ಅಮೆರಿಕದ ಟೆಕ್ಸಾಸ್ ಮಾಲ್‌ನಲ್ಲಿ ಗುಂಡಿನ ದಾಳಿ; 8 ಮಂದಿ ಸಾವು, ಹಲವರಿಗೆ ಗಾಯ

ಡಲ್ಲಾಸ್‌ : ಅಮೆರಿಕ ದೇಶದಲ್ಲಿ ಮತ್ತೆ ಗುಂಡಿನ ದಾಳಿ ನಡೆದಿದೆ. ಅಮೆರಿಕದ ಟೆಕ್ಸಾಸ್ ನಗರದ ಹೊರವಲಯದ ಮಾಲ್‌ವೊಂದರಲ್ಲಿ ಬಂದೂಕುಧಾರಿಯೊಬ್ಬ ಒಳನುಗ್ಗಿ ಮನಸೋಇಚ್ಛೆ ಗುಂಡಿನ ದಾಳಿ ನಡೆಸಿದ ನಂತರ ಎಂಟು ಮಂದಿ ಮೃತಪಟ್ಟಿದ್ದು ಹಲವರು ಗಾಯಗೊಂಡಿದ್ದಾರೆ.
ಶನಿವಾರ (ಮೇ 6) ಸುಮಾರು ಮಧ್ಯಾಹ್ನ 3:30ರ (ಸ್ಥಳೀಯ ಕಾಲಮಾನ) ಸುಮಾರಿಗೆ ಈ ಘಟನೆ ನಡೆದಿದೆ. ಡಲ್ಲಾಸ್‌ನ ಉತ್ತರಕ್ಕೆ 25 ಮೈಲು (40 ಕಿ.ಮೀ) ದೂರದ ಅಲೆನ್ಸ್‌ನಲ್ಲಿ ವಿಶಾಲವಾದ ವಾಣಿಜ್ಯ ಸಂಕೀರ್ಣ ಅಲನ್ ಪ್ರೀಮಿಯಂ ಮಾಲ್‌ನಲ್ಲಿ ಈ ಗುಂಡಿನ ದಾಳಿ ನಡೆದಿದೆ. ವಾರಾಂತ್ಯದ ದಿನಗಳಲ್ಲಿ ಅಲೆನ್ ವ್ಯಾಪಾರಗಳಿಂದ ತುಂಬಿರುತ್ತದೆ.
ಅಪರಿಚಿತ ಅಪರಿಚಿತ ಬಂದೂಕುಧಾರಿ ಹಾರಿಸಿದ ನಂತರ ತನಗೆ ಗುಂಡು ಹಾರಿಸಿಕೊಂಡು ಮೃತಪಟ್ಟಿದ್ದಾನೆ. ಘಟನೆಯಲ್ಲಿ ಮಕ್ಕಳೂ ಸೇರಿದಂತೆ 7 ಮಂದಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ದಾಳಿಯಲ್ಲಿ ಭಾಗಿಯಾಗಿದ್ದ ಮತ್ತೊಬ್ಬ ವ್ಯಕ್ತಿ ಪರಾರಿಯಾಗಿದ್ದು, ಶೋಧ ನಡೆಯುತ್ತಿದೆ ಎಂದು ಪೊಲೀಸ್ ಅಧಿಕಾರಿ ಬ್ರಿಯಾನ್ ಹಾರ್ವೆ ತಿಳಿಸಿದ್ದಾರೆ.
ಗಾಯಗೊಂಡವರ ಸ್ಥಿತಿ ಬಗ್ಗೆ ಇನ್ನೂ ಖಚಿತ ಮಾಹಿತಿ ದೊರೆತಿಲ್ಲ. ದಾಳಿಕೋರ ಗುಂಡು ಹಾರಿಸಿದ ನಂತರ ಸ್ವತಃ ಗುಂಡು ಹಾರಿಸಿಕೊಂಡಿದ್ದಾನೆಯೇ ಅಥವಾ ಪೊಲೀಸರು ಗುಂಡು ಹಾರಿಸಿದ್ದಾರೆಯೇ ಎಂಬುದು ಸ್ಪಷ್ಟವಾಗಿಲ್ಲ ಎಂದು ಮಾಧ್ಯಮಗಳು ವರದಿ ಮಾಡಿವೆ.
ಈ ಕುರಿತ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದು ಅಮೆರಿಕ ಟೆಕ್ಸಾಸ್‌ನ ಮಾಲ್‌ನಲ್ಲಿಯ ಗುಂಡಿನ ದಾಳಿಯಲ್ಲಿ ಗಾಯಗೊಂಡವರನ್ನು ಆಸ್ಪತ್ರೆ ಕರೆದೊಯ್ಯುತ್ತಿರುವ ದೃಶ್ಯ ಹರಿದಾಡಿದೆ.

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement