ಮಹಾತ್ಮ ಗಾಂಧಿ ಮೊಮ್ಮಗ ಅರುಣ್ ಗಾಂಧಿ ನಿಧನ

ಮುಂಬೈ: ರಾಷ್ಟ್ರಪಿತ ಮಹಾತ್ಮಾ ಗಾಂಧಿ ಮೊಮ್ಮಗ, ಲೇಖಕ ಅರುಣ್ ಗಾಂಧಿ (89 ) ಅನಾರೋಗ್ಯದಿಂದ ಇಂದು, ಮಂಗಳವಾರ (ಮೇ 2) ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ನಿಧನರಾಗಿದ್ದಾರೆ.
ಅಂತ್ಯಕ್ರಿಯೆ ಇಂದು ಕೊಲ್ಲಾಪುರದಲ್ಲಿ ನಡೆಯಲಿದೆ ಎಂದು ಪುತ್ರ ತುಷಾರ್ ಗಾಂಧಿ ತಿಳಿಸಿದ್ದಾರೆ. ಲೇಖಕರು ಮತ್ತು ಸಾಮಾಜಿಕ-ರಾಜಕೀಯ ಕಾರ್ಯಕರ್ತರಾಗಿದ್ದ ಅರುಣ್ ಗಾಂಧಿ ಅವರು ಏಪ್ರಿಲ್ 14, 1934 ರಂದು ಡರ್ಬನ್‌ನಲ್ಲಿ ಮಣಿಲಾಲ್ ಗಾಂಧಿ ಮತ್ತು ಸುಶೀಲಾ ಮಶ್ರುವಾಲಾ ದಂಪತಿಗೆ ಜನಿಸಿದರು. ಸಾಮಾಜಿಕ ಕಾರ್ಯಕರ್ತರಾಗಿ ತಮ್ಮ ಅಜ್ಜ(ಮಹಾತ್ಮಾ ಗಾಂಧಿ)ನ ಹಾದಿಯಲ್ಲಿ ಸಾಗಿದವರು. ಅವರು ಅನೇಕ ಪುಸ್ತಕಗಳನ್ನು ಬರೆದಿದ್ದಾರೆ. ‘ದಿ ಗಿಫ್ಟ್ ಆಫ್ ಆಂಗರ್: ಅಂಡ್ ಅದರ್ ಲೆಸನ್ಸ್ ಫ್ರಂ ಮೈ ಗ್ರ್ಯಾಂಡ್ ಫಾದರ್ ಮಹಾತ್ಮ ಗಾಂಧಿ’ ಅವರ ಪ್ರಮುಖವಾಗಿದೆ.
ಮೃತರ ಅಂತ್ಯಕ್ರಿಯೆ ಇಂದು ಸಂಜೆ 05:00 ರಿಂದ 06:30 ರವರೆಗೆ ಕೊಲ್ಲಾಪುರ ಜಿಲ್ಲೆಯ ಕರ್ವೀರ್, ನಂದವಾಲ್ ರಸ್ತೆಯಲ್ಲಿರುವ ಗಾಂಧಿ ಫೌಂಡೇಶನ್ ಆವರಣದಲ್ಲಿ ನಡೆಯಲಿದೆ ಎಂದು ತಿಳಿದು ಬಂದಿದೆ.
ಅರುಣ್ ಗಾಂಧಿ 1987ರಲ್ಲಿ ಕುಟುಂಬ ಸಮೇತ ಅಮೆರಿಕದಲ್ಲಿ ನೆಲೆಸಿದ್ದರು. ಇಲ್ಲಿ ಅವರು ಟೆನ್ನೆಸ್ಸೀಯ ಮೆಂಫಿಸ್ನಲ್ಲಿ ತಮ್ಮ ಜೀವನದ ಹಲವು ವರ್ಷಗಳನ್ನು ಕಳೆದರು. ಇಲ್ಲಿ ಅವರು ಕ್ರಿಶ್ಚಿಯನ್ ಬ್ರದರ್ಸ್ ವಿಶ್ವವಿದ್ಯಾಲಯದಲ್ಲಿ ಅಹಿಂಸೆಗೆ ಸಂಬಂಧಿಸಿದ ಸಂಸ್ಥೆಯನ್ನು ಸ್ಥಾಪಿಸಿದರು.

ಪ್ರಮುಖ ಸುದ್ದಿ :-   ಕಾಂಗ್ರೆಸ್ಸಿಗೆ ರಾಜೀನಾಮೆ ನೀಡಿ ಬಿಜೆಪಿಗೆ ಸೇರ್ಪಡೆಯಾದ ತಮಿಳುನಾಡಿನ ಶಾಸಕಿ...!

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement