ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಕೆಲ ದಿನಗಳ ಹಿಂದಷ್ಟೆ ಪ್ರಕಟವಾದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಫಲಿತಾಂಶದಲ್ಲಿ ಅನುತ್ತೀರ್ಣರಾದವರು, ಕಡಿಮೆ ಅಂಕ ಬಂದವರು ಸೇರಿದಂತೆ ವಿವಿಧ ವಿದ್ಯಾರ್ಥಿಗಳಿಗೆ  ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗೆ ವೇಳಾಪಟ್ಟಿ ಪ್ರಕಟಿಸಲಾಗಿದೆ. ಪರೀಕ್ಷೆ ಮೇ 22ರಿಂದ ಆರಂಭಗೊಂಡು, ಜೂನ್ 2ರಂದು ಮುಕ್ತಾಯಗೊಳ್ಳಲಿದೆ.
ಈ ಕುರಿತು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧ್ಯಕ್ಷರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಬಿಡುಗಡೆ ಮಾಡಿದ್ದಾರೆ. 22-05-2023ರಿಂದ 02-06-2023ರ ವರೆಗೆ ನಡೆಸಲು ಮಂಡಳಿಯು ಪರೀಕ್ಷೆ ನಿರ್ಧರಿಸಿದೆ ಎಂದು ಅವರು ತಿಳಿಸಿದ್ದಾರೆ.
ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ವೇಳಾಪಟ್ಟಿಯನ್ನು ಮಂಡಳಿ ಜಾಲತಾಣ https://kseab.karnataka.gov.in ನಲ್ಲಿ ಪ್ರಕಟಿಸಲಾಗಿದೆ. ಅಲ್ಲಿಯೂ ವೀಕ್ಷಿಸಬಹುದಾಗಿದೆ ಎಂದು ತಿಳಿಸಿದ್ದಾರೆ.

ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ವೇಳಾಪಟ್ಟಿ
22-05-2023, ಸೋಮವಾರ – ಕನ್ನಡ, ಅರೇಬಿಕ್
23-05-2023, ಮಂಗಳವಾರ – ಐಚ್ಛಿಕ ಕನ್ನಡ, ರಸಾಯನಶಾಸ್ತ್ರ, ಮೂಲ ಗಣಿತ
24-05-2023, ಬುಧವಾರ – ಇಂಗ್ಲೀಷ್
25-05-2023, ಗುರುವಾರ – ಸಮಾಜಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ, ಗಣಕ ವಿಜ್ಞಾನ
26-05-2023, ಶುಕ್ರವಾರ – ಇತಿಹಾಸ, ಸಂಖ್ಯಾ ಶಾಸ್ತ್ರ
27-05-2023, ಶನಿವಾರ – ಹಿಂದಿ
29-05-2023, ಸೋಮವಾರ – ಭೂಗೋಳಶಾಸ್ತ್ರ, ಮನಃಶಾಸ್ತ್ರ, ಭೌತಶಾಸ್ತ್ರ
30-05-2023, ಮಂಗಳವಾರ – ಲೆಕ್ಕಶಾಸ್ತ್ರ, ಭೂ ಗರ್ಭಶಾಸ್ತ್ರ, ಶಿಕ್ಷಣ ಶಾಸ್ತ್ರ, ಗೃಹ ವಿಜ್ಞಾನ
31-05-2023, ಬುಧವಾರ – ರಾಜ್ಯಶಾಸ್ತ್ರ, ಗಣಿತ ಶಾಸ್ತ್ರ
01-06-2023, ಗುರುವಾರ – ತರ್ಕಶಾಸ್ತ್ರ, ಹಿಂದೂಸ್ತಾನಿ ಸಂಗೀತ, ವ್ಯವಹಾರ ಅಧ್ಯಯನ.
02-06-2023, ಶುಕ್ರವಾರ – ಅರ್ಥಶಾಸ್ತ್ರ, ಜೀವಶಾಸ್ತ್ರ

ಪ್ರಮುಖ ಸುದ್ದಿ :-   ರಾಜ್ಯ ಸರ್ಕಾರಕ್ಕೆ ಜಾತಿ ಗಣತಿ ವರದಿ ಸಲ್ಲಿಕೆ; ವರದಿಯಲ್ಲಿರುವ ಪ್ರಮುಖ ಅಂಶಗಳು

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement