ಮೋಚಾ ಚಂಡಮಾರುತದ ಪ್ರಭಾವ : ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ 4 ದಿನ ಮಳೆ ಸಾಧ್ಯತೆ

ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಕಡೆ ಮುಂದಿನ 4 ದಿನಗಳ ಕಾಲ ಮಳೆ(Rain)ಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಂಗಾಳಕೊಲ್ಲಿಯ ಆಗ್ನೇಯ ಭಾಗ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಿಧಾನವಾಗಿ ಮೋಚಾ ಚಂಡಮಾರುತ ರೂಪುಗೊಳ್ಳುತ್ತಿದೆ. ಇದು ಮೇ 8ರಂದು ಪ್ರಾರಂಭವಾಗಲಿದ್ದು, ಮೇ 9ರ ನಂತರ ತೀವ್ರ ಸ್ವರೂಪ ಪಡೆದುಕೊಳ್ಳಲಿದೆ. ಭಾನುವಾರದ ನಂತರ ಗಾಳಿಯು ಗಂಟೆಗೆ 40-50 ಕಿ.ಮೀ ವೇಗದಲ್ಲಿ ಬೀಸಲಿದೆ. ಇದರ ಪ್ರಭಾವ ಕರ್ನಾಟಕದ ಮೇಲೆಯೂ ಆಗುವ ಸಾಧ್ಯತೆಯೂ ಇದ್ದು, ಮೇ8 ರಿಂದ 12ರವರೆಗೆ ರಾಜ್ಯದ ಹಲವೆಡೆ ಮಳೆಯಾಗುವ ಸಾಧ್ಯತೆ ಇದೆ. ಹವಾಮಾನ ಇಲಾಖೆಯ ಮುನ್ಸೂಚನೆ ಪ್ರಕಾರ, ಇಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಗುಡುಗು ಮಿಂಚು ಸಹಿತ ಹಗುರ ಮಳೆಯಾಗಲಿದೆ. ಮೇ 10ರವರೆಗೆ ಕರಾವಳಿಯ ಒಂದೆರಡು ಕಡೆಗಳಲ್ಲಿ ಮಿಂಚು ಸಹಿತ ಗುಡುಗಿನಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ. ಎಂದು ಹೇಳಲಾಗಿದೆ. ದಕ್ಷಿಣ ಒಳನಾಡಿನ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಬಹುದು, ಕರಾವಳಿ ಜಿಲ್ಲೆಗಳು ಹಾಗೂ ಉತ್ತರ ಒಳನಾಡಿನ ರಾಯಚೂರು, ಗದಗ, ಕೊಪ್ಪಳ, ಬಾಗಲಕೋಟೆ, ಬೀದರ, ಕಲಬುರಗಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ಆಗ್ನೇಯ ಬಂಗಾಳ ಕೊಲ್ಲಿಯಲ್ಲಿ ಸೈಕ್ಲೋನಿಕ್ ಚಂಡಮಾರುತದ ರಚನೆಯ ಬಗ್ಗೆ ಹವಾಮಾನ ಸಂಸ್ಥೆ ಎಚ್ಚರಿಕೆ ನೀಡಿದೆ. ಇದರಿಂದ ಮೇ 7 ಮತ್ತು ಮೇ 9 ರ ನಡುವೆ ದೇಶದ ಪೂರ್ವ ಕರಾವಳಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ಪ್ರಮುಖ ಸುದ್ದಿ :-   ಬೆಳಗಾವಿ | ಮಸೀದಿಯಲ್ಲಿದ್ದ ಕುರಾನ್ ಕದ್ದೊಯ್ದು ಸುಟ್ಟು ಹಾಕಿದ ಕಿಡಿಗೇಡಿಗಳು ; ಪ್ರತಿಭಟನೆ

 

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement