ಫುಡ್‌ ಡೆಲಿವರಿ ಬಾಯ್ಸ್‌ ಜೊತೆ ಬೈಕ್‌ ಸವಾರಿ ಮಾಡಿ ಟಿಫಿನ್‌ ಸವಿದ ರಾಹುಲ್‌ ಗಾಂಧಿ | ವೀಕ್ಷಿಸಿ

posted in: ರಾಜ್ಯ | 0

ಬೆಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಭಾನುವಾರ ಫುಡ್‌ ಡೆಲಿವರಿ ಬಾಯ್‌ನ ಸ್ಕೂಟರ್‌ನಲ್ಲಿ ಹಿಂಬದಿ ಸವಾರರಾಗಿ ಪ್ರಯಾಣಿಸಿ ಗಮನ ಸೆಳೆದಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಬೆಂಗಳೂರಿನಲ್ಲಿ ತಮ್ಮ ಎರಡನೇ ದಿನದ ಮೆಗಾ ರೋಡ್‌ ಶೋ ಅನ್ನು ಟ್ರಿನಿಟಿ ಸರ್ಕಲ್‌ನಲ್ಲಿ ಮುಗಿಸಿದರು. ಬಳಿಕ ಇಂದು ಭಾನುವಾರ ಕಾಂಗ್ರೆಸ್‌ ಅಭ್ಯರ್ಥಿಗಳ ಪರವಾಗಿ ಮತಯಾಚಿಸಿದ ರಾಹುಲ್‌ ಗಾಂಧಿ ನಂತರ ಫುಡ್‌ ಡೆಲಿವರಿ ಬಾಯ್‌ ಜೊತೆ ಭದ್ರತಾ ಸಿಬ್ಬಂದಿ ಬಿಟ್ಟು ತೆರಳಿದರು. ರಾಹುಲ್ ಗಾಂಧಿ ಅವರು ಫುಡ್ ಡೆಲಿವರಿ ಬಾಯ್ ಜೊತೆ ದ್ವಿಚಕ್ರ ವಾಹನದಲ್ಲಿ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಂಚಸಿದ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಇದಕ್ಕೂ ಮೊದಲು ಏರ್‌ಲೈನ್ಸ್‌ ಹೋಟೆಲ್‌ನಲ್ಲಿ ರಾಹುಲ್ ಗಾಂಧಿ ಫುಡ್ ಡೆಲಿವರಿ ಹುಡುಗರ ಜೊತೆ ಟಿಫಿನ್‌ ಮಾಡಿದರು. ಅವರ ಕಷ್ಟಗಳಿಗೆ ಕಿವಿಯಾದರು. ನಂತರ ಚಿನ್ನಸ್ವಾಮಿ, ರಾಜಭವನ ರಸ್ತೆಯಲ್ಲಿ 2 ಕಿ.ಮೀ ಸಂಚಾರ ನಡೆಸಿದರು.

ಕರ್ನಾಟಕ ವಿಧಾನಸಭೆಗೆ ಮೇ 10ರಂದು ಚುನಾವಣೆ ನಡೆಯಲಿದ್ದು, ಚುನಾವಣೆಗೆ ಕೇವಲ ಮೂರು ದಿನಗಳು ಬಾಕಿ ಉಳಿದಿದ್ದು, ಎಲ್ಲ ಪಕ್ಷಗಳು ತಮ್ಮ ಬಹಿರಂಗ ಪ್ರಚಾರದ ಕೊನೆಯ ಹಂತಗಳಲ್ಲಿ ಸಾಗುತ್ತಿವೆ. ಮತದಾರರನ್ನು ಓಲೈಸಲು ನಾನಾ ರೀತಿಯ ಕಸರತ್ತುಗಳನ್ನು ನಡೆಸುತ್ತಿವೆ.

ಇಂದಿನ ಪ್ರಮುಖ ಸುದ್ದಿ :-   ಮಾಜಿ ಸಿಎಂ ಯಡಿಯೂರಪ್ಪಗೆ ಬಿಗ್ ರಿಲೀಫ್: ಡಿನೋಟಿಫಿಕೇಶನ್‌ ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

0 / 5. ಒಟ್ಟು ವೋಟುಗಳು 0

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement