ಕರ್ನಾಟಕ ಚುನಾವಣೆ : 24 ಬಂಡಾಯ ಅಭ್ಯರ್ಥಿಗಳನ್ನು ಉಚ್ಚಾಟಿಸಿದ ಕಾಂಗ್ರೆಸ್‌

posted in: ರಾಜ್ಯ | 0

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್‌ 24 ಬಂಡಾಯ ಅಭ್ಯರ್ಥಿಗಳನ್ನು ಪಕ್ಷದಿಂದ 6 ವರ್ಷಗಳ ಕಾಲ ಉಚ್ಚಾಟಿಸಿದೆ.
ಕಾಂಗ್ರೆಸ್ ಟಿಕೆಟ್ ಕೈತಪ್ಪಿದ ನಂತರ ಅನೇಕ ಕಾಂಗ್ರೆಸ್‌ ನಾಯಕರು ಪಕ್ಷೇತರವಾಗಿ ಅಥವಾ ಬಂಡಾಯ ಅಭ್ಯರ್ಥಿಗಳಾಗಿ ಚುನಾವಣೆಯಲ್ಲಿ ಸ್ಪರ್ಧಿಸಿದ್ದಾರೆ. ಈಗ ಕೆಪಿಸಿಸಿ ಶಿಸ್ತು ಪಾಲನ ಸಮಿತಿ ಅವರ ವಿರುದ್ಧ ಕ್ರಮ ಕೈಗೊಂಡಿದೆ.
ಮಾಜಿ ಶಾಸಕರಾದ ರಾಮಕೃಷ್ಣ ದೊಡ್ಡಮನಿ, ಬಿ ಬಿ ರಾಮಸ್ವಾಮಿಗೌಡ (ಕುಣಿಗಲ್) ಸೇರಿದಂತೆ 24 ಬಂಡಾಯ ಅಭ್ಯರ್ಥಿಗಳನ್ನು ಪಕ್ಷದಿಂದ ಉಚ್ಚಾಟಿಸಲಾಗಿದೆ. ಹಾಗೂ ಪ್ರಚಾರದಲ್ಲಿ ಭಾಗವಹಿಸಿದರೆ ಅಂಥವರ ವಿರುದ್ಧವೂ ಶಿಸ್ತು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಶಿಸ್ತು ಸಮಿತಿಯ ಅಧ್ಯಕ್ಷ ಕೆ ರೆಹಮಾನ್ ಖಾನ್ ಆದೇಶದಲ್ಲಿ ತಿಳಿಸಿದ್ದಾರೆ.
ಉಚ್ಚಾಟನೆಗೊಂಡವರು: ಮಾಜಿ ಶಾಸಕರಾದ ರಾಮಕೃಷ್ಣ ದೊಡ್ಡಮನಿ (ಶಿರಹಟ್ಟಿ), ಬಿ ಬಿ ರಾಮಸ್ವಾಮಿಗೌಡ (ಕುಣಿಗಲ್), ಎಚ್‌.ಪಿ.ರಾಜೇಶ (ಜಗಳೂರು), ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ ಪಿ ಲತಾ ಮಲ್ಲಿಕಾರ್ಜುನ (ಹರಪನಹಳ್ಳಿ), ಕೃಷ್ಣೇಗೌಡ (ಅರಕಲಗೂಡು), ಕೆಪಿಸಿಸಿ ಸಂಯೋಜಕ ಚಂದ್ರಾ ಸಿಂಗ್ (ಬೀದರ ದಕ್ಷಿಣ), ಚಿಕ್ಕಮಗಳೂರು ಡಿಸಿಸಿ ಉಪಾಧ್ಯಕ್ಷ ಗೋಪಿಕೃಷ್ಣ (ತರೀಕೆರೆ), ಯುವ ಕಾಂಗ್ರೆಸ್ ಮುಖಂಡ ಇರ್ಫಾನ್ ತಾಳಿಕೋಟೆ (ಖಾನಾಪುರ), ಕಿಸಾನ್ ಸೆಲ್ ಉಪಾಧ್ಯಕ್ಷ ಪದ್ಮಜಿತ್ ನಾಡಗೌಡ (ತೇರದಾಳ), ಬಸವರಾಜ್ ಮಲ್ಕಾರಿ (ಹುಬ್ಬಳ್ಳಿ-ಧಾರವಾಡ ಪಶ್ಚಿಮ), ಉಮಾದೇವಿ (ನೆಲಮಂಗಲ), ಯೂಸುಫ್ ಅಲಿ ಜಾಮದಾರ್ (ಬೀದರ ದಕ್ಷಿಣ), ನಾರಾಯಣ ಬಂಗಿ (ಬೀದರ್ ದಕ್ಷಿಣ), ವಿಜಯಕುಮಾರ ಬರೂರು (ಬೀದರ ದಕ್ಷಿಣ), ಸವಿತಾ ಮಲ್ಲೇಶ ನಾಯಕ್ (ಮಾಯಕೊಂಡ), ಪಿ.ಎಚ್. ಚಂದ್ರಶೇಖರ್ (ಶ್ರೀರಂಗಪಟ್ಟಣ), ಪುಟ್ಟ ಆಂಜನಪ್ಪ (ಶಿಡ್ಲಘಟ್ಟ), ಶಂಭು ಕೋಲ್ಕರ್ (ರಾಯಬಾಗ್), ಬಿ.ಎಚ್. ಭೀಮಪ್ಪ (ಶಿವಮೊಗ್ಗ ಗ್ರಾಮಾಂತರ), ಎಸ್.ಪಿ. ನಾಗರಾಜಗೌಡ (ಶಿಕಾರಿಪುರ), ದೋರ್ನಲ್ ಪರಮೇಶ್ವರಪ್ಪ (ತರೀಕೆರೆ), ಶಶಿ ಚೌಧಿ (ಬೀದರ್), ಲಕ್ಷ್ಮಣ ಸೊರಳಿ (ಔರಾದ್), ಮುಜೀಬುದ್ದೀನ್ (ರಾಯಚೂರು ನಗರ) ಅವರುಗಳನ್ನು ಪಕ್ಷದಿಂದ ಆರು ವರ್ಷಗಳ ಕಾಲ ಉಚ್ಚಾಟಿಸಲಾಗಿದೆ.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಇಂದಿನ ಪ್ರಮುಖ ಸುದ್ದಿ :-   ಮಕ್ಕಳ ಹಿತದೃಷ್ಟಿಯಿಂದ ಈ ವರ್ಷವೇ ಪಠ್ಯಪುಸ್ತಕ ಪರಿಷ್ಕರಣೆ : ಶಿಕ್ಷಣ ಸಚಿವ ಮಧು ಬಂಗಾರಪ್ಪ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

0 / 5. ಒಟ್ಟು ವೋಟುಗಳು 0

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement