ಬಜರಂಗದಳ ನಿಷೇಧದ ಉಲ್ಲೇಖ: ಕಾಂಗ್ರೆಸ್ ಪ್ರಣಾಳಿಕೆ ಪ್ರತಿ ಸುಟ್ಟು ಹಾಕಿದ ಈಶ್ವರಪ್ಪ

ಕಲಬುರಗಿ: ಬಜರಂಗದಳ ನಿಷೇಧವು ಸೇರಿದಂತೆ ಹಲವುಭರವಸೆಗಳಿರುವ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯನ್ನು ಬಿಜೆಪಿ ಹಿರಿಯ ನಾಯಕ ಕೆ.ಎಸ್.ಈಶ್ವರಪ್ಪ ಗುರುವಾರ ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ವೇಳೆ ಸುಡುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆದಿದೆ.
ಬಜರಂಗದಳ ನಿಷೇಧ ಮಾಡುತ್ತೇವೆ ಎಂದು ಹೇಳಿದ ಕಾಂಗ್ರೆಸ್‌ ಪ್ರಣಾಳಿಕೆಯೇ ಆಕ್ರೋಶಗೊಂಡ ಈಶ್ವರಪ್ಪ, ಇದರಿಂದ ಹಿಂದೂಗಳ ಭಾವನೆಗಳಿಗೆ ಧಕ್ಕೆಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ದೇಶಕ್ಕೆ ಸ್ವಾತಂತ್ರ್ಯ ಬಂದಿದ್ದು ಯಾಕೆ ಎಂಬುದನ್ನು ಕಾಂಗ್ರೆಸ್ ಮರೆತಿದೆ. ಒಕ್ಕಲಿಗ ಸಮುದಾಯದವರೇ ನನ್ನ ಬೆನ್ನಿಗೆ ನಿಲ್ಲಿ ಎಂದು ಡಿಕೆ ಶಿವಕುಮಾರ್ ಹೇಳ್ತಾರೆ ಹಿಂದುಳಿದ ವರ್ಗ ನನ್ನ ಜತೆ ಇದ್ದಾರೆಂದು ಸಿದ್ಧರಾಮಯ್ಯ ಹೇಳ್ತಾರೆ. ಎಲ್ಲರನ್ನೂ ಒಟ್ಟಿಗೆ ತೆಗೆದುಕೊಂಡು ಹೋಗುವ ಬಗ್ಗೆ ಇವರು ಮಾತನಾಡುವುದಿಲ್ಲ ಎಂದರು.
ಕಾಂಗ್ರೆಸ್‌ನ ಮನಸ್ಥಿತಿ ರಾಜ್ಯದ ಜನರಿಗೆ ಗೊತ್ತಾಗಿದೆ. ಕಾಂಗ್ರೆಸ್ ಪ್ರಣಾಳಿಕೆ ಮಹಮದ್ ಅಲಿ ಜಿನ್ನಾನ ಪ್ರಣಾಳಿಕೆ ಎಂದು ವಾಗ್ದಾಳಿ ನಡೆಸಿದರು. ಕಾಂಗ್ರೆಸ್ ಕೂಡಲೇ ಈ ಪ್ರಣಾಳಿಕೆಯನ್ನು ಹಿಂಪಡೆಯಬೇಕು ಕಾಂಗ್ರೆಸ್​ ಸರ್ಕಾರ ಪಿಎಫ್ ಐ ಮೇಲಿದ್ದ 173 ಪ್ರಕರಣ​ ಹಿಂಪಡೆದಿದೆ. ದೇಶದಲ್ಲಿ ಪಿಎಫ್ಐ ನಿಷೇಧವಾಗಿದೆ ಎಂಬುದೇ ಕಾಂಗ್ರೆಸ್​ಗೆ ಗೊತ್ತಿಲ್ಲ ಎಂದ ಅವರು ಬಜರಂಗದಳ ಮುಟ್ಟಿದ್ದರಿಂದ ಕಾಂಗ್ರೆಸ್ ಅಧಿಕಾರ ಕಳೆದುಕೊಳ್ಳಲಿದೆ ಎಂದು ಭವಿಷ್ಯ ನುಡಿದರು.

ಪ್ರಮುಖ ಸುದ್ದಿ :-   ಟೆರೇಸ್‌ ಮೇಲೆ ವಿಶ್ವದ ಅತ್ಯಂತ ದುಬಾರಿ ಮಾವಿನ ಹಣ್ಣು ಬೆಳೆದ ಉಡುಪಿಯ ರೈತ...ಇದರ ಬೆಲೆ ಕೆ.ಜಿ.ಗೆ ₹3 ಲಕ್ಷ...!

 

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement