ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ 14 ಬಾರಿ ಚಿನ್ನದ ಅಂಬಾರಿ ಹೊತ್ತಿದ್ದ ಆನೆ ಬಲರಾಮ ಇನ್ನಿಲ್ಲ

ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದಲ್ಲಿ 14 ಬಾರಿ ಚಿನ್ನದ ಅಂಬಾರಿ ಹೊತ್ತಿದ್ದ ಬಲರಾಮ (67) ಆನೆ ಮೃತಪಟ್ಟಿದೆ.
ಬಲರಾಮ ಅನೆ ಮೈಸೂರು ದಸರಾ ಮಹೋತ್ಸವದ ವಿಜಯದಶಮಿ ಜಂಬೂಸವಾರಿ ಮೆರವಣಿಗೆಯಲ್ಲಿ 14 ಬಾರಿ ಚಿನ್ನದ ಅಂಬಾರಿ ಹೊತ್ತು ಸಾಗುವ ಮೂಲಕ ಬಲರಾಮ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿತ್ತು. ಅತ್ಯಂತ ಸೌಮ್ಯ ಸ್ವಭಾವದ ಬಲರಾಮ ಇತ್ತೀಚೆಗೆ ತೀವ್ರ ಅಸ್ವಸ್ಥಗೊಂಡಿತ್ತು.
ನಾಗರಹೊಳೆ ಉದ್ಯಾನವನದ ಹುಣಸೂರು ರೇಂಜ್ ವ್ಯಾಪ್ತಿಯ ಭೀಮನಕಟ್ಟೆ ಆನೆ ಶಿಬಿರದಲ್ಲಿ ಪಶು ವೈದ್ಯರ ತಂಡ ಬಲರಾಮನಿಗೆ ಚಿಕಿತ್ಸೆ ನೀಡುತ್ತಿತ್ತು. ಹುಣ್ಣು ಉಲ್ಬಣಿಸಿ ಅಸ್ವಸ್ಥಗೊಂಡಿದ್ದ ಅದಕ್ಕೆ ಶಿಬಿರದಲ್ಲಿಯೇ ಪಶುವೈದ್ಯರು ಚಿಕಿತ್ಸೆ ನೀಡುತ್ತಿದ್ದರು. ಹುಣ್ಣಾದ ಕಾರಣ ಆಹಾರ ಸೇವಿಸಲು ಸಾಧ್ಯವಾಗದೆ ನಿತ್ರಾಣಗೊಂಡಿತ್ತು. ಚಿಕಿತ್ಸೆಗೆ ಸ್ಪಂದಿಸದ ಕಾರಣ ಬಲರಾಮ ಭಾನುವಾರ ಕೊನೆಯುಸಿರೆಳೆಯುತು.
ಎಷ್ಟೇ ಪ್ರಯತ್ನಪಟ್ಟರು ಸಹ ಚಿಕಿತ್ಸೆಗೆ ಸ್ಪಂದಿಸದ್ದರಿಂದ ಬಲರಾಮನನ್ನು ಬದುಕಿಸಲು ಸಾಧ್ಯವಾಗಲಿಲ್ಲ. ಬಲರಾಮನ ಅಗಲುವಿಕೆಯಿಂದ ಭೀಮನಕಟ್ಟೆ ಆನೆ ಶಿಬಿರದ ಅಧಿಕಾರಿಗಳು ಮತ್ತು ಸಿಬ್ಬಂದಿ ದುಃಖಿತರಾಗಿದ್ದಾರೆ. ಅದಕ್ಕೆ ಟಿಬಿ ಇರಬಹುದೆಂದು ಶಂಕಿಯೂ ಇದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ಬರಬೇಕಿದೆ.

ಪ್ರಮುಖ ಸುದ್ದಿ :-   ಕರ್ನಾಟಕದ 7 ಜಿಲ್ಲೆಗಳಲ್ಲಿ ನಾಳೆಯಿಂದ ಮತ್ತೆ ಮಳೆ ಅಬ್ಬರ ; ಉಳಿದ ಜಿಲ್ಲೆಗಳಲ್ಲಿ ಚುರುಕು

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement