ಮೇ 9, 10ರಂದು ಕೆಎಸ್‌ಆರ್‌ಟಿಸಿ ಬಸ್ ಸಂಚಾರದಲ್ಲಿ ವ್ಯತ್ಯಯ

posted in: ರಾಜ್ಯ | 0

ಬೆಂಗಳೂರು: ಕರ್ನಾಟಕ ವಿಧಾನಭೆ ಚುನಾವಣೆ ಮೇ 10 ರಂದು ನಡೆಯಲಿರುವ ಹಿನ್ನೆಲೆಯಲ್ಲಿ ಮೇ 9 ಮತ್ತು 10 ರಂದು ಕರ್ನಾಟಕ ಸಾರಿಗೆ ಬಸ್ (KSRTC)​ ಸಂಚಾರದಲ್ಲಿ ವ್ಯತ್ಯಯವಾಗಲಿದೆ.
ಮೇ 10ರಂದು ರಾಜ್ಯದ 224 ಕ್ಷೇತ್ರಗಳಲ್ಲಿ ಮತದಾನ ನಡೆಯುವ ಕಾರಣ ಮೇ 9, 10ರಂದು ಬಸ್ ಸಂಚಾರದಲ್ಲಿ ವ್ಯತ್ಯಯವಾಗಲಿದೆ ಎಂದು ಕೆಎಸ್​ಆರ್​ಸಿ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದೆ. ಮೇ 10ರಂದು ಜಿಲ್ಲಾಡಳಿತ, ಪೊಲೀಸ್ ಇಲಾಖೆಗೆ ಚುನಾವಣಾ ಕರ್ತವ್ಯಕ್ಕೆ ಕೆಎಸ್ಆರ್​ಟಿಸಿ ಬಸ್​ಗಳನ್ನು ನಿಯೋಜಿಸಲಾಗಿದೆ. ಪರಿಣಾಮ 9 ಮತ್ತು 10 ರಂದು ರಾಜ್ಯದಲ್ಲಿ ಬಸ್ ಸಂಚಾರದಲ್ಲಿ ವ್ಯತ್ಯಯ ಉಂಟಾಗುತ್ತದೆ. ಪ್ರಯಾಣಿಕರು ಸಹಕರಿಸಬೇಕೆಂದು ಪ್ರಕಟಣೆ ಮೂಲಕ ಕೆಎಸ್​ಆರ್​ಟಿಸಿ ಮನವಿ ಮಾಡಿದೆ.
ಮತದಾನ ದಿನಕ್ಕೂ ಮುನ್ನ ಎಲ್ಲ ಬೂತ್‌ಗಳಿಗೆ ಚುನಾವಣಾ ಸಿಬ್ಬಂದಿ, ಪೊಲೀಸರು ಸೇರಿದಂತೆ ಇವಿಎಂ ಮಷಿನ್ ಮತ್ತು ವಿವಿ ಪ್ಯಾಟ್‌ಗಳನ್ನು ತಲುಪಿಸಲು ಎಂದಿನಂತೆ ಕೆಎಸ್‌ಆರ್‌ಟಿಸಿ ಬಸ್‌ಗಳನ್ನು ಬಳಸಿಕೊಳ್ಳಲು ಜಿಲ್ಲಾಡಳಿತ ನಿರ್ಧರಿಸಿದೆ. ರಾಜ್ಯದಲ್ಲಿ ಒಟ್ಟು 8100 ಕೆಎಸ್​ಆರ್​ಟಿಸಿ ಬಸ್​ಗಳ ಪೈಕಿ 3700 ಬಸ್​​ಗಳು ಚುನಾವಣಾ ಡ್ಯೂಟಿಗೆ ಹೋಗಲಿವೆ. ಮೇ 9 ಮತ್ತು 10 ರಂದು 4400 ಕೆಎಸ್​ಆರ್​ಟಿಸಿ ಬಸ್​ಗಳು ಮಾತ್ರ ಸಂಚಾರ ಮಾಡುತ್ತವೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಆ ಎರಡು ದಿನಗಳ ಕಾಲ ಕೆಎಸ್​ಆರ್​ಟಿಸಿ ಬಸ್ ಸಂಚಾರದಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಇಂದಿನ ಪ್ರಮುಖ ಸುದ್ದಿ :-   ಗೃಹಲಕ್ಷ್ಮೀ ಯೋಜನೆಯ ಅರ್ಜಿ ನಮೂನೆ ಬಿಡುಗಡೆ : 2000 ರೂ. ಪಡೆಯಲು ಯಾವ್ಯಾವ ದಾಖಲೆ ಕೊಡಬೇಕು? ಇಲ್ಲಿದೆ ಮಾಹಿತಿ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

0 / 5. ಒಟ್ಟು ವೋಟುಗಳು 0

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement