ವಿಶ್ವ ವಿಖ್ಯಾತ ಮೈಸೂರು ದಸರಾದಲ್ಲಿ 15 ಬಾರಿ ಚಿನ್ನದ ಅಂಬಾರಿ ಹೊತ್ತಿದ್ದ ಬಲರಾಮ ಆನೆ ಅಸ್ವಸ್ಥ

posted in: ರಾಜ್ಯ | 0

ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಜಂಬೂಸವಾರಿಯಲ್ಲಿ 15 ಬಾರಿ ಅಂಬಾರಿ ಹೊತ್ತಿರುವ ಹೆಗ್ಗಳಿಕೆ ಪಾತ್ರನಾಗಿದ್ದ ‘ಬಲರಾಮ’ ಆನೆ (67) ತೀವ್ರ ಅಸ್ವಸ್ಥಗೊಂಡಿದ್ದು, ಕಳೆದ 7 ದಿನಗಳಿಂದ ಆಹಾರ ತ್ಯಜಿಸಿರುವುದಾಗಿ ತಿಳಿದುಬಂದಿದೆ.
7 ದಿನಗಳಿಂದ ಅಸ್ವಸ್ಥಗೊಂಡಿರುವ ಬಲರಾಮನಿಗೆ ನಾಗರಹೊಳೆ ಉದ್ಯಾನದ ಹುಣಸೂರು ರೇಂಜ್‌ನ ಭೀಮನಕಟ್ಟೆ ಆನೆ ಶಿಬಿರದಲ್ಲಿ ಪಶು ವೈದ್ಯರ ತಂಡ ಚಿಕಿತ್ಸೆ ನೀಡುತ್ತಿದೆ. ತಜ್ಞರ ತಂಡವು ಈಗ ಆನೆಗೆ ಎಂಡೋಸ್ಕೋಪಿ ಮಾಡಲು ಮುಂದಾಗಿದೆ ಎನ್ನಲಾಗಿದೆ. ಆನೆಯ ಗಂಟಲಿನಲ್ಲಿ ಹುಣ್ಣಾಗಿರುವ ಕಾರಣ ಅದಕ್ಕೆ ಆಹಾರ ನುಂಗಲು ಸಾಧ್ಯವಾಗುತ್ತಿಲ್ಲ ಎಂದು ಹೇಳಲಾಗಿದೆ.
ಒಂದು ವಾರದಿಂದ ಆಹಾರ ಸೇವಿಸದ ಕಾರಣ ಆನೆ ನಿತ್ರಾಣಗೊಂಡಿದೆ. ಈ ಹಿನ್ನೆಲೆಯಲ್ಲಿ ಪಶುವೈದ್ಯರು ಆನೆಗೆ ದ್ರವ ಪದಾರ್ಥಗಳನ್ನು ನೀಡುವಂತೆ ಸಲಹೆ ನೀಡಿದ್ದಾರೆ. ಆನೆಯನ್ನು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಬಳಿಯ ಭೀಮನಕಟ್ಟೆಯಲ್ಲಿರುವ ವಿಶೇಷ ಆನೆ ಆರೋಗ್ಯ ಶಿಬಿರದಲ್ಲಿರಿಸಿ ನಿರಂತರ ನಿಗಾವಹಿಸಲಾಗಿದೆ. ಡಿದ್ದಾರೆ.
ಆರೈಕೆ ಹಾಗೂ ಆಹಾರವನ್ನು ಸೂಕ್ತ ರೀತಿಯಲ್ಲಿ ನೀಡಿ, ಪಾಲನೆ ಮಾಡುವುದರಿಂದ ಶಿಬಿರಗಳಲ್ಲಿ ಆನೆಗಳು ಹೆಚ್ಚು ಕಾಲ ಬದುಕುಳಿಯುತ್ತವೆ. ಶಿಬಿರಗಳಲ್ಲಿ ಆನೆಗಳು 90 ವರ್ಷಗಳವರೆಗೂ ಬದುಕುಳಿಯುತ್ತವೆ. ಬಲರಾಮ 15 ವರ್ಷಗಳಿಂದ ಚಿನ್ನದ ಅಂಬಾರಿಯನ್ನು ಹೊತ್ತಿದ್ದಾನೆ. ಇತ್ತೀಚೆಗಷ್ಟೇ ಅಭಿಮನ್ಯೂ ಅಂಬಾರಿಯನ್ನು ಹೊತ್ತಿದ್ದ ಎಂದು ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

0 / 5. ಒಟ್ಟು ವೋಟುಗಳು 0

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement