ನೂರಾರು ಕಾರ್ಯಕರ್ತರೊಂದಿಗೆ ಬಿಜೆಪಿ ಸೇರಿದ ಶಿವಾನಂದ ಹೆಗಡೆ

posted in: ರಾಜ್ಯ | 0

ಹೊನ್ನಾವರ: ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಹಳದೀಪುರದಲ್ಲಿ ನಡೆದ ಬೃಹತ್‌ ಕಾರ್ಯಕ್ರಮದಲ್ಲಿ ಕೆಡಿಸಿಸಿ ಬ್ಯಾಂಕ್ ನಿರ್ದೇಶಕ ಹಾಗೂ ಕಾಂಗ್ರೆಸ್‌ ಟಿಕೆಟ್‌ ಆಕಾಂಕ್ಷಿಯಾಗಿದ್ದ ಶಿವಾನಂದ ಹೆಗಡೆ ಕಡತೋಕಾ ಅವರು ಸೋಮವಾರ ಸಹಸ್ರಾರು ಅಭಿಮಾನಿಗಳೊಂದಿಗೆ ಬಿಜೆಪಿಗೆ ಸೇರ್ಪಡೆಯಾದರು.
ನಂತರ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಕೇವಲ ಹಣವನ್ನು ನೋಡಿ, ಕ್ಷೇತ್ರಕ್ಕೆ ಪರಿಚಯವೇ ಇಲ್ಲದ ಹೊಸಬರನ್ನು ತಂದು ಕುಮಟಾ-ಹೊನ್ನಾವರ ಮತ ಕ್ಷೇತ್ರದ ಟಿಕೆಟ್‌ ನೀಡಿದೆ. ಈ ಕ್ರಮದಿಂದ ಎಲ್ಲಾ ಕಾರ್ಯಕರ್ತರಿಗೆ ನೋವಾಗಿದೆ. ಹೀಗಾಗಿ ಈ ಸಲ ಕಾರ್ಯಕರ್ತರ ಮಾತಿನಂತೆ ಕಾಂಗ್ರೆಸ್ ಪಕ್ಷದಿಂದ ಹೊರಬಂದು ಬಿಜೆಪಿ ಸೇರ್ಪಡೆಯಾಗಿದ್ದೇನೆ ಎಂದರು.ಕುಮಟಾ ಮತಕ್ಷೇತ್ರದಲ್ಲಿ ಕಾಂಗ್ರೆಸ್ ಅನ್ನು ಸೋಲಿಸಲು ಬಿಜೆಪಿಯ ದಿನಕರ ಶೆಟ್ಟಿ ಅವರನ್ನು ಬೆಂಬಲಿಸುವ ಮೂಲಕ ಬಿಜೆಪಿ ಗೆಲುವಿಗೆ ಎಲ್ಲಾ ಕಾರ್ಯಕರ್ತರು ಶ್ರಮ ವಹಿಸಬೇಕೆಂದು ಕರೆ ನೀಡಿದರು.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಕಾಂಗ್ರೆಸ್‌ಗೆ ಕೇವಲ ಬಿಜೆಪಿ ಟೀಕಿಸುವುದೇ ಕೆಲಸವಾಗಿದೆ. ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರ ವಿರುದ್ಧ ಬೀದಿ ಬೀದಿಯಲ್ಲಿ ಪ್ರತಿಭಟನೆ ನಡೆಸಿದ್ದ ಕಾಂಗ್ರೆಸ್ ಈಗ ಅವರನ್ನೇ ಕರೆದು ಟಿಕೆಟ್ ನೀಡಿದೆ ಎಂದು ಟೀಕಿಸಿದರು.
ಬಿಜೆಪಿ ಅಭ್ಯರ್ಥಿ ದಿನಕರ ಶೆಟ್ಟಿ ಮಾತನಾಡಿ, ಶಿವಾನಂದ ಹೆಗಡೆ ಅವರು ಬಿಜೆಪಿಗೆ ಬಂದಿದ್ದು ನನಗೆ ಬಲಬಂದಿದೆ ಎಂದು ಹೇಳಿದೆ. ಶಿವಾನಂದ ಹೆಗಡೆಯವರ ಅಭಿಮಾನಿಗಳಿಂದ ನನ್ನ ಗೆಲುವು ನಿಶ್ಚಿತ ಎಂದರು.
ಗೋವಾದ ಶಾಸಕ ಕೃಷ್ಣ ಸಾಲ್ಕರ್ ಮಾತನಾಡಿ, ಈ ಕ್ಷೇತ್ರದಲ್ಲಿ ಓಡಾಡುವಾಗ ಶಿವಾನಂದ ಹೆಗಡೆ ಸವರ ಬಗ್ಗೆ ಸಾಕಷ್ಟು ಕೇಳಿದ್ದೇನೆ. ಸರಿಯಾದ ವ್ಯಕ್ತಿ ತಪ್ಪಾದ ಪಕ್ಷದಲ್ಲಿ ಇದ್ದರು. ಇದೀಗ ಬಿಜೆಪಿ ಗೆ ಬಂದು ಎಲ್ಲವೂ ಸರಿಯಾಗುತ್ತಿದೆ ಎಂದರು.
ಜಿಲ್ಲಾ ಚುನಾವಣಾ ಸಂಚಾಲಕ ಕೆ.ಜಿ ನಾಯ್ಕ, ವಿಧಾನ ಪರಿಷತ್ ಸದಸ್ಯ ಗಣಪತಿ ಉಳ್ವೇಕರ್, ಎಂ.ಜಿ ಭಟ್ಟ, ಸುಬ್ರಾಯ ವಾಳ್ಕೆ, ವೆಂಕಟ್ರಮಣ ಹೆಗಡೆ, ನಾಗರಾಜ ನಾಯ್ಕ ತೊರ್ಕೆ ಇತರರಿರಿದ್ದರು. ರಾಜು ಭಂಡಾರಿ ಸ್ವಾಗತಿಸಿದರು. ಮಂಜುನಾಥ ನಾಯ್ಕ ವಂದಿಸಿದರು.

ಇಂದಿನ ಪ್ರಮುಖ ಸುದ್ದಿ :-   ಗೃಹಲಕ್ಷ್ಮೀ ಯೋಜನೆಯ ಅರ್ಜಿ ನಮೂನೆ ಬಿಡುಗಡೆ : 2000 ರೂ. ಪಡೆಯಲು ಯಾವ್ಯಾವ ದಾಖಲೆ ಕೊಡಬೇಕು? ಇಲ್ಲಿದೆ ಮಾಹಿತಿ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

0 / 5. ಒಟ್ಟು ವೋಟುಗಳು 0

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement