ಎಲ್‌ಕೆಜಿ ಪ್ರವೇಶಕ್ಕೆ ಮಕ್ಕಳಿಗೆ 4 ವರ್ಷ ವಯಸ್ಸು ಆಗುವುದು ಕಡ್ಡಾಯ

posted in: ರಾಜ್ಯ | 0

ಬೆಂಗಳೂರು: ಪ್ರಸಕ್ತ ಶೈಕ್ಷಣಿಕ ಸಾಲಿನಿಂದ ನಾಲ್ಕು ವರ್ಷ ತುಂಬಿದ ಮಕ್ಕಳು ಮಾತ್ರ ಶಿಶಿವಿಹಾರ (ಎಲ್‌ಕೆಜಿ) ಸೇರಲು ಅರ್ಹರು ಎಂದು ರಾಜ್ಯ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.
1ನೇ ತರಗತಿಗೆ ಪ್ರವೇಶ ಪಡೆಯುವ ವಿದ್ಯಾರ್ಥಿಗೆ ಕಡ್ಡಾಯವಾಗಿ ಆರು ವರ್ಷ ತುಂಬಿರಬೇಕು ಎಂಬ ನಿಯಮ 2025-26ನೇ ಸಾಲಿನಿಂದ ಜಾರಿಯಾಗಲಿದೆ. ಹಾಗಾಗಿ, ಆ ವೇಳೆಗೆ ಮಕ್ಕಳ ದಾಖಲಾತಿಗೆ ವಯಸ್ಸಿನ ಸಮಸ್ಯೆ ಆಗದಿರಲು ಪೂರ್ವ ಪ್ರಾಥಮಿಕ ಶಿಕ್ಷಣ ಪ್ರವೇಶಕ್ಕೂ ಇಲಾಖೆ ವಯೋಮಿತಿ ನಿಗದಿಪಡಿಸಿದೆ.
ಈ ಹಿನ್ನೆಲೆಯಲ್ಲಿ 2023-24ನೇ ಸಾಲಿನಿಂದ ಎಲ್‌ಕೆಜಿಗೆ ಮಕ್ಕಳನ್ನು ದಾಖಲಿಸಲು ಬರುವ ಜೂನ್‌ 1ಕ್ಕೆ ಕಡ್ಡಾಯವಾಗಿ ನಾಲ್ಕು ವರ್ಷ ತುಂಬಿರಬೇಕು ಎಂಬ ನಿಯಮ ಜಾರಿ ಮಾಡಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.
‘ಶಿಕ್ಷಣ ಹಕ್ಕು ಕಾಯ್ದೆ-2009’ ಮತ್ತು ‘ಕಡ್ಡಾಯ ಶಿಕ್ಷಣ ನಿಯಮ’ದಂತೆ ಈಗಾಗಲೇ ಆದೇಶಿಸಿರುವಂತೆ 2025-26ನೇ ಸಾಲಿನಿಂದ 1ನೇ ತರಗತಿ ದಾಖಲಾತಿಗೆ ಮಗುವಿಗೆ 6 ವರ್ಷ ತುಂಬಿರಬೇಕು ನಿಯಮದಲ್ಲಿ ಬದಲಾವಣೆ ಇರುವುದಿಲ್ಲ. ಹಾಗಾಗಿ ಈ ಸಾಲಿನಿಂದ ಎಲ್‌ಕೆಜಿಗೆ 4 ವರ್ಷ ಪೂರ್ಣಗೊಂಡಿರುವ ಮಕ್ಕಳನ್ನು ಮಾತ್ರ ಎಲ್‌ಕೆಜಿಗೆ ದಾಖಲಿಸಬೇಕು. ಆಗ ಮಾತ್ರ ಅವರು 1ನೇ ತರಗತಿಗೆ ಪ್ರವೇಶ ಪಡೆಯುವಾಗ ಅವರಿಗೆ 6 ವರ್ಷ ಪೂರ್ಣಗೊಳ್ಳಲಿದೆ. ಇಲ್ಲದಿದ್ದರೆ ಎಲ್‌ಕೆಜಿ, ಯುಕೆಜಿ ಮುಗಿಸಿದ್ದರೂ ವಯಸ್ಸು 6 ವರ್ಷ ಪೂರ್ಣಗೊಳ್ಳದ ಕಾರಣ ಒಂದನೇ ತರಗತಿಗೆ ಪ್ರವೇಶಕ್ಕೆ ಸಮಸ್ಯೆ ಎದುರಿಸಬೇಕಾಗುತ್ತದೆ’ ಎಂದು ಅಧಿಕಾರಿಗಳು ಹೇಳಿದ್ದಾರೆ.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

 

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

0 / 5. ಒಟ್ಟು ವೋಟುಗಳು 0

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement