ರಾಜ್ಯದ ಈ ಜಿಲ್ಲೆಗಳಲ್ಲಿ ಇಂದಿನಿಂದ ಐದು ದಿನಗಳ ಕಾಲ ವ್ಯಾಪಕ ಮಳೆ ; ಮುನ್ಸೂಚನೆ

ಬೆಂಗಳೂರು : ರಾಜ್ಯದಲ್ಲಿ ಮಂಗಳವಾರದಿಂದ (ಮೇ 2 ರಿಂದ 7) ಐದು ದಿನ ಉತ್ತರ ಒಳನಾಡು ಮತ್ತು ಕರಾವಳಿಯಲ್ಲಿ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಹಾಗೂ ದಕ್ಷಿಣ ಒಳನಾಡಿನಲ್ಲಿ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇಂದು, ಮಂಗಳವಾರ ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಮೈಸೂರು ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್‌ ನೀಡಲಾಗಿದೆ. ಮೇ 3 ಮತ್ತು 4ರಂದು ಚಾಮರಾಜನಗರ, ಕೊಡಗು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ನೀಡಲಾಗಿದೆ. ಮುಂದಿನ ಎರಡು ದಿನಗಳ ಕಾಲ ಬೆಂಗಳೂರು ನಗರದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
“ಕೇರಳ, ತಮಿಳುನಾಡು, ಕರ್ನಾಟಕದ ದಕ್ಷಿಣ ಒಳನಾಡಿನ ಭಾಗಗಳು, ಈಶಾನ್ಯ ಭಾರತ, ಮಧ್ಯ ಮತ್ತು ಪೂರ್ವ ಉತ್ತರ ಪ್ರದೇಶ, ಪಶ್ಚಿಮ ಬಿಹಾರದ ಕೆಲವು ಭಾಗಗಳಲ್ಲಿ ತೀವ್ರವಾದ ಮಳೆ, ಉಳಿದ ಭಾಗಗಳಲ್ಲಿ ಗುಡುಗು ಮತ್ತು ಮಿಂಚುಗಳೊಂದಿಗೆ ಸ್ವಲ್ಪಮಟ್ಟಿಗೆ ಸಾಧಾರಣ ಮಳೆಯು ಮುಂದುವರಿಯುವ ಸಾಧ್ಯತೆಯಿದೆ” ಎಂದು IMD ಹೇಳಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement