ವಿದ್ಯಾರ್ಥಿಗಳ ಬಸ್ ಪಾಸ್ ಅವಧಿ ವಿಸ್ತರಿಸಿದ ಕೆಎಸ್​ಆರ್​​ಟಿಸಿ

posted in: ರಾಜ್ಯ | 0

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ(KSRTC) ವಿದ್ಯಾರ್ಥಿಗಳ ಬಸ್ ಪಾಸ್ ಅವಧಿಯನ್ನು ವಿಸ್ತರಿಸಿದೆ. ಪದವಿ, ಸ್ನಾತಕೋತ್ತರ, ಡಿಪ್ಲೊಮಾ ಬಿ. ಫಾರ್ಮ್ ಸೇರಿದಂತೆ ವಿವಿಧ ಕೋರ್ಸ್​ಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಗಳ ಬಸ್​ ಪಾಸ್​ ಅವಧಿ ವಿಸ್ತರಣೆಗೆ ಕೆಎಸ್​ಆರ್​ಟಿಸಿ ಸುತ್ತೋಲೆ ಹೊರಡಿಸಿದೆ. ವಿದ್ಯಾರ್ಥಿಗಳ ತರಗತಿ ಅಥವಾ ಪರೀಕ್ಷೆ ನಡೆಯುತ್ತಿರುವುದನ್ನು ಖಚಿತಪಡಿಸಿಕೊಮಡು ಹೆಚ್ಚುವರಿ ಹಣ ಪಾವತಿಸಿಕೊಂಡು ಒಂದು ಅಥವಾ ಎರಡ ತಿಂಗಳ ಅವಧಿಗೆ ಬಸ್​ ಪಾಸ್ ವಿಸ್ತರಿಸಲು ಅವಕಾಶ ಕಲ್ಪಿಸಲಾಗಿದೆ. ಈ ಬಗ್ಗೆ ಎಲ್ಲಾ ಚಾಲಕ-ನಿರ್ವಾಹಕರಿಗೆ ಅಗತ್ಯ ಮಾಹಿತಿ ನೀಡುವಂತೆ ಕೆಎಸ್​ಆರ್​ಟಿಸಿ ಮುಖ್ಯ ವ್ಯವಸ್ಥಾಪಕರ ಸುತ್ತೋಲೆ ತಿಳಿಸಿದೆ.
ಏಪ್ರಿಲ್‌ನಲ್ಲಿ ಬಸ್ ಪಾಸ್ ಅವಧಿ ಮುಗಿಯಲಿದೆ. ಆದರೆ ಕೆಲ ಕೋರ್ಸ್​ಗಳ ಪರೀಕ್ಷೆಗಳು ಇರುವುದರಿಂದ ಪಾಸ್ ಅವಧಿ ವಿಸ್ತರಣೆಗೆ ವಿದ್ಯಾರ್ಥಿಗಳು ಮನವಿ ಮಾಡಿದ್ದಾರೆ. ಅದಂತೆ ವಿವಿಧ ಕೋರ್ಸ್‌ಗಳ ಪರೀಕ್ಷಾ ವೇಳಾಪಟ್ಟಿಯನ್ನು ಪರಿಶೀಲಿಸಿ ಬಸ್ ಪಾಸ್ ಒಂದು ಅಥವಾ ಎರಡು ತಿಂಗಳು ವಿಸ್ತರಿಸಲಾಗುತ್ತಿದೆ. ವಿದ್ಯಾರ್ಥಿಗಳು ನಿಯಮಾನುಸಾರವಾಗಿ ಬಸ್‌ ಪಾಸ್‌ಗೆ ಹಣ ಪಾವತಿಸಿ ರಶೀದಿ ಪಡೆದುಕೊಂಡು ಪ್ರಯಾಣ ಮಾಡಬಹುದಾಗಿದೆ. ಪ್ರಯಾಣಿಸುವಾಗ ಶುಲ್ಕ ಪಾವತಿ ರಶೀದು ಹಾಗೂ ಬಸ್‌ ಪಾಸ್‌ ಎರಡನ್ನೂ ತೋರಿಸಿ ಪ್ರಯಾಣಿಸಬಹುದಾಗಿದೆ ಎಂದು ಅದು ಹೇಳಿದೆ.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

 

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

0 / 5. ಒಟ್ಟು ವೋಟುಗಳು 0

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement