ಪಾಕಿಸ್ತಾನಕ್ಕೆ ರಹಸ್ಯ ಮಾಹಿತಿ ನೀಡಿದ ಆರೋಪ : ರಕ್ಷಣಾ ಸಂಶೋಧನಾ ಸಂಸ್ಥೆಯ ವಿಜ್ಞಾನಿ ಬಂಧನ

ಪುಣೆ: ಇಲ್ಲಿನ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯಲ್ಲಿ (ಡಿಆರ್‌ಡಿಒ) ಕಾರ್ಯನಿರ್ವಹಿಸುತ್ತಿರುವ ವಿಜ್ಞಾನಿಯೊಬ್ಬರನ್ನು ಪಾಕಿಸ್ತಾನಿ ಏಜೆಂಟ್‌ಗೆ ಗೌಪ್ಯ ಮಾಹಿತಿ ನೀಡಿದ ಆರೋಪದ ಮೇಲೆ ಮಹಾರಾಷ್ಟ್ರ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಬಂಧಿಸಿದೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.
ವಿಜ್ಞಾನಿಯು ವಾಟ್ಸಾಪ್ ಮತ್ತು ವೀಡಿಯೊ ಕರೆಗಳ ಮೂಲಕ “ಪಾಕಿಸ್ತಾನ ಗುಪ್ತಚರ ಆಪರೇಟಿವ್” ನ ಏಜೆಂಟ್‌ನೊಂದಿಗೆ ಸಂಪರ್ಕದಲ್ಲಿದ್ದರು ಎಂದು ಎಟಿಎಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದು ಹನಿಟ್ರ್ಯಾಪ್ ಪ್ರಕರಣ ಎಂದು ಅವರು ಹೇಳಿದರು.
ಪ್ರಧಾನ ರಕ್ಷಣಾ ಸಂಶೋಧನಾ ಸಂಸ್ಥೆಯಲ್ಲಿ ಉನ್ನತ ಹುದ್ದೆಯಲ್ಲಿದ್ದ ಆರೋಪಿಯನ್ನು ಬುಧವಾರ ಬಂಧಿಸಲಾಗಿದೆ. ಶತ್ರು ದೇಶದಿಂದ ಅಧಿಕಾರಿಗಳು ತನ್ನ ಬಳಿಯಿರುವ ರಹಸ್ಯಗಳನ್ನು ಪಡೆದರೆ ದೇಶದ ಭದ್ರತೆಗೆ ಅಪಾಯವನ್ನುಂಟುಮಾಡಬಹುದು ಎಂದು ತಿಳಿದಿದ್ದರೂ ವಿಜ್ಞಾನಿ ತಮ್ಮ ಸ್ಥಾನವನ್ನು ದುರುಪಯೋಗಪಡಿಸಿಕೊಂಡು ಶತ್ರು ದೇಶಕ್ಕೆ ವಿವರಗಳನ್ನು ನೀಡಿದ್ದಾರೆ” ಎಂದು ಎಟಿಎಸ್ ಪ್ರಕಟಣೆ ತಿಳಿಸಿದೆ.
ಮುಂಬೈನ ಎಟಿಎಸ್‌ನ ಕಲಾಚೌಕಿ ಘಟಕದಲ್ಲಿ ಅಧಿಕೃತ ರಹಸ್ಯ ಕಾಯ್ದೆಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಅಪರಾಧವನ್ನು ನೋಂದಾಯಿಸಲಾಗಿದೆ ಮತ್ತು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅದು ಹೇಳಿದೆ.

ಪ್ರಮುಖ ಸುದ್ದಿ :-   ಕಾಂಗ್ರೆಸ್ಸಿಗೆ ರಾಜೀನಾಮೆ ನೀಡಿದ 35 ವರ್ಷಗಳಿಂದ ಪಕ್ಷದಲ್ಲಿದ್ದ ಪ್ರಿಯಾಂಕಾ ಗಾಂಧಿ ಆಪ್ತ ತಜೀಂದರ್ ಸಿಂಗ್ ಬಿಟ್ಟು...!

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement