ಬೆಂಗಳೂರು: ಕರ್ನಾಟಕದ 2023 ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮೇ 6ರಂದು ಬೆಂಗಳೂರಿನಲ್ಲಿ ಮೋದಿ ಬೃಹತ್ ರೋಡ್ ಶೋ ನಡೆಸಲಿದ್ದಾರೆ. ಮೇ 6ರಂದು ‘ನಮ್ಮ ಕರ್ನಾಟಕ ಯಾತ್ರೆ’ ಹೆಸರಿನಡಿ ಮೋದಿ ಬೃಹತ್ ರೋಡ್ ಶೋ ನಡೆಸಲಿದ್ದಾರೆ.
ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಸದ ಪಿ.ಸಿ.ಮೋಹನ ಅವರು, ಮೇ 6ರಂದು ಪ್ರಧಾನಿಯವರು ರಾಜಧಾನಿಯ 17 ಕ್ಷೇತ್ರಗಳಲ್ಲಿ ಒಟ್ಟು 36.6 ಕಿ.ಮೀ ದೂರದ ವರೆಗೆ ರೋಡ್ ಶೋ ನಡೆಸಲಿದ್ದಾರೆ. ಮೇ 6ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆವರೆಗೆ 10.1 ಕಿ.ಮೀ, ಸಂಜೆ 4ರಿಂದ ರಾತ್ರಿ 10 ರವರೆಗೆ 26.5 ಕಿ.ಮೀ ದೂರ ರೋಡ್ ಶೋ ನಡೆಯಲಿದ್ದು, ಹತ್ತು ಲಕ್ಷಕ್ಕೂ ಅಧಿಕ ಮಂದಿ ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದು ಮಾಹಿತಿ ನೀಡಿದರು.
“ಬೆಳಿಗ್ಗೆ ಬೆಂಗಳೂರಿನ ಸುರಂಜನ್‍ದಾಸ್ ರಸ್ತೆಯಿಂದ ಆರಂಭವಾಗುವ ಯಾತ್ರೆ, ಮಹದೇವಪುರ, ಕೆ.ಆರ್.ಪುರ, ಸಿ.ವಿ.ರಾಮನ್ ನಗರ, ಶಾಂತಿನಗರ, ಶಿವಾಜಿನಗರ ವಿಧಾನಸಭಾ ಕ್ಷೇತ್ರಗಳಲ್ಲಿ ಸಾಗಲಿದೆ. ಸಂಜೆ ಬೆಂಗಳೂರು ದಕ್ಷಿಣ, ಬೊಮ್ಮನಹಳ್ಳಿ, ಜಯನಗರ, ಪದ್ಮನಾಭ ನಗರ, ಬಸವನಗುಡಿ, ಚಿಕ್ಕಪೇಟೆ, ಚಾಮರಾಜಪೇಟೆ, ಗಾಂಧಿನಗರ, ವಿಜಯನಗರ, ಗೋವಿಂದರಾಜ ನಗರ, ರಾಜಾಜಿನಗರ, ಮಹಾಲಕ್ಷ್ಮಿ ಲೇಔಟ್, ಮಲ್ಲೇಶ್ವರ ಕ್ಷೇತ್ರಗಳಲ್ಲಿ ರೋಡ್ ಶೋ ಸಾಗಲಿದೆ. ರೋಡ್ ಶೋ ಸಾಗುವ ಮಾರ್ಗದ ಬಗ್ಗೆ ಜನರಿಗೆ ಮಾಹಿತಿ ನೀಡಲಾಗುತ್ತದೆ. ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಪೊಲೀಸ್ ಮತ್ತು ಸಂಬಂಧಿತ ಇಲಾಖೆಗಳ ಅಧಿಕಾರಿಗಳೊಂದಿಗೆ ಚರ್ಚಿಸಲಾಗಿದೆ. ಮುಂಜಾಗ್ರತೆ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಕೇಂದ್ರ ಸಚಿವ ರಾಜೀವ ಚಂದ್ರಶೇಖರ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿದ್ದರಾಜು ಮೊದಲಾದವರಿದ್ದರು.
ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ | |
ಟೆಲಿಗ್ರಾಮ್ ಚಾನೆಲ್ ಸೇರಿ | |
ಫೇಸ್ ಬುಕ್ ಫಾಲೋ ಮಾಡಿ | |
ಗೂಗಲ್ ನ್ಯೂಸ್ ನಲ್ಲಿ ಸೇರಿ | |
ಟ್ವಿಟರ್ ನಲ್ಲಿ ಫಾಲೋ ಮಾಡಿ |
ನಿಮ್ಮ ಕಾಮೆಂಟ್ ಬರೆಯಿರಿ