ಡಿಕೆ ಶಿವಕುಮಾರ ತೆರಳುತ್ತಿದ್ದ ಹೆಲಿಕಾಪ್ಟರಿಗೆ ಬಡಿದ ರಣಹದ್ದು : ತುರ್ತು ಭೂಸ್ಪರ್ಶ, ತಪ್ಪಿದ ಅನಾಹುತ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಮುಳಬಾಗಿಲಿಗೆ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶಗೊಂಡಿದೆ. ಅವರು ದೊಡ್ಡ ಅವಘಡದಿಂದ ಪಾರಾಗಿದ್ದಾರೆ. ಹೆಲಿಕಾಪ್ಟರಿಗೆ ರಣಹದ್ದು ಬಡಿದ ಕಾರಣ ಅವರಿದ್ದ ಹೆಲಿಕಾಪ್ಟರ್ ಅನ್ನು ತುರ್ತು ಭೂಸ್ಪರ್ಶ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಹೆಲಿಕಾಪ್ಟರ್ ಗಾಜಿನ ಕಿಟಕಿಯ ಗಾಜು ಪುಡಿಪುಡಿಯಾಗಿದೆ. ಶಿವಕುಮಾರ್ ಮತ್ತು ಸಿಬ್ಬಂದಿ ಸುರಕ್ಷಿತರಾಗಿದ್ದಾರೆ. ಅವರು ಈಗ ರಸ್ತೆ ಮಾರ್ಗವಾಗಿ … Continued

ಅಚ್ಚರಿಯ ಬೆಳವಣಿಗೆಯಲ್ಲಿ ಎನ್‌ಸಿಪಿ ಅಧ್ಯಕ್ಷ ಸ್ಥಾನಕ್ಕೆ ದಿಢೀರ್‌ ರಾಜೀನಾಮೆ ಘೋಷಿಸಿದ ಶರದ್ ಪವಾರ್…!

ಅನೇಕರಿಗೆ ಆಶ್ಚರ್ಯವನ್ನುಂಟುಮಾಡುವ ಕ್ರಮದಲ್ಲಿ, ಅನುಭವಿ ರಾಜಕಾರಣಿ ಹಾಗೂ ಎನ್‌ಸಿಪಿ ಸಂಸ್ಥಾಪಕರಾದ ಶರದ್ ಪವಾರ್ ಅವರು ಮಂಗಳವಾರ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಘೋಷಣೆ ಮಾಡಿದ್ದಾರೆ. “ನಾನು ಎನ್‌ಸಿಪಿ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯಲು ನಿರ್ಧರಿಸಿದ್ದೇನೆ” ಎಂದು ಪವಾರ್ ತಮ್ಮ ಆತ್ಮಚರಿತ್ರೆಯ ಲೋಕ್ ಮೇಜ್ ಸಂಗತಿಯ ಎರಡನೇ ಆವೃತ್ತಿಯ ಬಿಡುಗಡೆ ಸಮಾರಂಭದಲ್ಲಿ ಹೇಳಿದರು. ಮಹಾರಾಷ್ಟ್ರ ರಾಜಕೀಯದ … Continued

ಮನೆ ಕುಸಿದು ನವಜಾತ ಶಿಶು ಸೇರಿ ಇಬ್ಬರು ಸಾವು

ಕೊಪ್ಪಳ: ಎರಡು ದಿನಗಳ ಹಿಂದೆ ಸುರಿದ ಜೋರು ಮಳೆಗೆ ನೆನೆದು ಹೋಗಿದ್ದ ಮನೆ ಕುಸಿದು 24 ದಿನದ ಹೆಣ್ಣು ಮಗು ಸೇರಿದಂತೆ ಇಬ್ಬರು ಮೃತಪಟ್ಟ ಘಟನೆ ಜಿಲ್ಲೆಯ ಕನಕಗಿರಿ ತಾಲೂಕು ಜೀರಾಳ ಗ್ರಾಮದಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಕನಕಗಿರಿ ತಾಲೂಕಿನ ಜೀರಾಳ ಗ್ರಾಮದಲ್ಲಿ ಮಂಗಳವಾರ ಬೆಳಗಿನ ಜಾವ ಈ ಘಟನೆ ನಡೆದಿದೆ ಎಂದು ಹೇಳಲಾಗಿದೆ. ಇತ್ತೀಚೆಗಷ್ಟೇ … Continued

ಮಹಾತ್ಮ ಗಾಂಧಿ ಮೊಮ್ಮಗ ಅರುಣ್ ಗಾಂಧಿ ನಿಧನ

ಮುಂಬೈ: ರಾಷ್ಟ್ರಪಿತ ಮಹಾತ್ಮಾ ಗಾಂಧಿ ಮೊಮ್ಮಗ, ಲೇಖಕ ಅರುಣ್ ಗಾಂಧಿ (89 ) ಅನಾರೋಗ್ಯದಿಂದ ಇಂದು, ಮಂಗಳವಾರ (ಮೇ 2) ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ನಿಧನರಾಗಿದ್ದಾರೆ. ಅಂತ್ಯಕ್ರಿಯೆ ಇಂದು ಕೊಲ್ಲಾಪುರದಲ್ಲಿ ನಡೆಯಲಿದೆ ಎಂದು ಪುತ್ರ ತುಷಾರ್ ಗಾಂಧಿ ತಿಳಿಸಿದ್ದಾರೆ. ಲೇಖಕರು ಮತ್ತು ಸಾಮಾಜಿಕ-ರಾಜಕೀಯ ಕಾರ್ಯಕರ್ತರಾಗಿದ್ದ ಅರುಣ್ ಗಾಂಧಿ ಅವರು ಏಪ್ರಿಲ್ 14, 1934 ರಂದು ಡರ್ಬನ್‌ನಲ್ಲಿ ಮಣಿಲಾಲ್ … Continued

ನಾವು ವಿಷಾದಿಸುತ್ತೇವೆ…: ಕಾಳಿ ಮಾತೆ ಟ್ವೀಟ್‌ಗಾಗಿ ಕ್ಷಮೆಯಾಚಿಸಿದ ಉಕ್ರೇನ್‌…

ನವದೆಹಲಿ: ಉಕ್ರೇನ್‌ನ ರಕ್ಷಣಾ ಸಚಿವಾಲಯವು ಕಾಳಿ ದೇವಿಯ ಚಿತ್ರವನ್ನು ಟ್ವೀಟ್ ಮಾಡಿದ ನಂತರ ಆಕ್ರೋಶ ಭುಗಿಲೆದ್ದ ಬೆನ್ನಲ್ಲೇ ಉಕ್ರೇನ್‌ನ ಉಪ ವಿದೇಶಾಂಗ ಸಚಿವ ಎಮಿನ್ ಝಪರೋವಾ ಮಂಗಳವಾರ ಈ ಬಗ್ಗೆ ಕ್ಷಮೆಯಾಚಿಸಿದ್ದಾರೆ. ರಕ್ಷಣಾ ಸಚಿವಾಲಯವು ಕಾಳಿ ದೇವಿಯನ್ನು “ವಿಕೃತ ರೀತಿಯಲ್ಲಿ” ಚಿತ್ರಿಸಿರುವುದಕ್ಕೆ ಉಕ್ರೇನ್ “ವಿಷಾದಿಸುತ್ತದೆ” ಮತ್ತು ಉಕ್ರೇನ್‌ ದೇಶವು “ವಿಶಿಷ್ಟ ಭಾರತೀಯ ಸಂಸ್ಕೃತಿಯನ್ನು ಗೌರವಿಸುತ್ತದೆ ಮತ್ತು … Continued

ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ: ಬಜರಂಗದಳ, ಪಿಎಫ್‌ಐ ಸೇರಿದಂತೆ ಮತೀಯ ದ್ವೇಷ ಬಿತ್ತುವ ಸಂಘಟನೆಗಳ ನಿಷೇಧದ ಭರವಸೆ

ಬೆಂಗಳೂರು : ಕರ್ನಾಟಕದಲ್ಲಿ ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಯ ತನ್ನ ಪ್ರಣಾಳಿಕೆಯಲ್ಲಿ, ನಿಷೇಧಿತ ಇಸ್ಲಾಮಿಕ್ ಸಂಘಟನೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಹಾಗೂ ಬಜರಂಗದಳ ನಿಷೇಧಿಸುವುದಾಗಿ ಕಾಂಗ್ರೆಸ್‌ ಹೇಳಿದೆ. ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಮತ್ತು ಬಜರಂಗದಳದಂತಹ “ಹಗೆತನ ಅಥವಾ ದ್ವೇಷವನ್ನು ಉತ್ತೇಜಿಸುವ” ಸಂಘಟನೆಗಳ ಮೇಲೆ ನಿಷೇಧವನ್ನು ಅದು ಪ್ರಸ್ತಾಪಿಸಿದೆ. … Continued

ಭಾರತದಲ್ಲಿ ಸರಾಸರಿ ಮಾಸಿಕ ವೇತನ ₹50,000ಕ್ಕಿಂತ ಕಡಿಮೆ : ವಿಶ್ವದಲ್ಲಿ ಅತಿ ಹೆಚ್ಚು ಸಂಬಳ ಪಡೆಯುವ ದೇಶಗಳ ಪಟ್ಟಿ ಇಲ್ಲಿದೆ….

ನವದೆಹಲಿ: ಭಾರತದಲ್ಲಿ ಸರಾಸರಿ ವೇತನವು ₹ 50,000 ಕ್ಕಿಂತ ಕಡಿಮೆ ಇದೆ ಎಂದು ಇತ್ತೀಚಿನ ವರದಿಯೊಂದು ಬಹಿರಂಗಪಡಿಸಿದೆ. ಅಂತಾರಾಷ್ಟ್ರೀಯ ಕಾರ್ಮಿಕರ ದಿನದ ಸಂದರ್ಭದಲ್ಲಿ, ವರ್ಲ್ಡ್ ಆಫ್ ಸ್ಟ್ಯಾಟಿಸ್ಟಿಕ್ಸ್ ವಿಶ್ವದಾದ್ಯಂತ ವಿವಿಧ ದೇಶಗಳ ಸರಾಸರಿ ಮಾಸಿಕ ಸಂಬಳದ ಡೇಟಾವನ್ನು ಬಿಡುಗಡೆ ಮಾಡಿದೆ. ಅಂಕಿಅಂಶಗಳ ಪ್ರಕಾರ, ಪ್ರಪಂಚದಾದ್ಯಂತದ 23 ದೇಶಗಳಲ್ಲಿ ಸರಾಸರಿ ಮಾಸಿಕ ಸಂಬಳ ₹1 ಲಕ್ಷಕ್ಕಿಂತ ಹೆಚ್ಚಿವೆ. … Continued

ರಾಜ್ಯದ ಈ ಜಿಲ್ಲೆಗಳಲ್ಲಿ ಇಂದಿನಿಂದ ಐದು ದಿನಗಳ ಕಾಲ ವ್ಯಾಪಕ ಮಳೆ ; ಮುನ್ಸೂಚನೆ

ಬೆಂಗಳೂರು : ರಾಜ್ಯದಲ್ಲಿ ಮಂಗಳವಾರದಿಂದ (ಮೇ 2 ರಿಂದ 7) ಐದು ದಿನ ಉತ್ತರ ಒಳನಾಡು ಮತ್ತು ಕರಾವಳಿಯಲ್ಲಿ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಹಾಗೂ ದಕ್ಷಿಣ ಒಳನಾಡಿನಲ್ಲಿ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು, ಮಂಗಳವಾರ ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, … Continued