ಎಸ್ಎಸ್ಎಲ್‌‌ಸಿಯಲ್ಲಿ ಫೇಲ್ ಆದ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆಗೆ ನೋಂದಾಯಿಸಲು ಮೇ15ರ ವರೆಗೆ ಅವಕಾಶ

posted in: ರಾಜ್ಯ | 0

ಬೆಂಗಳೂರು: ರಾಜ್ಯದ ಈ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಇಂದು ಸೋಮವಾರ (ಮೇ ೮) ಪ್ರಕಟವಾಗಿದ್ದು, ಶೇ. 83.8 ಮಂದಿ ಉತ್ತೀರ್ಣರಾಗಿದ್ದಾರೆ.
ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆ ನೋಂದಣಿ ಮಾಡಿಕೊಳ್ಳುವ ವಿದ್ಯಾರ್ಥಿಗಳಿಗೆ ಇಂದಿನಿಂದಲೇ (ಮೇ 08 ರಿಂದ) ನೋಂದಣಿ ಆರಂಭವಾಗಿದ್ದು, ಮೇ 15ರ ವರೆಗೆ ಅವಕಾಶ ನೀಡಲಾಗಿದೆ. ಅಲ್ಲದೆ, ಮರುಮೌಲ್ಯ ಮಾಪನ ಮಾಡಲು ಮೇ 15 ರಿಂದ ಮೇ 21 ರ ವರೆಗೆ ಅವಕಾಶ ನೀಡಲಾಗಿದೆ. ಹಾಗೂ ಎಸ್ಎಸ್ಎಲ್‌ಸಿ ವಿದ್ಯಾರ್ಥಿಗಳು ಉತ್ತರ ಪತ್ರಿಕೆ ಫೋಟೋಕಾಪಿ ಪಡೆಯಲು ಮೇ 08 ರಿಂದ ಮೇ 14ರ ವರೆಗೆ ಅವಕಾಶವಿದೆ.
ಈ ಬಾರಿ 8,35,102 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಅವರಲ್ಲಿ 7,00,619 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. 59,246 ವಿದ್ಯಾರ್ಥಿಗಳು ಗ್ರೇಸ್ ಮಾರ್ಕ್ ಪಡೆದು ಉತ್ತೀರ್ಣರಾಗಿದ್ದಾರೆ. ಫಲಿತಾಂಶದಲ್ಲಿ ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ನಾಲ್ಕು ಮಂದಿ ವಿದ್ಯಾರ್ಥಿಗಳು 625ಕ್ಕೆ 625 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. ಫಲಿತಾಂಶದಲ್ಲಿ ಚಿತ್ರದುರ್ಗ ಜಿಲ್ಲೆ (ಶೇ.96.8) ಸ್ಥಾನ ಪಡೆದಿದೆ. ಮಂಡ್ಯ ಜಿಲ್ಲೆ ಎರಡನೇ ಸ್ಥಾನ (96.74) ಹಾಗೂ ಮೂರನೇ ಸ್ಥಾನ ಹಾಸನ ಜಿಲ್ಲೆ (96.68) ಮೂರನೇ ಸ್ಥಾನ ಪಡೆದಿದೆ.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಇಂದಿನ ಪ್ರಮುಖ ಸುದ್ದಿ :-   ಗೃಹಲಕ್ಷ್ಮೀ ಯೋಜನೆಯ ಅರ್ಜಿ ನಮೂನೆ ಬಿಡುಗಡೆ : 2000 ರೂ. ಪಡೆಯಲು ಯಾವ್ಯಾವ ದಾಖಲೆ ಕೊಡಬೇಕು? ಇಲ್ಲಿದೆ ಮಾಹಿತಿ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

0 / 5. ಒಟ್ಟು ವೋಟುಗಳು 0

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement