ವಾಣಿಜ್ಯ ಬಳಕೆಯ ಎಲ್​ಪಿಜಿ​ ಸಿಲಿಂಡರ್​ ಬೆಲೆಯಲ್ಲಿ ಭಾರಿ ಇಳಿಕೆ

ನವದೆಹಲಿ: ಮೇ 1 ರಿಂದ ಜಾರಿಗೆ ಬರುವಂತೆ 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಸರ್ಕಾರ ಕಡಿತಗೊಳಿಸಿದೆ. ಇತ್ತೀಚಿನ ಪರಿಷ್ಕರಣೆಯ ನಂತರ, ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ನ ಬೆಲೆ 171.50 ರೂಪಾಯಿಗಳಷ್ಟು ಕಡಿಮೆಯಾಗಿದೆ. ಇಂದಿನಿಂದ ದೆಹಲಿಯಲ್ಲಿ 19 ಕೆಜಿ ಎಲ್‌ಪಿಜಿ ಸಿಲಿಂಡರ್ 1856.50 ರೂ.ಗಳಿಗೆ ಲಭ್ಯವಾಗಲಿದೆ.
ಮುಂಬೈನಲ್ಲಿ 19 ಕೆಜಿ ವಾಣಿಜ್ಯ ಸಿಲಿಂಡರ್‌ನ ಬೆಲೆ 1808.50 ರೂ ಆಗಿದ್ದರೆ, ಕೋಲ್ಕತ್ತಾದಲ್ಲಿ 1960.50 ರೂ.ಗಳಾಗಿವೆ. ಚೆನ್ನೈನಲ್ಲಿ 19 ಕೆಜಿ ಎಲ್‌ಪಿಜಿ ಸಿಲಿಂಡರ್ 2,021.50 ರೂ.ಗಳಿಗೆ ಮಾರಾಟವಾಗುತ್ತಿದೆ.
ಈ ಪರಿಷ್ಕರಣೆಯ ಮೊದಲು, ಇಂಡಿಯನ್ ಆಯಿಲ್ ಕಾರ್ಪೊರೇಷನ್ (ಐಒಸಿ) ಪ್ರಕಾರ ದೆಹಲಿಯಲ್ಲಿ 19 ಕೆಜಿ ಎಲ್‌ಪಿಜಿ ಸಿಲಿಂಡರ್‌ನ ಬೆಲೆ ಕ್ರಮವಾಗಿ 2,028 ರೂ., ಕೋಲ್ಕತ್ತಾದಲ್ಲಿ ರೂ. 2,132, ಮುಂಬೈನಲ್ಲಿ ರೂ. 1,980 ಮತ್ತು ಚೆನ್ನೈನಲ್ಲಿ ರೂ. 2,192.50.ಗಳಾಗಿತ್ತು.
ಸರ್ಕಾರಿ ಬೆಂಬಲಿತ ತೈಲ ಮಾರುಕಟ್ಟೆ ಕಂಪನಿಗಳು (OMC ಗಳು) ಏಪ್ರಿಲ್ 1 ರಂದು 19 ಕೆಜಿ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಪ್ರತಿ ಯೂನಿಟ್‌ಗೆ ರೂ 91.50 ರಷ್ಟು ಕಡಿಮೆ ಮಾಡಿತ್ತು.
ತೈಲ ಉತ್ಪಾದಕ ಕಂಪನಿಗಳು ಈ ವರ್ಷದ ಮಾರ್ಚ್‌ನಲ್ಲಿ 19 ಕೆಜಿ ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನು ಪ್ರತಿ ಯೂನಿಟ್‌ಗೆ 350.50 ರೂ ಮತ್ತು ಗೃಹಬಳಕೆಯ ಸಿಲಿಂಡರ್‌ಗಳ ಬೆಲೆಯನ್ನು ಪ್ರತಿ ಯೂನಿಟ್‌ಗೆ ರೂ 50 ರಷ್ಟು ಹೆಚ್ಚಿಸಿದ್ದವು.

ಪ್ರಮುಖ ಸುದ್ದಿ :-   50 ಕ್ಕೂ ಹೆಚ್ಚು ಶಾಲೆಗಳಿಗೆ ಬಾಂಬ್ ಬೆದರಿಕೆ : ಮಕ್ಕಳನ್ನು ಮನೆಗೆ ಕಳುಹಿಸಿದ ಶಾಲೆಗಳು, ಪರೀಕ್ಷೆಗಳು ಸ್ಥಗಿತ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement