರೆತಂದ ಒಟ್ಟು ಭಾರತೀಯರ ಸಂಖ್ಯೆ ಈಗ 1,360 ಆಗಿದೆ. … Continued

ಚುನಾವಣಾ ಪ್ರಚಾರದ ವೇಳೆ ಮಾಜಿ ಡಿಸಿಎಂ ಡಾ.ಪರಮೇಶ್ವರ ತಲೆಗೆ ಕಲ್ಲೇಟು: ತೀವ್ರ ಗಾಯ

ತುಮಕೂರು : ಚುನಾವಣಾ ಪ್ರಚಾರದ ವೇಳೆ ಕಲ್ಲು ತಗುಲಿ ಡಾ..ಪರಮೇಶ್ವರ ತಲೆಗೆ ಗಂಭೀರ ಗಾಯವಾಗಿದೆ. ಅವರಿಗೆ ಸಮೀಪದ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ತುಮಕೂರಿ ಸಿದ್ದಾರ್ಥ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಕೊರಟಗೆರೆ ಕ್ಷೇತ್ರದ ಭೈರನಹಳ್ಳಿ ಗ್ರಾಮದಲ್ಲಿ ಚುನಾವಣಾ ಪ್ರಚಾರದ ವೇಳೆ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ. ಶುಕ್ರವಾರ ಸಂಜೆ 5ರ ವೇಳೆಗೆ ಭೈರನಹಳ್ಳಿಯಲ್ಲಿ ಚುನಾವಣಾ ಪ್ರಚಾರ … Continued

ವೀಡಿಯೊ….: ಪ್ರವಾಸಿಗರ ವಾಹನದ ಮೇಲೆ ದಾಳಿಗೆ ಮುಂದಾದ ಹೆಬ್ಬುಲಿ : ಮುಂದೇನಾಯ್ತು ನೋಡಿ

ಸಫಾರಿಗೆ ಹೋದಾಗ ಕೆಲವೊಂದು ಬಾರಿ ಪ್ರಾಣಿಗಳು ಪ್ರವಾಸಿಗರ ಮೇಲೆ ದಾಳಿ ಮಾಡುತ್ತವೆ. ಇಂತಹದ್ದೇ ಘಟನೆಯೊಂದರಲ್ಲಿ ಪ್ರವಾಸಿಗರ ಗುಂಪು  ರಾಷ್ಟ್ರೀಯ ಉದ್ಯಾನವನದಲ್ಲಿ ಸಫಾರಿ ವಾಹನದಲ್ಲಿ ಮುಂದೆ ಸಾಗುತ್ತಿದ್ದಾಗ ಅಲ್ಲಿಯೇ ಗಿಡಕಂಟಿಗಳ ಮೆಯಲ್ಲಿದ್ದ ಬೃಹತ್‌ ಹುಲಿಯೊಂದು ಕೋಪದಿಂದ ದಾಳಿ ಮಾಡಲು ವಾಹನದ ಬಳಿ ಬಂದ ದೃಶ್ಯದ ವೀಡಿಯೊವೊಂದು ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗಿದೆ. ಭಾರತೀಯ ಅರಣ್ಯ ಸೇವೆ … Continued

ಮೋದಿ ಉಪನಾಮ ಹೇಳಿಕೆ: ನಾಳೆ ರಾಹುಲ್ ಗಾಂಧಿ ಮೇಲ್ಮನವಿ ವಿಚಾರಣೆ ನಡೆಸಲಿದೆ ಗುಜರಾತ್ ಹೈಕೋರ್ಟ್

ಗಾಂಧಿನಗರ: ಮೋದಿ ಉಪನಾಮ ಹೇಳಿಕೆಗೆ ಸಂಬಂಧಿಸಿದಂತೆ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯ ತಮ್ಮನ್ನು ದೋಷಿ ಎಂದು ನೀಡಿರುವ ತೀರ್ಪಿಗೆ ತಡೆ ಕೋರಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಲ್ಲಿಸಿರುವ ಮೇಲ್ಮನವಿಯನ್ನು ಗುಜರಾತ್ ಹೈಕೋರ್ಟ್‌ ಏಪ್ರಿಲ್ 29ರಂದು (ನಾಳೆ) ವಿಚಾರಣೆ ನಡೆಸಲಿದೆ. ಈ ಹಿಂದೆ ರಾಹುಲ್‌ ಗಾಂಧಿ ಮೇಲ್ಮನವಿಯ ವಿಚಾರಣೆಯಿಂದ ಹಿಂದೆ ಸರಿದಿದ್ದ ನ್ಯಾ. ಗೀತಾ ಗೋಪಿ ಅರ್ಜಿಯ ವಿಚಾರಣೆಗೆ … Continued

ಸೋನಿಯಾ ಗಾಂಧಿ ವಿಷಕನ್ಯೆಯೇ ? : ಖರ್ಗೆ ಹೇಳಿಕೆ ಬಗ್ಗೆ ಯತ್ನಾಳ​ ವಿವಾದಾತ್ಮಕ ಹೇಳಿಕೆ

ಬೆಂಗಳೂರು: ಪ್ರಧಾನಿ ಮೋದಿ ವಿಷ ಸರ್ಪ ಇದ್ದಂಗೆ, ನೆಕ್ಕಿ ನೋಡಿದ್ದರೆ ಸತ್ತು ಹೋಗುತ್ತಾರೆ ಎಂಬ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ರಾಜ್ಯ ರಾಜಕಾರಣದಲ್ಲಿ ಭಾರಿ ಚರ್ಚೆಗೆ ಗ್ರಾಸವಾದ ಬೆನ್ನಲ್ಲೇ ಬಿಜೆಪಿ ನಾಯಕ ಬಸನಗೌಡ ಪಾಟೀಲ ಯತ್ನಾಳ ಈಗ ಸೋನಿಯಾ ಗಾಂಧಿ ಕುರಿತು ನೀಡಿದ ಹೇಳಿಕೆ ಚರ್ಚೆಗೆ ಗ್ರಾಸವಾಗಿದೆ. ಕಾಂಗ್ರೆಸ್‌ನವರು … Continued

ಪ್ರಧಾನಿ ಮೋದಿ ವಿಷದ ಹಾವಿದ್ದಂತೆ ಹೇಳಿಕೆ: ಖರ್ಗೆ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಿದ ಬಿಜೆಪಿ

ಬೆಂಗಳೂರು: ನರೇಂದ್ರ ಮೋದಿ ಅವರನ್ನು ವಿಷದ ಹಾವಿಗೆ ಹೋಲಿಸಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ರಾಜ್ಯ ವಿಧಾನಸಭಾ ಚುನಾವಣಾ ಪ್ರಚಾರದಲ್ಲಿರುವ ಮಲ್ಲಿಕಾರ್ಜುನ ಖರ್ಗೆ ಅವರು “ಮೋದಿ ವಿಷದ ಹಾವಿದ್ದಂತೆ. ನೆಕ್ಕಿದರೆ ಸತ್ತೇ ಹೋಗುತ್ತಾರೆ” ಎಂದು ಹೇಳಿಕೆ ನೀಡಿದ್ದರು. ಖರ್ಗೆ ಅವರ ಈ ಹೇಳಿಕೆ ರಾಜ್ಯಾದ್ಯಂತ ಭಾರೀ ಚರ್ಚೆಗೆ … Continued

ಕುಮಟಾ: ಚಂದಾವರ ಚೆಕ್‌ ಪೋಸ್ಟ್‌ ಬಳಿ 93.50 ಲಕ್ಷ ರೂ. ದಾಖಲೆ ಇಲ್ಲದ ಹಣ ಜಪ್ತಿ

ಕಾರವಾರ: ಕುಮಟಾದತ್ತ ಆಟೋದಲ್ಲಿ ದಾಖಲೆ ಇಲ್ಲದೆ ಅಕ್ರಮವಾಗಿ ಸಾಗಾಟವಾಗುತ್ತಿದ್ದ 93.50 ಲಕ್ಷ ರೂ. ಹಣವನ್ನು ಫ್ಲೈಯಿಂಗ್ ಸ್ಕ್ವಾಡ್ ಪತ್ತೆ ಹಚ್ಚಿ ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಅಕ್ರಮಗಳನ್ನು ತಡೆಯಲು ಕಾರ್ಯಾಚರಣೆ ನಡೆಸುತ್ತಿರುವ ಚುನಾವಣಾಧಿಕಾರಿಗಳು ಕಟ್ಟುನಿಟ್ಟಿನ ತಪಾಸಣೆಯಲ್ಲಿ ತೊಡಗಿದ್ದಾರೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ಸಮೀಪದ ಹೊನ್ನಾವರ ತಾಲೂಕಿನ ಚಂದಾವರ ಚೆಕ್ … Continued

ರಾಜ್ಯದ ಈ ಜಿಲ್ಲೆಗಳಲ್ಲಿ 3 ದಿನ ಗುಡುಗು ಸಹಿತ ಮಳೆ ಸಾಧ್ಯತೆ : ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಹಾಗೂ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಇಂದಿನಿಂದ ಮೂರು ದಿನ (ಏಪ್ರಿಲ್‌ 30) ಗುಡುಗು ಸಹಿತ ಮಳೆ (Rain)ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯ ಎಲ್ಲ ಜಿಲ್ಲೆಗಳಲ್ಲಿ ಮತ್ತು ಉತ್ತರ ಒಳನಾಡಿನ ಬೀದರ, ಬಾಗಲಕೋಟೆ, ಬೆಳಗಾವಿ, ಗದಗ, ಹಾವೇರಿ, ರಾಯಚೂರು, ಕಲಬುರಗಿ, ಯಾದಗಿರಿ, ಕೊಪ್ಪಳ, … Continued

ಗುರು ಗ್ರಂಥಾ ಸಾಹಿಬ್‌ ಅಪವಿತ್ರಗೊಳಿಸಿದ ಪ್ರಕರಣ: ನ್ಯಾಯಾಲಯದಲ್ಲಿ ಆರೋಪಿ ಮೇಲೆ ದಾಳಿ ನಡೆಸಲು ಗನ್‌ ಹಿಡಿದು ಬಂದಿದ್ದ ವಕೀಲನ ಬಂಧನ

ಮೊರಿಂಡಾ (ಪಂಜಾಬ್)‌: ಎರಡು ದಿನಗಳ ರಿಮಾಂಡ್‌ ಮುಗಿದ ನಂತರ ಜಸ್ಬೀರ್ ಸಿಂಗ್ ನನ್ನು ಪಂಜಾಬ್‌ನ ರೂಪನಗರದ ನ್ಯಾಯಾಲಯಕ್ಕೆ ಹಾಜರುಪಡಿಸುತ್ತಿದ್ದಾಗ ವ್ಯಕ್ತಿಯೊಬ್ಬರು ರಿವಾಲ್ವರ್‌ನೊಂದಿಗೆ ಒಳಗೆ ಪ್ರವೇಶಿಸಿದ್ದು, ಪೊಲೀಸರು ದಾಳಿ ಯನ್ನವನ್ನು ವಿಫಲಗೊಳಿಸಿದ್ದಾರೆ ಎಂದು ವರದಿಯಾಗಿದೆ. ರಿವಾಲ್ವರ್‌ನೊಂದಿಗೆ ನ್ಯಾಯಾಲಯಕ್ಕೆ ಪ್ರವೇಶಿಸಿದ ವ್ಯಕ್ತಿಯನ್ನು ಸಾಹೇಬ್ ಸಿಂಗ್ ಖುರ್ಲ್ ಎಂದು ಗುರುತಿಸಲಾಗಿದೆ. ಆತ ಮೊರಿಂಡಾ ನಿವಾಸಿಯಾಗಿದ್ದು, ವಕೀಲ ಎಂದು ಹೇಳಲಾಗಿದೆ. ಪೊಲೀಸರು … Continued