ಜಮ್ಮುವಿನಲ್ಲಿ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆ ವೇಳೆ ಸ್ಫೋಟದಲ್ಲಿ 5 ಸೇನಾ ಸಿಬ್ಬಂದಿ ಹುತಾತ್ಮ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ರಾಜ್ಯದಲ್ಲಿ ಶುಕ್ರವಾರ (ಮೇ 5) ಬೆಳಿಗ್ಗೆ ಭಯೋತ್ಪಾದಕರು ನಡೆಸಿದ ಬಾಂಬ್ ದಾಳಿಯಲ್ಲಿ ಐವರು ಸೇನಾ ಸಿಬ್ಬಂದಿ ಹುತಾತ್ಮರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ರಾಜೌರಿ ವಲಯದ ಕಂಡಿ ಅರಣ್ಯ ಪ್ರದೇಶದಲ್ಲಿ ಸೇನಾ ತಂಡ ಶೋಧ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಘಟನೆಯಲ್ಲಿ ಮೇಜರ್ ಶ್ರೇಣಿಯ ಅಧಿಕಾರಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಜಮ್ಮು ಪ್ರದೇಶದ ಭಾಟಾ ಧುರಿಯನ್ ತೋಟಾ ಗಲಿ ಪ್ರದೇಶದಲ್ಲಿ ಸೇನಾ ಟ್ರಕ್‌ ಆಗಮಿಸಲು ಹೊಂಚು ಹಾಕಿದ್ದ ಭಯೋತ್ಪಾದಕರ ಗುಂಪನ್ನು ಪತ್ತೆಹಚ್ಚಲು ಗುಪ್ತಚರ ಮಾಹಿತಿ ಆಧಾರಿತ ಕಾರ್ಯಾಚರಣೆಗಳನ್ನು ನಡೆಸಲಾಗುತ್ತಿದೆ ಎಂದು ಸೇನೆ ಹೇಳಿಕೆಯಲ್ಲಿ ತಿಳಿಸಿದೆ.
ಕಾಂಡಿ ಅರಣ್ಯದ ದಟ್ಟವಾದ ಪೊದೆಗಳಲ್ಲಿ ಮತ್ತು ಕಲ್ಲಿನ ಭೂಪ್ರದೇಶದ ಗುಹೆಯಲ್ಲಿ ಭಯೋತ್ಪಾದಕರು ಇರುವ ಬಗ್ಗೆ ಮಾಹಿತಿ ದೊರೆತ ನಂತರ ಮೇ 3ರಂದು ಜಂಟಿ ಕಾರ್ಯಾಚರಣೆ ಪ್ರಾರಂಭಿಸಲಾಯಿತು.

ಬೆಳಿಗ್ಗೆ 7.30ರ ಸುಮಾರಿಗೆ ಶೋಧ ತಂಡ ಭಯೋತ್ಪಾದಕರ ಸಂಪರ್ಕ ಇರುವ ಸ್ಥಳ ಪತ್ತೆ ಮಾಡಿದ ನಂತರ ಭಾರೀ ಗುಂಡಿನ ಚಕಮಕಿ ನಡೆಯಿತು. ಆಗ ತಪ್ಪಿಸಿಕೊಳ್ಳಲು ಸ್ಫೋಟಕಗಳಿಂದ ದಾಳಿ ಮಾಡಿದ್ದಾರೆ. ಸ್ಫೋಟದಲ್ಲಿ ಐವರು ಸೇನಾ ಸಿಬ್ಬಂದಿ ಮೃತಪಟ್ಟಿದ್ದಾರೆ. ಓರ್ವ ಅಧಿಕಾರಿಗೆ ಗಾಯಗಳಾಗಿವೆ ಎಂದು ಜಮ್ಮು ಮತ್ತು ಕಾಶ್ಮೀರ ಸೇನೆಯು ಹೇಳಿಕೆಯಲ್ಲಿ ತಿಳಿಸಿದೆ. ಗಾಯಗೊಂಡ ಯೋಧರನ್ನು ಚಿಕಿತ್ಸೆಗಾಗಿ ಉಧಂಪುರದ ಕಮಾಂಡ್ ಆಸ್ಪತ್ರೆಗೆ ವಿಮಾನದ ಮೂಲಕ ರವಾನಿಸಲಾಗಿದೆ.
ಗುಂಡಿನ ಚಕಮಕಿಯ ಕಾರಣದಿಂದ ಭಯೋತ್ಪಾದಕ ಗುಂಪಿನಲ್ಲೂ ಸಾವು ನೋವುಗಳು ಸಂಭವಿಸಿರುವ ಸಾಧ್ಯತೆಯಿದೆ. ಭಯೋತ್ಪಾದಕರು ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ಶಂಕಿಸಲಾಗಿದೆ. ಆದರೂ ಸೇನಾ ಕಾರ್ಯಾಚರಣೆ ಪ್ರಗತಿಯಲ್ಲಿದೆ. ಈ ಮಧ್ಯೆ, ರಜೌರಿ ಪ್ರದೇಶದಲ್ಲಿ ಮೊಬೈಲ್, ಅಂತರ್ಜಾಲ ಸೇವೆ ಸೌಲಭ್ಯಗಳನ್ನು ಅಮಾನತುಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಮುಖ ಸುದ್ದಿ :-   ನಟಿ ಸಿದ್ಧಾರ್ಥ- ನಟಿ ಅದಿತಿ ರಾವ್ ಮದುವೆ ಆಗಿಲ್ಲ : ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ ; ಸ್ಪಷ್ಟನೆ ನೀಡಿದ ಅದಿತಿ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement