ಮುಸ್ಲಿಮರಿಗೆ ಮೀಸಲು ರದ್ದು ಆದೇಶ ಮೇ 9ರ ವರೆಗೆ ಜಾರಿಗೆ ತರುವುದು ಬೇಡ: ರಾಜ್ಯ ಸರ್ಕಾರಕ್ಕೆ ಸುಪ್ರೀಂಕೋರ್ಟ್‌ ಸೂಚನೆ

ನವದೆಹಲಿ: ಮುಸ್ಲಿಂ ಸಮುದಾಯಕ್ಕೆ ಹಿಂದುಳಿದ ವರ್ಗದ ಅಡಿ ಕಲ್ಪಿಸಿದ್ದ ಶೇ. 4 ರಷ್ಟು ಮೀಸಲಾತಿಯನ್ನು ಹಿಂಪಡೆದಿರುವ ಕರ್ನಾಟಕ ಸರ್ಕಾರದ ಆದೇಶವನ್ನು ಆದೇಶವನ್ನು ಮೇ 9ರ ವರೆಗೆ ಜಾರಿಗೊಳಿಸದಂತೆ ಸುಪ್ರೀಂ ಕೋರ್ಟ್ ಮಂಗಳವಾರ ನಿರ್ದೇಶನ ನೀಡಿದೆ. ಸಾಲಿಸಿಟರ್‌ ಜನರಲ್‌ ತುಷಾರ್‌ ಮೆಹ್ತಾ ಅವರು ಪ್ರಕರಣದ ವಿಚಾರಣೆಯನ್ನು ಮುಂದೂಡುವಂತೆ ಕೋರಿದ ಹಿನ್ನೆಲೆಯಲ್ಲಿ ವಿಚಾರಣೆ ಮುಂದೂಡಲಾಗಿದೆ. ಅಲ್ಲಿಯವರೆಗೆ ಹಿಂದಿನ ಆದೇಶ … Continued

ಆರೋಪ ಗಂಭೀರವಾದದ್ದು….: ಭಾರತ ಕುಸ್ತಿ ಒಕ್ಕೂಟದ ಅಧ್ಯಕ್ಷರ ವಿರುದ್ಧದ ಲೈಂಗಿಕ ಕಿರುಕುಳದ ದೂರು ವಿಚಾರಣೆಗೆ ಸುಪ್ರೀಂ ಕೋರ್ಟ್‌ ಸಮ್ಮತಿ

ನವದೆಹಲಿ: ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಭಾರತ ಕುಸ್ತಿ ಒಕ್ಕೂಟದ (ಡಬ್ಲ್ಯುಎಫ್‌ಐ) ಅಧ್ಯಕ್ಷ ಮತ್ತು ಬಿಜೆಪಿ ಸಂಸದ ಬ್ರಿಜ್‌ ಭೂಷಣ್‌ ಶರಣ್‌ ಸಿಂಗ್‌ ವಿರುದ್ಧ ಎಫ್‌ಐಆರ್‌ ದಾಖಲಿಸುವಂತೆ ಕೋರಿ ಕುಸ್ತಿಪಟುಗಳು ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್‌ ಮಂಗಳವಾರ ಸಮ್ಮತಿಸಿದೆ. ಮನವಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ವಿಚಾರಣೆ ನಡೆಸಲಿದೆ. ಕುಸ್ತಿಪಟುಗಳು … Continued

ರತನ್ ಟಾಟಾಗೆಆಸ್ಟ್ರೇಲಿಯಾದ ಅತ್ಯುನ್ನತ ನಾಗರಿಕ ಗೌರವ ಪುರಸ್ಕಾರ ಪ್ರದಾನ

ಮುಂಬೈ : ಕೈಗಾರಿಕೋದ್ಯಮಿ, ಲೋಕೋಪಕಾರಿ (ಚಾರಿಟಿ) ಕಾರ್ಯಕ್ರಮ ಮತ್ತು ಮಾನವೀಯತೆಗೆ ಹೆಸರುವಾಸಿಯಾದ ರತನ್‌ ಟಾಟಾ ಅವರಿಗೆ ಆಸ್ಟ್ರೇಲಿಯಾದ ಅತ್ಯುನ್ನತ ನಾಗರಿಕ ಗೌರವ ಪುರಸ್ಕಾರ ನೀಡಲಾಗಿದೆ. ಭಾರತದಲ್ಲಿನ ಆಸ್ಟ್ರೇಲಿಯಾದ ಹೈ ಕಮಿಷನರ್, ಬೇರಿ ಓ’ಫಾರೆಲ್ ಅವರು ತಮ್ಮ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಟಾಟಾ ಸನ್ಸ್ ಅಧ್ಯಕ್ಷ ಮಾಜಿ ರತನ್‌ ಟಾಟಾ ಅವರಿಗೆ ಆಸ್ಟ್ರೇಲಿಯಾದ ಅತ್ಯುನ್ನತ ಗೌರವವಾದ ಆರ್ಡರ್ … Continued

ಕರ್ನಾಟಕದ ಈ ಪುಟ್ಟ ಬಾಲಕಿಯ ʼಪಿಯಾನೋʼ ಪ್ರತಿಭೆಗೆ ಮನಸೋತ ಪ್ರಧಾನಿ : ಪುಟಾಣಿಯ ರಮಣೀಯ ವೀಡಿಯೊ ಹಂಚಿಕೊಂಡ ಮೋದಿ | ವೀಕ್ಷಿಸಿ

ಕರ್ನಾಟಕದ ಪುಟ್ಟ ಬಾಲಕಿಯೊಬ್ಬಳ ಪಿಯಾನೋ ಪ್ರತಿಭೆಗೆ ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ. ಪಲ್ಲವಗಳ ಪಲ್ಲವಿಯಲಿ ಗರಿಗೆದರಿದೆ ಗೀತಾ… ಕನ್ನಡ ಗೀತೆ ಹಾಡುತ್ತಿರುವ ಮಹಿಳೆಯೊಂದಿಗೆ ಸಿಂಕ್ ಆಗಿ ಪಿಯಾನೋ ನುಡಿಸುವ ಪುಟ್ಟ ಹುಡುಗಿಯ ಸುಂದರವಾದ ವೀಡಿಯೊ ಇಂಟರ್ನೆಟ್‌ನ ಲಕ್ಷಾಂತರ ಹೃದಯವನ್ನು ಗೆದ್ದಿದೆ. ಎಷ್ಟರಮಟ್ಟಿಗೆ ಎಂದರೆ ಪ್ರಧಾನಿ ನರೇಂದ್ರ ಮೋದಿ ಕೂಡ ಟ್ವಿಟರ್‌ನಲ್ಲಿ ಸಂತೋಷಕರ ಕ್ಲಿಪ್ ಅನ್ನು ಹಂಚಿಕೊಂಡಿದ್ದಾರೆ. … Continued

ಮಾಜಿ ಸಚಿವ, ಕಾಂಗ್ರೆಸ್ ಹಿರಿಯ ನಾಯಕ ಡಿ.ಬಿ.ಇನಾಮದಾರ ನಿಧನ

ಬೆಳಗಾವಿ : ಮಾಜಿ ಸಚಿವ, ಕಾಂಗ್ರೆಸ್‌ನ ಹಿರಿಯ ನಾಯಕ ಡಿ. ಬಿ. ಇನಾಮಾದಾರ್ (74) ನಿಧನರಾಗಿದ್ದಾರೆ. ಬೆಳಗಾವಿ ಜಿಲ್ಲೆಯ ಕಾಂಗ್ರೆಸ್ ನಾಯಕರಾದ ಇನಾಂದಾರ್‌ ಅವರನ್ನು ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶ್ವಾಸಕೋಶ ಮತ್ತು ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ನಸುಕಿನ ಜಾವ ಕೊನೆಯುಸಿರೆಳೆದಿದ್ದಾರೆ. ಮೃತರು ಪತ್ನಿ, ಇಬ್ಬರು ಪುತ್ರರು, ಓರ್ವ ಪುತ್ರಿ … Continued

ರಾಜ್ಯದ 20ಕ್ಕೂ ಅಧಿಕ ಜಿಲ್ಲೆಗಳಲ್ಲಿ 4-5 ದಿನ ಮಳೆ ಮುನ್ಸೂಚನೆ

ಬೆಂಗಳೂರು: ಕರ್ನಾಟಕದ ಹೆಚ್ಚಿನ ಜಿಲ್ಲೆಗಳಲ್ಲಿ ಏಪ್ರಿಲ್ 29ರ ವರೆಗೆ ಮಳೆ(Rain)ಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಉತ್ತರ ಒಳನಾಡಿನ ಬೆಳಗಾವಿ, ಬಾಗಲಕೋಟೆ, ರಾಯಚೂರು, ಕೊಪ್ಪಳ, ಕಲಬುರಗಿ, ಯಾದಗಿರಿ, ಬೀದರ ಹಾಗೂ ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ತುಮಕೂರು, … Continued

ದೇಶದ ಅಗ್ರಮಾನ್ಯ ಕುಸ್ತಿಪಟುಗಳ ಪ್ರಭಟನೆ : ಭಾರತೀಯ ಕುಸ್ತಿ ಒಕ್ಕೂಟದ ಮೇ 7ರ ಚುನಾವಣೆ ಸ್ಥಗಿತ

ನವದೆಹಲಿ : ಭಾರತೀಯ ಕುಸ್ತಿ ಒಕ್ಕೂಟದ (ಡಬ್ಲ್ಯುಎಫ್‌ಐ) ಮೇ 7 ರಂದು ನಿಗದಿಯಾಗಿದ್ದ ಚುನಾವಣೆಯನ್ನು ಕ್ರೀಡಾ ಸಚಿವಾಲಯ ಸೋಮವಾರ ಸ್ಥಗಿತಗೊಳಿಸಿದೆ ಮತ್ತು 45 ದಿನಗಳಲ್ಲಿ ಚುನಾವಣೆ ನಡೆಸಲು ತಾತ್ಕಾಲಿಕ ಸಮಿತಿಯನ್ನು ರಚಿಸುವಂತೆ ಭಾರತೀಯ ಒಲಿಂಪಿಕ್ ಅಸೋಸಿಯೇಷನ್ (ಐಒಎ) ಗೆ ಸೂಚಿಸಿದೆ. ಬಜರಂಗ್ ಪುನಿಯಾ ಮತ್ತು ವಿನೇಶ್ ಫೋಗಟ್ ಸೇರಿದಂತೆ ದೇಶದ ಉನ್ನತ ಕುಸ್ತಿಪಟುಗಳು ಭಾನುವಾರ ಇಲ್ಲಿ … Continued

ಗೋಕಾಕ; ದಾಖಲೆಯಿಲ್ಲದ 65 ಲಕ್ಷ ರೂ. ವಶ

ಬೆಳಗಾವಿ : ಚುನಾವಣೆ ಹಿನ್ನೆಲೆಯಲ್ಲಿ ಎಲ್ಲ ಚೆಕ್‌ ಪೋಸ್ಟ್‌ಗಳಲ್ಲಿ ಬಿಗಿ ತಪಾಸಣೆ ನಡೆಸಲಾಗುತ್ತಿದೆ. ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಪರಾನಟ್ಟಿ ಚೆಕ್ ಪೋಸ್ಟ್ ನಲ್ಲಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಪರಿಶೀಲನೆ ನಡೆಸಿದಾಗ ದಾಖಲೆ ಇಲ್ಲದ 65 ಲಕ್ಷ ರೂ.ಗಳು ಇರುವುದು ಕಂಡು ಬಂದಿದೆ. ಈ ಸಂಬಂಧ ಚುನಾವಣಾ ಅಧಿಕಾರಿಗಳು ಹಣ ಮತ್ತು ಹಣವನ್ನು … Continued

ಪಾಕಿಸ್ತಾನದ ಸ್ವಾತ್‌ ಪೊಲೀಸ್ ಠಾಣೆಯಲ್ಲಿ ಬಾಂಬ್ ಸ್ಫೋಟ : 10 ಮಂದಿ ಸಾವು

ಪೇಶಾವರ: ಪಾಕಿಸ್ತಾನದ ಸ್ವಾತ್‌ನಲ್ಲಿರುವ ಭಯೋತ್ಪಾದನಾ ನಿಗ್ರಹ ಇಲಾಖೆ (ಸಿಟಿಡಿ) ಪೊಲೀಸ್ ಠಾಣೆಯಲ್ಲಿ ಸೋಮವಾರ ನಡೆದ ಶಂಕಿತ ಆತ್ಮಾಹುತಿ ದಾಳಿಯಲ್ಲಿ ಎಂಟು ಪೊಲೀಸ್ ಅಧಿಕಾರಿಗಳು ಸೇರಿದಂತೆ ಕನಿಷ್ಠ 10 ಜನರು ಸಾವಿಗೀಡಾಗಿದ್ದಾರೆ ಮತ್ತು 20 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರನ್ನು ಉಲ್ಲೇಖಿಸಿ ಜಿಯೋ ಟಿವಿ ವರದಿ ಮಾಡಿದೆ. ಪೊಲೀಸ್ ಠಾಣೆಯೊಳಗೆ ಎರಡು ಸ್ಫೋಟಗಳು ಕಟ್ಟಡವನ್ನು … Continued

ಮಾಜಿ ಸಿಎಂ ಕುಮಾರಸ್ವಾಮಿ ಆಸ್ಪತ್ರೆಯಿಂದ ಡಿಸ್ಚಾರ್ಜ್

ಬೆಂಗಳೂರು: ತೀವ್ರ ಜ್ವರದಿಂದ ಬಳಲುತ್ತಿದ್ದ ಮಾಜಿ ಮುಖ್ಯಮಂತ್ರಿ ಎಚ್. ಡಿ ಕುಮಾರಸ್ವಾಮಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ ಎಂದು ವರದಿಯಾಗಿದೆ. ಜ್ವರದ ಕಾರಣ ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಕುಮಾರಸ್ವಾಮಿ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು, ವೈದ್ಯರ ಸಲಹೆಯ ನಂತರ ಡಿಸ್ಚಾರ್ಜ್ ಆಗಿದ್ದಾರೆ. ಒಂದೆರಡು ತಿಂಗಳಿನಿಂದ ಪಂಚರತ್ನ ಯಾತ್ರೆ ಕೈಗೊಂಡು ರಾಜ್ಯಾದ್ಯಂತ ಪ್ರವಾಸ ಕೈಗೊಂಡಿದ್ದರು. … Continued