ಮೇ 6ರಂದು ಪ್ರಧಾನಿ ಮೋದಿ ರೋಡ್‌ ಶೋ : ಬೆಂಗಳೂರಿನ 34 ರಸ್ತೆಗಳು ಬಂದ್; ಇಲ್ಲಿದೆ ಮಾಹಿತಿ

posted in: ರಾಜ್ಯ | 0

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಯ ಪ್ರ ಮತದಾನದ ದಿನ ಸಮೀಪಿಸುತ್ತಿದ್ದಂತೆಯೇ ಪ್ರಧಾನಿ ನರೇಂದ್ರ ಮೋದಿ ಅಬ್ಬರದ ಪ್ರಚಾರ ರಾಜ್ಯದೆಲ್ಲೆಡೆ ಜೋರಾಗಿದ್ದು, ರಾಜಧಾನಿ ಬೆಂಗಳೂರಿನಲ್ಲಿ ಮೇ 6 ಮತ್ತು 7ರಂದು ಅವರ ರೋಡ್‌ ಶೋ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ನಗರದ ಒಟ್ಟು 34 ರಸ್ತೆಗಳಲ್ಲಿ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ.
ಪ್ರಧಾನಿ ಮೋದಿ ಅವರು ಎರಡು ಹಂತಗಳಲ್ಲಿ ಬೆಂಗಳೂರಿನಲ್ಲಿ ಸುಮಾರು 36 ಕಿ.ಮೀ ರೋಡ್​ ಶೋ ನಡೆಸಲಿದ್ದಾರೆ. ಮೇ 6 ಹಾಗೂ 7ರಂದು ರೋಡ್ ಶೋ ಇರುವುದರಿಂದ ನಗರದ ಹಲವು ರಸ್ತೆಗಳಲ್ಲಿ ಬೆಳಗ್ಗೆ 8 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೂ ಸಂಚಾರ ನಿರ್ಬಂಧವಿರಲಿದೆ ಎಂದು ನಗರ ಸಂಚಾರ ಪೊಲೀಸ್‌ ಇಲಾಖೆ ತಿಳಿಸಿದೆ. ಪ್ರಧಾನಿ ನರೇಂದ್ರ ಮೋದಿ ರೋಡ್ ಶೋ  ನಡೆಯಲಿದ್ದು, ಮೇ 6ರಂದು ಶನಿವಾರ ಒಟ್ಟು 34 ರಸ್ತೆಗಳನ್ನು ಬಳಸದಂತೆ ಸೂಚಿಸಿದ್ದಾರೆ.  ಯಾವೆಲ್ಲ ರಸ್ತೆಗಳಲ್ಲಿ ಸಂಚಾರ ಬಂದ್ ಆಗಲಿದೆ ಎಂದು ನಗರ ಸಂಚಾರಿ ಪೊಲೀಸ್ ಮಾರ್ಗ ಸೂಚಿ ಬಿಡುಗಡೆ ಮಾಡಿದ್ದಾರೆ.
ಮೇ 6ರಂದು ಎಲ್ಲೆಲ್ಲಿ ಸಂಚಾರ ನಿರ್ಬಂಧ?
ರಾಜ ಭವನ ರಸ್ತೆ, ರಮಣ ಮಹರ್ಷಿ ರಸ್ತೆ, ಮೇಖ್ರಿ ವೃತ್ತ, ಆರ್ ಬಿ ಐ ಲೇಔಟ್ ಜೆಪಿ ನಗರ, ಶಿರ್ಸಿ ಸರ್ಕಲ್, ಜೆಜೆ ನಗರ, ಬಿನ್ನಿ ಮಿಲ್ ರಸ್ತೆ, ಶಾಲಿನಿ ಮೈದಾನ, ಸೌತ್ ಎಂಡ್ ಸರ್ಕಲ್, ಆಮುರ್ಗಂ ಸರ್ಕಲ್, ಬುಲ್ ಟೆಂಪಲ್ ರೋಡ್, ರಾಮಕೃಷ್ಣಾಶ್ರಮ, ಉಮಾ ಟಾಕೀಸ್, ಟಿಆರ್ ಮಿಲ್, ಚಾಮರಾಜಪೇಟೆ ಮುಖ್ಯ ರಸ್ತೆ, ಬಾಳೆಕಾಯಿ ಮಂಡಿ, ಕೆ ಪಿ ಅಗ್ರಹಾರ, ಮಾಗಡಿ ರೋಡ್, ಚೇಳೂರುಪಾಳ್ಯ ರೋಡ್, ಎಂಸಿ ಸರ್ಕಲ್, ವೆಸ್ಟ್ ಆಫ್ ಕಾರ್ಡ್ ರೋಡ್, ಎಂ ಸಿ ಲೇಔಟ್, ನಾಗರಭಾವಿ ಮುಖ್ಯರಸ್ತೆ, ಬಿಜಿಎಸ್ ಮೈದಾನ, ಹಾವನೂರು ಸರ್ಕಲ್, ಎಂಟನೇ ಮುಖ್ಯರಸ್ತೆ ಬಸವೇಶ್ವರ ನಗರ, ಬಸವೇಶ್ವರ ನಗರ ಹದಿನೈದನೇ ಮುಖ್ಯ ರಸ್ತೆ, ಶಂಕರ್ ಮಠ, ಮೋದಿ ಅಸ್ಪತ್ರೆ ರೋಡ್, ನವರಂಗ್ ರಸ್ತೆ, ಎಂ ಕೆಕೆ ರಸ್ತೆ, ಮಲ್ಲೇಶ್ವರಂ ಸರ್ಕಲ್, ಸಂಪಿಗೆ ರಸ್ತೆ, ಸ್ಯಾಂಕಿ ರಸ್ತೆಗಳನ್ನು ಬಳಸದೇ ಪರ್ಯಾಯ ಮಾರ್ಗಗಳನ್ನು ಬಳಸಿ ಎಂದು ನಗರ ಸಂಚಾರ ಪೊಲೀಸ್‌ ವಾಹನ ಸವಾರರಿಗೆ ಸೂಚನೆ ನೀಡಿದೆ.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಇಂದಿನ ಪ್ರಮುಖ ಸುದ್ದಿ :-   ಸರ್ಕಾರದ ಅಚ್ಚರಿಯ ನಿರ್ಧಾರ : ಬಿಡಿಎ-ಇತರ 10 ಯೋಜನಾ ಪ್ರಾಧಿಕಾರಗಳ ಅಧ್ಯಕ್ಷರನ್ನಾಗಿ ​ ಐಎಎಸ್‌ ಅಧಿಕಾರಿ ನೇಮಕ...!

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

0 / 5. ಒಟ್ಟು ವೋಟುಗಳು 0

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement