ಬೆಂಗಳೂರು, ಮೈಸೂರಿನ ಹಲವೆಡೆ ಐಟಿ ದಾಳಿ: ಸುಮಾರು ₹15 ಕೋಟಿ ವಶ

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಿರುವ ಅಭ್ಯರ್ಥಿಗಳಿಗೆ ಹಣ ರವಾನೆ ಮಾಡುತ್ತಿದ್ದ ಆರೋಪದ ಮೇರೆಗೆ ಬೆಂಗಳೂರು ಮತ್ತು ಮೈಸೂರಿನಲ್ಲಿ ಹಲವು ಫೈನಾನ್ಶಿಯರ್ ಗಳ ಮನೆ ಮತ್ತು ಕಚೇರಿಗಳ ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ ಎಂದು ವರದಿಯಾಗಿದೆ.
ಬೆಂಗಳೂರು ಮತ್ತು ಮೈಸೂರಿನ ಹಲವು ಸ್ಥಳಗಳಲ್ಲಿ ಐಟಿ ದಾಳಿ ನಡೆದಿದ್ದು, ಸುಮಾರು 15 ಕೋಟಿಗೂ ಅಧಿಕ ಹಣ ವಶಕ್ಕೆ ಪಡೆಯಲಾಗಿದೆ ಎಂದು ವರದಿಯಾಗಿದೆ ಇವರು ಚುನಾವಣೆಗೆ ಸ್ಪರ್ಧೆ ಮಾಡಿರುವ ಅಭ್ಯರ್ಥಿಗಳಿಗೆ ಹಣಕಾಸು ಸಹಾಯ ಮಾಡುತ್ತಿದ್ದರು ಎಂದು ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ ಎಂದು ಹೇಳಲಾಗಿದೆ.
ಕೆಲವು ಫೈನಾನ್ಸಿಯರ್ ಗಳು ಬೇನಾಮಿ ಹೆಸರಿನಲ್ಲಿ ವ್ಯವಹಾರ ಮಾಡುತ್ತಿದ್ದರು ಎಂಬ ಆರೋಪಗಳು ಕೇಳಿಬಂದ ನಂತರ ನಿನ್ನೆ ಏಕಕಾಲದಲ್ಲಿ ದಾಳಿ ನಡೆಸಲಾಗಿದೆ. ದಾಳಿ ವೇಳೆ ಬೆಂಗಳೂರು ಹಾಗೂ ಮೈಸೂರು ಭಾಗದಲ್ಲಿ ಸುಮಾರು 15 ಕೋಟಿಗೂ ಅಧಿಕ ಹಣ ವಶಕ್ಕೆ ಪಡೆಯಲಾಗಿದೆ. 15 ಕೋಟಿಗೂ ಹೆಚ್ಚಿನ ಪ್ರಮಾಣದ ನಗದು ವಶಕ್ಕೆ ಪಡೆಯಲಾಗಿದೆ ಎಂದು ವರದಿಯಾಗಿದೆ.
ಬೆಂಗಳೂರಿನ ಶಾಂತಿನಗರ, ಕಾಕ್ಸ್ ಟೌನ್, ಶಿವಾಜಿನಗರ, ಆರ್‌ಎಂವಿ ಬಡಾವಣೆ, ಕನಿಂಗ್ಹ್ಯಾಮ್ ರಸ್ತೆ, ಸದಾಶಿವ ನಗರ, ಕುಮಾರಪಾರ್ಕ್ ವೆಸ್ಟ್ ಸೇರಿದಂತೆ ಅನೇಕ ಕಡೆ ದಾಳಿ ನಡೆದಿದೆ ಎನ್ನಲಾಗಿದೆ.
ರಾಜ್ಯದಲ್ಲಿ ವಿಧಾನಸಭೆ ಚುನಾವಣೆಗೆ ಕೆಲವೇ ದಿನಗಳಿದ್ದು, ಅಕ್ರಮಗಳನ್ನು ತಡೆಯುವುದಕ್ಕಾಗಿ ಚುನಾವಣಾ ಆಯೋಗ ಹದ್ದಿನಕಣ್ಣಿಟ್ಟಿದೆ. ಈ ಮಧ್ಯೆ, ಆದಾಯ ತೆರಿಗೆ ಇಲಾಖೆಯೂ ಹಣಕಾಸು ವಹಿವಾಟುಗಳ ಮೇಲೆ ನಿಗಾ ಇರಿಸಿದೆ.

ಪ್ರಮುಖ ಸುದ್ದಿ :-   ಮಹಿಳೆ ಅಪಹರಣ ಪ್ರಕರಣ: ಶಾಸಕ ಎಚ್. ಡಿ. ರೇವಣ್ಣ ಮೇ 8ರ ವರೆಗೆ ಎಸ್ ಐಟಿ ವಶಕ್ಕೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement