ಕರ್ನಾಟಕದಲ್ಲಿ ಮಾದರಿ ನೀತಿ ಸಂಹಿತೆ ಉಲ್ಲಂಘನೆ: ಕಾಂಗ್ರೆಸ್, ಬಿಜೆಪಿಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ನವದೆಹಲಿ: ಕರ್ನಾಟಕದಲ್ಲಿ ಚುನಾವಣಾ ಪ್ರಚಾರದ ವೇಳೆ ಅವಾಚ್ಯ ಶಬ್ದಗಳನ್ನು ಬಳಸಿದ ಆರೋಪದ ಮೇಲೆ ಕಾಂಗ್ರೆಸ್ ಮತ್ತು ಬಿಜೆಪಿ ಎರಡೂ ಪಕ್ಷಗಳ ವಿರುದ್ಧ ಭಾರತೀಯ ಚುನಾವಣಾ ಆಯೋಗವು (ಇಸಿಐ) ನೋಟಿಸ್ ಜಾರಿ ಮಾಡಿದೆ. ಕಾಂಗ್ರೆಸ್ ನಾಯಕ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಸಲ್ಲಿಸಿದ ದೂರಿನ ಆಧಾರದ ಮೇಲೆ ರಾಜ್ಯ ಬಿಜೆಪಿ ಮುಖ್ಯಸ್ಥರಿಗೆ ನೋಟಿಸ್ ನೀಡಲಾಗಿದೆ, ಅವರು ಪ್ರಮುಖ … Continued

ಮಣಿಪುರ ಹಿಂಸಾಚಾರದಲ್ಲಿ 60 ಮಂದಿ ಸಾವು, 231 ಮಂದಿಗೆ ಗಾಯ, 1,700 ಮನೆಗಳಿಗೆ ಬೆಂಕಿ: ಸಿಎಂ ಬಿರೇನ್ ಸಿಂಗ್

ಇಂಫಾಲ: ಮೇ 3 ರಿಂದ ಮಣಿಪುರದಲ್ಲಿ ನಡೆಯುತ್ತಿರುವ ಜನಾಂಗೀಯ ಹಿಂಸಾಚಾರದಲ್ಲಿ 1,700 ಮನೆಗಳು ಸುಟ್ಟು ಭಸ್ಮವಾಗಿದ್ದು, ಮಹಿಳೆಯರು ಸೇರಿದಂತೆ ಕನಿಷ್ಠ 60 ಜನರು ಸಾವಿಗೀಡಾಗಿದ್ದಾರೆ ಮತ್ತು 231 ಜನರು ಗಾಯಗೊಂಡಿದ್ದಾರೆ ಎಂದು ಮುಖ್ಯಮಂತ್ರಿ ಎನ್.ಬಿರೇನ್ ಸಿಂಗ್ ಸೋಮವಾರ ಹೇಳಿದ್ದಾರೆ. ರಾಜ್ಯ ರಾಜಧಾನಿ ಇಂಫಾಲದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಣಿಪುರದ ಅಶಾಂತಿ “ಅತ್ಯಂತ ದುರದೃಷ್ಟಕರ” ಎಂದು ಬಣ್ಣಿಸಿದರು. … Continued

ಮೈಸೂರು : ಸಕಲ ಸರ್ಕಾರಿ ಗೌರವದೊಂದಿಗೆ ಆನೆ ಬಲರಾಮನ ಅಂತ್ಯಕ್ರಿಯೆ

ನವದೆಹಲಿ: 14 ಬಾರಿ ವಿಶ್ವವಿಖ್ಯಾತ ಮೈಸೂರು ದಸರಾ ಅಂಬಾರಿ ಹೊತ್ತ ಗೌರವಕ್ಕೆ ಪಾತ್ರವಾಗಿದ್ದ ಬಲರಾಮ ಆನೆ ಭಾನುವಾರ ಮೃತಪಟ್ಟಿದ್ದು, ಆನೆಯ ಅಂತ್ಯಕ್ರಿಯೆಯನ್ನು ಸೋಮವಾರ ಅರಣ್ಯ ಇಲಾಖೆಯು ಸಕಲ ಸರ್ಕಾರಿ ಗೌರವದೊಂದಿಗೆ ನೆರವೇರಿಸಿತು. 67 ವರ್ಷ ವಯಸ್ಸಿನ ಬಲರಾಮ ಆನೆ ಕೆಲ ದಿನಗಳಿಂದ ಅನಾರೋಗ್ಯಕ್ಕೆ ತುತ್ತಾಗಿ ಬಲರಾಮ ಆನೆ ಮೃತಪಟ್ಟಿತ್ತು. ನಾಗರಹೊಳೆ ಉದ್ಯಾನವನದ ಹುಣಸೂರು ರೇಂಜ್ ವ್ಯಾಪ್ತಿಯ … Continued

ಹಿಂಸಾಚಾರ ಪೀಡಿತ ಮಣಿಪುರದಿಂದ ಕೋಲ್ಕತ್ತಾಕ್ಕೆ ಪಯಣಿಸಲು ₹ 30,000ದ ವರೆಗೆ ಏರಿದ ವಿಮಾನ ಟಿಕೆಟ್‌ ದರ

ನವದೆಹಲಿ : ಮಣಿಪುರದ ಹಿಂಸಾಚಾರ ನಡುವೆ ಇಂಫಾಲ-ಕೋಲ್ಕತ್ತಾ ಮಾರ್ಗದ ವಿಮಾನ ಟಿಕೆಟ್ ದರವು ಸಾಮಾನ್ಯ ದರಕ್ಕಿಂತ ಸುಮಾರು 5-6 ಪಟ್ಟು ಏರಿಕೆಯಾಗಿದ್ದು, ಪ್ರತಿ ಟಿಕೆಟ್‌ಗೆ ₹ 20,000- 30,000ಕ್ಕೆ ತಲುಪಿದೆ ಎಂದು ವರದಿಯಾಗಿದೆ. ಇಂಡಿಯನ್ ಅಸೋಸಿಯೇಷನ್ ಆಫ್ ಟೂರ್ ಆಪರೇಟರ್ಸ್, ಪಶ್ಚಿಮ ಬಂಗಾಳ ಚಾಪ್ಟರ್‌ನ ಅಧ್ಯಕ್ಷ ದೇಬಜಿತ್ ದತ್ತಾ ಅವರು, “ಮಣಿಪುರದ ಪರಿಸ್ಥಿತಿಯು ಉದ್ವಿಗ್ನವಾಗಿರುವುದರಿಂದ ಮತ್ತು … Continued

ಶಾಂತಿಯುತ ಚುನಾವಣೆಗೆ ರಾಜ್ಯಾದ್ಯಂತ 1.56 ಲಕ್ಷ ಪೊಲೀಸರ ನಿಯೋಜನೆ

ಬೆಂಗಳೂರು: ಮೇ 10ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಯ ಮತದಾನಕ್ಕೆ ಒಂದು ದಿನ ಬಾಕಿ ಇದ್ದು ಈ ಹಿನ್ನೆಲೆಯಲ್ಲಿ ಮತದಾನಕ್ಕೆ ಭಾರಿ ಭದ್ರತೆ ಕೈಗೊಳ್ಳಲಾಗಿದೆ. ಮತದಾನ ಪ್ರಕ್ರಿಯೆಗಾಗಿ ರಾಜ್ಯದಲ್ಲಿ ಒಟ್ಟು  1.56 ಲಕ್ಷ ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ಚುನಾವಣೆ ಹಿನ್ನೆಲೆಯಲ್ಲಿ ಬಿಗಿ ಪೊಲೀಸ್‌ ಬಂದೋಬಸ್ತ್​ ಮಾಡಲಾಗಿದೆ. ಚುನಾವಣೆ ಭದ್ರತೆಗೆ ಬೇಕಾದ ಎಲ್ಲ ರೀತಿಯ ಸಿದ್ಧತೆ … Continued

‘ದಿ ಕೇರಳ ಸ್ಟೋರಿ’ ಸಿನೆಮಾ ನಿಷೇಧಕ್ಕೆ ಮುಂದಾದ ಪಶ್ಚಿಮ ಬಂಗಾಳ

ಕೋಲ್ಕತ್ತಾ: ವಿವಾದಾತ್ಮಕ ಚಿತ್ರ “ದಿ ಕೇರಳ ಸ್ಟೋರಿ”ಯನ್ನು ಪಶ್ಚಿಮ ಬಂಗಾಳದಲ್ಲಿ ನಿಷೇಧಿಸಲಾಗುವುದು ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಅವರು ಈ ಸಿನೆಮಾ ಅಶಾಂತಿಯನ್ನು ಉಂಟುಮಾಡಬಹುದು ಎಂದು ವಾದಿಸಿದ್ದಾರೆ. “ಕಾಶ್ಮೀರ ಫೈಲ್‌ಗಳ ಮಾದರಿಯಲ್ಲಿ ಚಿತ್ರಕ್ಕೆ ಬಿಜೆಪಿ ಹಣ ನೀಡುತ್ತಿದೆ” ಎಂದು ಅವರು ಆರೋಪಿಸಿದ್ದಾರೆ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇಂದು, ಸೋಮವಾರ ರಾಜ್ಯ ಸಚಿವಾಲಯದಲ್ಲಿ ಚಲನಚಿತ್ರವನ್ನು ನಿಷೇಧಿಸುವ … Continued

ಎಸ್ಸೆಸ್ಸೆಲ್ಸಿ ಪರೀಕ್ಷೆ : ಧಾರವಾಡದ ಜೆಎಸ್‌ಎಸ್‌ ಶ್ರೀ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ನೂರಕ್ಕೆ 100 ಫಲಿತಾಂಶ, ಸಾಚಿ ಹೊಂಗಲಮಠ ಧಾರವಾಡ ಜಿಲ್ಲೆಗೆ ದ್ವಿತೀಯ

ಧಾರವಾಡ : ಧಾರವಾಡದ ವಿದ್ಯಾಗಿರಿಯ ಜೆ.ಎಸ್.ಎಸ್ ಶ್ರೀ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ 2022-23 ನೇ ಸಾಲಿನ ೧೦ ನೇ ತರಗತಿ ಫಲಿತಾಂಶವು ೧೦೦ ಕ್ಕೆ ೧೦೦ ರಷ್ಟಾಗಿದ್ದು, ವಿದ್ಯಾರ್ಥಿಗಳು ಉತ್ತಮ ಸಾಧನೆಗೈದು ಶಾಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ಸಾಚಿ ಹೊಂಗಲ್‌ಮಠ ೬೨೦/೬೨೫ (೯೯.೨%) ಅಂಕಗಳೊಂದಿಗೆ ಜಿಲ್ಲೆಗೆ ದ್ವಿತೀಯ ಸ್ಥಾನ ಹಾಗೂ ಶಾಲೆಗೆ ಪ್ರಥಮ ಸ್ಥಾನ ಗಳಿಸಿರುತ್ತಾರೆ. … Continued

ಕುಮಟಾ: ಎಸ್ಸೆಸ್ಸೆಲ್ಸಿಯಲ್ಲಿ ರಾಜ್ಯಮಟ್ಟದ 8 ರ‍್ಯಾಂಕ್‌ಗಳೊಂದಿಗೆ ನೂರಕ್ಕೆ ನೂರು ಸಾಧನೆ ಮಾಡಿದ ಕೊಂಕಣ ಎಜ್ಯುಕೇಶನ್‌ ಪ್ರೌಢಶಾಲೆ

ಕುಮಟಾ: ಸೋಮವಾರ ಪ್ರಕಟವಾದ 2022-23ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶದಲ್ಲಿ ಕುಮಟಾದ ಕೊಂಕಣ ಎಜ್ಯುಕೇಶನ್‌ ಟ್ರಸ್ಟ್‌ನ ಸಿವಿಎಸ್‌ಕೆ ಪ್ರೌಢಶಾಲೆಯು ನೂರಕ್ಕೆ ನೂರು ಫಲಿತಾಂಶ ಪಡೆದಿದೆ. ರಾಜ್ಯಕ್ಕೆ ಚತುರ್ಥ ಸ್ಥಾನ ಪಡೆದು, ರಾಜ್ಯ ಮಟ್ಟದಲ್ಲಿ ರ‍್ಯಾಂಕ್‌ ಗಳಿಸುವ ಪರಂಪರೆಯನ್ನು ಮುಂದುವರೆಸಿದೆ. ಪರೀಕ್ಷೆಗೆ ಕುಳಿತ 139 ವಿದ್ಯಾರ್ಥಿಗಳೂ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿದ್ದು, 8 ವಿದ್ಯಾರ್ಥಿಗಳು ರಾಜ್ಯಮಟ್ಟದ ಟಾಪ್‌-10 ರ‍್ಯಾಂಕ್‌ … Continued

ತಿಹಾರ್ ಜೈಲಿನೊಳಗೆ ಗ್ಯಾಂಗ್‌ಸ್ಟರ್ ಹತ್ಯೆ ಪ್ರಕರಣ : ತಮಿಳುನಾಡಿನ 7 ಪೊಲೀಸರ ಅಮಾನತು-ವರದಿ

ನವದೆಹಲಿ: ಮೇ 2 ರಂದು ತಿಹಾರ ಜೈಲಿನೊಳಗೆ ವಿರೋಧಿ ಗ್ಯಾಂಗ್‌ ಗ್ಯಾಂಗ್‌ಸ್ಟರ್ ತಿಲ್ಲು ತಾಜ್‌ಪುರಿಯ ಹತ್ಯೆಯ ಸಂದರ್ಭದಲ್ಲಿ ತಿಹಾರ್ ಜೈಲಿನಲ್ಲಿ ಕರ್ತವ್ಯದಲ್ಲಿದ್ದ ತಮಿಳುನಾಡು ವಿಶೇಷ ಪೊಲೀಸ್ (ಟಿಎನ್‌ಎಸ್‌ಪಿ) ನ ಏಳು ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ. ಕೊಲೆ ನಡೆದಾಗ ಏನೂ ಮಾಡದೆ ಸುಮ್ಮನೆ ನಿಂತಿದ್ದರು ಎಂಬ ಕಾರಣಕ್ಕೆ ಅವರನ್ನು ತಮಿಳುನಾಡಿಗೆ ವಾಪಸ್ ಕಳುಹಿಸಲಾಗಿತ್ತು. ಎನ್‌ಡಿಟಿವಿ ಪ್ರಕಾರ, ದೆಹಲಿ … Continued

ಎಸ್‌ಎಸ್‌ಎಲ್‌ಸಿ ಪರೀಕ್ಷೆ : ಹುಬ್ಬಳ್ಳಿಯ ಶಾಂತಿನಿಕೇತನ ಆಂಗ್ಲ ಮಾಧ್ಯಮ ಶಾಲೆ ಫಲಿತಾಂಶ ನೂರಕ್ಕೆ 100

ಹುಬ್ಬಳ್ಳಿ: ನಗರದ ಘಂಟಿಕೇರಿಯ ಶಾಂತಿನಿಕೇತನ ಆಂಗ್ಲ ಮಾಧ್ಯಮ ಶಾಲೆಯು ಈ ವರ್ಷದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ನೂರಕ್ಕೆ 100 ಫಲಿತಾಂಶ ಪಡೆಯುವ ಮೂಲಕ ಅತ್ಯುತ್ತಮ ಸಾಧನೆ ಮಾಡಿದೆ. ಪರೀಕ್ಷೆಗೆ ಕುಳಿತ 86 ವಿದ್ಯಾರ್ಥಿಗಳಲ್ಲಿ 43 ವಿದ್ಯಾರ್ಥಿಗಳು ಶೇ.85ಕ್ಕಿಂತ ಹೆಚ್ಚಿನ ಅಂಕ ಪಡೆದಿದ್ದಾರೆ. ಅದರಲ್ಲಿ 23 ವಿದ್ಯಾರ್ಥಿಗಳು ಶೇ.90ಕ್ಕಿಂತ ಹೆಚ್ಚಿನ ಅಂಕಗಳನ್ನು ಪಡೆದಿದ್ದಾರೆ. 43 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ … Continued