ಕರ್ನಾಟಕ ವಿಧಾನಸಭೆ ಚುನಾವಣೆ: ಹೆಣ್ಣು ಸಿಗದ ಯುವಕರಿಗೆ ಪ್ರಣಾಳಿಕೆಯಲ್ಲಿ ಮದುವೆ ಭಾಗ್ಯ ಗ್ಯಾರಂಟಿ ಯೋಜನೆ ಘೋಷಿಸಿದ ಈ ಕ್ಷೇತ್ರಗಳ ಅಭ್ಯರ್ಥಿಗಳು…!

ಬೆಳಗಾವಿ : ಜಾರಕಿಹೊಳಿ ಸಹೋದರರಾದ ರಮೇಶ ಜಾರಕಿಹೊಳಿ ಮತ್ತು ಬಾಲಚಂದ್ರ ಜಾರಕಿಹೊಳಿ ಕಣಕ್ಕಿಳಿದಿರುವ ಗೋಕಾಕ ಹಾಗೂ ಅರಬಾವಿ ಕ್ಷೇತ್ರದಲ್ಲಿ ಪಕ್ಷೇತರರಾಗಿ ಸಹೋದರರಿಬ್ಬರು (ಕುಳ್ಳೂರ) ಕಣಕ್ಕಿಳಿದಿದ್ದಾರೆ. ಈಗ ಅವರ ಚುನಾವಣಾ ಪ್ರಣಾಳಿಕೆಯಲ್ಲಿನ ಭರವಸೆ ವಿಶೇಷವಾಗಿ ಎಲ್ಲೆಡೆ ಸುದ್ದಿಯಾಗುತ್ತಿದೆ.
ಹೆಣ್ಣು ಸಿಗದ ಯುವಕರಿಗೆ ಮದುವೆ ಮಾಡಿಸುವುದಾಗಿ ಅವರು ತಮ್ಮ ಪ್ರಣಾಳಿಕೆಯಲ್ಲಿ ಘೋಷಿಸಿದ್ದಾರೆ. ಗೋಕಾಕ ಹಾಗೂ ಅರಬಾವಿ ಮತಕ್ಷೇತ್ರದಲ್ಲಿ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಿರುವ ಪಕ್ಷೇತರ ಅಭ್ಯರ್ಥಿಗಳು ಬಿಡುಗಡೆಗೊಳಿಸಿರುವ ಈ ಪ್ರಣಾಳಿಕೆ ಎಲ್ಲೆಡೆ ವೈರಲ್‌ ಆಗಿದ್ದು, ಚರ್ಚೆಗೆ ಗ್ರಾಸವಾಗಿದೆ.
ಅರಬಾವಿ ಮತಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಗುರುಪುತ್ರ ಕೆಂಪಣ್ಣ ಕುಳ್ಳೂರ ಮತ್ತು ಗೋಕಾಕ ಮತ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಪುಂಡಲಿಕ ಕುಳ್ಳೂರ ಅವರು ಮದುವೆಯಾಗದವರಿಗೆ ತಮ್ಮ ಪ್ರಣಾಳಿಕೆಯಲ್ಲಿ ಮದುವೆ ಭಾಗ್ಯದ ಘೋಷಣೆ ಮಾಡಿದ್ದಾರೆ. ಮದುವೆಯಾಗದವರಿಗೆ ಮದುವೆ ಮಾಡಿಸುವುದಾಗಿ ತಮ್ಮ ಪ್ರಣಾಳಿಕೆಯಲ್ಲಿ ಇಬ್ಬರು ಸಹೋದರರು ಭರವಸೆ ನೀಡಿದ್ದಾರೆ. ವಿಶೇಷವಾಗಿ ಮದುವೆಯಾಗದ ಯುವಕರಿಗೆ ಮದುವೆ ಮಾಡಿಸುವುದಾಗಿ ಭರವಸೆ ನೀಡಿದ್ದಾರೆ. ಅರಭಾವಿ ಕ್ಷೇತ್ರದಲ್ಲಿ ಮದುವೆಯಾಗದ ಹೆಣ್ಣು ಸಿಗದ ಯುವಕರಿಗೆ ಮದುವೆ ಮಾಡಿಸಲಾಗುವುದು. ವಧು-ವರರ ಮದುವೆ ಭಾಗ್ಯ ಯೋಜನೆ 2023 100% ಗ್ಯಾರಂಟಿ ಎಂದು ತಮ್ಮ ಪ್ರಣಾಳಿಕೆಯಲ್ಲಿ ಹೇಳಿದ್ದಾರೆ. ಗುರುಪುತ್ರ ಕೆಂಪಣ್ಣ ಕುಳ್ಳೂರ ಅರಭಾವಿ ಮತಕ್ಷೇತ್ರದ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ. ಪುಂಡಲೀಕ ಕುಳ್ಳೂರ ಗೋಕಾಕ ಮತಕ್ಷೇತ್ರದಲ್ಲಿ ಸ್ಪರ್ಧಿಸಿದ್ದಾರೆ.

ಪ್ರಮುಖ ಸುದ್ದಿ :-   ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌ ಸೇರಿ ನಾಲ್ವರು ಮತ್ತೆ ಪೊಲೀಸ್‌ ಕಸ್ಟಡಿಗೆ ; ಪವಿತ್ರಾಗೆ ನ್ಯಾಯಾಂಗ ಬಂಧನ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement