ಇಂದು ಬೆಳಿಗ್ಗೆ ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ ಪ್ರಕಟ : ನಿಮ್ಮ ಫಲಿತಾಂಶ ಹೀಗೆ ಚೆಕ್ ಮಾಡಬಹುದು…

ಬೆಂಗಳೂರು: ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ ಮೇ8ರಂದು ಬೆಳಿಗ್ಗೆ 10 ಗಂಟೆಗೆ ಪ್ರಕಟವಾಗಲಿದೆ.
ಈ ಕುರಿತು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧ್ಯಕ್ಷರು ಮಾಹಿತಿ ನೀಡಿದ್ದು, ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶವನ್ನು ದಿನಾಂಕ 08-05-2023ರಂದು ಬೆಳಿಗ್ಗೆ 10 ಗಂಟೆಗೆ ಮಂಡಳಿಯಲ್ಲಿ ಸುದ್ದಿಗೋಷ್ಠಿ ನಡೆಸಿ, ಪ್ರಕಟಿಸಲಾಗುತ್ತದೆ ಎಂದು ತಿಳಿಸಿದ್ದಾರೆ.
ಮಾರ್ಚ್ 2023ರ ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯನ್ನು ದಿನಾಂಕ 31-03-2023ರಿಂದ 15-04-2023ರ ವರೆಗೆ ನಡೆಸಲಾಯಿತು. ಎಲ್ಲಾ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯಗೊಂಡಿದೆ. ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶವನ್ನು ದಿನಾಂಕ 08-05-2023ರಂದು ಬೆಳಿಗ್ಗೆ 10 ಗಂಟೆಗೆ ಮಂಡಳಿಯಲ್ಲಿ ಸುದ್ದಿಗೋಷ್ಠಿ ನಡೆಸಿ, ಪ್ರಕಟಿಸಲಾಗುತ್ತದೆ ಎಂದು ತಿಳಿಸಿದ್ದಾರೆ. ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳು ಪರೀಕ್ಷೆಯ ಫಲಿತಾಂಶವನ್ನು ಮಂಡಳಿಯ ಜಾಲತಾಣ https://karresults.nic.in ನಲ್ಲಿ ಮೇ 8ರಂದು ಬೆಳಿಗ್ಗೆ 11 ಗಂಟೆಯಿಂದ ವೀಕ್ಷಿಸಬಹುದಾಗಿದೆ ಎಂದು ಹೇಳಿದ್ದಾರೆ. ಈ ಬಾರಿ ಎಸ್ ಎಸ್ ಎಲ್ ಸಿ ಪರೀಕ್ಷೆಯನ್ನು 8.6 ಲಕ್ಷ ವಿದ್ಯಾರ್ಥಿಗಳು ಬರೆದಿದ್ದಾರೆ.
ಎಸ್ಎಸ್ಎಲ್‌ಸಿ ಫಲಿತಾಂಶ ಪರಿಶೀಲಿಸುವ ವಿಧಾನ
*karresults.nic.in ಮತ್ತು kseab.karnataka.gov.in ವೆಬ್ ಸೈಟ್ ಗೆ ಭೇಟಿ ನೀಡಿ ಫಲಿತಾಂಶ ಪರಿಶೀಲಿಕೊಳ್ಳಬಹುದು
*ಮೊದಲು ಅಧಿಕೃತ ವೆಬ್ ಸೈಟ್ karresults.nic.in ಗೆ ಭೇಟಿ ನೀಡಬೇಕು.
*ಕರ್ನಾಟಕ ಎಸ್ ಎಸ್ ಎಲ್ ಸಿ 2023 ಫಲಿತಾಂಶ ಲಿಂಕ್ ಅನ್ನು ತೆರೆದರೆ ಹೊಸ ಲಾಗಿನ್ ಪುಟ ತೆರೆಯುತ್ತದೆ.
*ನಂತರ ನಿಮ್ಮ ನೋಂದಣಿ ಸಂಖ್ಯೆಯನ್ನು ನಮೂದಿಸಿ ಸೂಕ್ತ ಮಾಹಿತಿಯನ್ನು ಸಲ್ಲಿಸಿದರೆ ನಿಮ್ಮ ಫಲಿತಾಂಶ ಪ್ರಕಟವಾಗುತ್ತದೆ.

ಪ್ರಮುಖ ಸುದ್ದಿ :-   ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಸ್ಫೋಟ : 9 ಮಂದಿಗೆ ಗಾಯ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement