ಡಿಕೆ ಶಿವಕುಮಾರ ತೆರಳುತ್ತಿದ್ದ ಹೆಲಿಕಾಪ್ಟರಿಗೆ ಬಡಿದ ರಣಹದ್ದು : ತುರ್ತು ಭೂಸ್ಪರ್ಶ, ತಪ್ಪಿದ ಅನಾಹುತ

posted in: ರಾಜ್ಯ | 0

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಮುಳಬಾಗಿಲಿಗೆ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶಗೊಂಡಿದೆ. ಅವರು ದೊಡ್ಡ ಅವಘಡದಿಂದ ಪಾರಾಗಿದ್ದಾರೆ.
ಹೆಲಿಕಾಪ್ಟರಿಗೆ ರಣಹದ್ದು ಬಡಿದ ಕಾರಣ ಅವರಿದ್ದ ಹೆಲಿಕಾಪ್ಟರ್ ಅನ್ನು ತುರ್ತು ಭೂಸ್ಪರ್ಶ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಹೆಲಿಕಾಪ್ಟರ್ ಗಾಜಿನ ಕಿಟಕಿಯ ಗಾಜು ಪುಡಿಪುಡಿಯಾಗಿದೆ. ಶಿವಕುಮಾರ್ ಮತ್ತು ಸಿಬ್ಬಂದಿ ಸುರಕ್ಷಿತರಾಗಿದ್ದಾರೆ. ಅವರು ಈಗ ರಸ್ತೆ ಮಾರ್ಗವಾಗಿ ಮುಳಬಾಗಿಲು ಮೂಲಕ ತೆರಳಿದ್ದಾರೆ.
ಶಿವಕುಮಾರ ಅವರು ಜಕ್ಕೂರಿನಿಂದ ಮುಳಬಾಗಿಲಿಗೆ ಹೆಲಿಕಾಪ್ಟರ್ ಮೂಲಕ ಪ್ರಚಾರಕ್ಕೆ ತೆರಳುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಹೊಸಕೋಟೆ ಬಳಿ ರಣಹದ್ದು ಹೆಲಿಕಾಪ್ಟರಿಗೆ ಡಿಕ್ಕಿ ಹೊಡೆದಿದೆ. ಆ ಸಂದರ್ಭದಲ್ಲಿ ಕೆಲ ಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
ಕೂಡಲೇ ಹೆಲಿಕಾಪ್ಟರ್ ಅನ್ನು ಬೆಂಗಳೂರಿನ ಎಚ್ಎಎಲ್ ವಿಮಾನ ನಿಲ್ದಾಣಕ್ಕೆ ತಂದು ಸುರಕ್ಷಿತವಾಗಿ ಲ್ಯಾಂಡ್ ಮಾಡಲಾಗಿದೆ.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

0 / 5. ಒಟ್ಟು ವೋಟುಗಳು 0

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ಇಂದಿನ ಪ್ರಮುಖ ಸುದ್ದಿ :-   ಮಾಜಿ ಸಿಎಂ ಯಡಿಯೂರಪ್ಪಗೆ ಬಿಗ್ ರಿಲೀಫ್: ಡಿನೋಟಿಫಿಕೇಶನ್‌ ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement