ಬಿಜೆಪಿಗೆ ಮೋಸ ಮಾಡಿದ ಲಕ್ಷ್ಮಣ ಸವದಿ ಸೋಲಿಸಿ: ಅಮಿತ್ ಶಾ

ಅಥಣಿ : ಕಾಂಗ್ರೆಸ್ ನಾಯಕರು ಪದೇ ಪದೇ ವೀರ ಸಾವರ್ಕರಗೆ ಅಪಮಾನ ಮಾಡುತ್ತಿದ್ದಾರೆ. ರಾಹುಲ್ ಗಾಂಧಿ ಕೂಡ ಅವಮಾನ ಮಾಡಿದ್ದಾರೆ. ನೀವು ಹತ್ತು ಜನ್ಮ ತಾಳಿದರೂ ಸಾವರ್ಕರ್ ಅವರಂತಹ ತ್ಯಾಗ ನಿಮ್ಮಿಂದ ಸಾಧ್ಯವಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ವಾಗ್ದಾಳಿ ನಡೆಸಿದ್ದಾರೆ.
ಇಲ್ಲಿಯ ಭೋಜರಾಜ ಕ್ರೀಡಾಂಗಣದಲ್ಲಿ ಶನಿವಾರ ಬಿಜೆಪಿ ಅಭ್ಯರ್ಥಿ ಮಹೇಶ ಕುಮಟಳ್ಳಿ ಪರ ಚುನಾವಣಾ ಪ್ರಚಾರ ನಡೆಸಿ ಮಾತನಾಡಿದ ಅವರು, ಕಾಂಗ್ರೆಸ್ ನಾಯಕರು ಆಂಜನೇಯನನ್ನು ಅವಮಾನ ಮಾಡುತ್ತಿದ್ದಾರೆ. ಪ್ರಣಾಳಿಕೆಯಲ್ಲಿ ಬಜರಂಗದಳ ನಿಷೇಧ ಮಾಡುವುದಾಗಿ ಹೇಳಿದ್ದಾರೆ. ಈ ಬಾರಿ ಚುನಾವಣೆಯಲ್ಲಿ ರಾಜ್ಯದ ಜನರು ಕಾಂಗ್ರೆಸ್ಸಿಗೆ ತಕ್ಕ ಪಾಠ ಕಲಿಸಬೇಕು ಎಂದು ಮನವಿ ಮಾಡಿದರು.
ಬಿಜೆಪಿಗೆ ಮೋಸ ಮಾಡಿದ ಲಕ್ಷ್ಮಣ ಸವದಿ ಅವರನ್ನು ಈ ಸಲದ ಚುನಾವಣೆಯಲ್ಲಿ ಸೋಲಿಸುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಕರೆ ನೀಡಿದರು. ಕರ್ನಾಟಕದ ಚುನಾವಣೆಯೇ ಬೇರೆ. ಅಥಣಿ ಚುನಾವಣೆಯೇ ಬೇರೆ. ಅಧಿಕಾರದ ಆಸೆಗೆ ತನ್ನ ಸ್ವಾರ್ಥಕ್ಕೆ ಬಿಜೆಪಿಗೆ ಮೋಸ ಮಾಡಿದ ಸವದಿಯನ್ನು ಸೋಲಿಸಿ ಎಂದು ಕರೆ ನೀಡಿದರು.

ಪ್ರಮುಖ ಸುದ್ದಿ :-   ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಕಳ್ಳ ಸಾಗಣೆ ಮಾಡುತ್ತಿದ್ದ 10 ಹಳದಿ ಅನಕೊಂಡ ಹಾವುಗಳು ವಶಕ್ಕೆ, ಓರ್ವನ ಬಂಧನ

ಪ್ರಧಾನಿ ಮೋದಿ ಅವರು ಮಹದಾಯಿ ನೀರನ್ನು ಉತ್ತರ ಕರ್ನಾಟಕಕ್ಕೆ ನೀಡಿದರು. ಸಮಸ್ತ ಕಿತ್ತೂರು ಕರ್ನಾಟಕ ರೈತರಿಗೆ ಅನುಕೂಲ ಮಾಡಿಕೊಟ್ಟರು. ಬಿಜೆಪಿ ಹತ್ತು ಹಲವು ಅಭಿವೃದ್ಧಿ ಕಾರ್ಯಗಳಿಂದ ಕರ್ನಾಟಕ ಜನತೆಯ ಮನ ಗೆದ್ದಿದೆ ಎಂದು ಹೇಳಿದರು.
ರಾಹುಲ್ ಗಾಂಧಿ ಹೋದಲ್ಲೆಲ್ಲ ಕಾಂಗ್ರೆಸ್ ಪಕ್ಷ ಸೋತಿದೆ. ಮೋದಿಯವರನ್ನು ವಿಷದಹಾವು ಎಂದು ಖರ್ಗೆ ಕರೆದಿದ್ದಾರೆ. ಎಷ್ಟು ದಿನಗಳ ಕಾಲ ಮೋದಿಗೆ ನೀವು ದೂಷಿಸುತ್ತೀರಿ. ಇದರಿಂದ ಕಮಲವೇ ಅರಳುತ್ತದೆ. ಪಿಎಫ್‌ಐ ಸಂಘಟನೆಯನ್ನು ನಾವೇ ನಿಷೇಧಿಸಿದ್ದೇವೆ. ಬಜರಂಗದಳವನ್ನು ನಿಷೇಧಿಸುವುದಾಗಿ ಹೇಳಿರುವ ಕಾಂಗ್ರೆಸ್ಸಿಗೆ ಬುದ್ಧಿ ಕಲಿಸಿ ಎಂದು ಅವರು ತಿಳಿಸಿದರು.
ರಮೇಶ ಜಾರಕಿಹೊಳಿ ಮಾತನಾಡಿ, ಕೃಷ್ಣಾ ಸಕ್ಕರೆ ಕಾರ್ಖಾನೆಯಲ್ಲಿ ನಡೆದ ಭ್ರಷ್ಟಾಚಾರವನ್ನು ಸಿಬಿಐಗೆ ಒಪ್ಪಿಸಬೇಕು. ಸೂಪರ್ ಸೀಡ್ ಮಾಡಬೇಕು ಎಂದು ಅಮಿತ್ ಶಾ ಅವರಲ್ಲಿ ವಿನಂತಿಸಿದರು ಮಹೇಶ ಕುಮಟಳ್ಳಿ ಅವರಿಗೆ ಬಿಜೆಪಿಯಿಂದ ಟಿಕೆಟ್ ನೀಡಲಾಯಿತು. ಮಹೇಶ ಕುಮಟಳ್ಳಿ ಅವರ ಮೇಲಿನ ಸ್ನೇಹದ ಕಾರಣದಿಂದ ಅಥಣಿಗೆ ಬರುತ್ತಿದ್ದೇನೆ. ಈ ಸಲದ ಚುನಾವಣೆಯಲ್ಲಿ ಮಹೇಶ ಕುಮಟಳ್ಳಿ ಅವರಿಗೆ ಹೆಚ್ಚಿನ ಮತ ನೀಡಿ ಗೆಲ್ಲಿಸುವಂತೆ ವಿನಂತಿಸಿದರು.

ಪ್ರಮುಖ ಸುದ್ದಿ :-   ಲೋಕಸಭಾ ಚುನಾವಣೆ ವೇಳೆ ಬಿಜೆಪಿಗೆ ಶಾಕ್ : ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಿಜೆಪಿ ಸದಸ್ಯ ಕೆ.ಪಿ.ನಂಜುಂಡಿ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement